ಹೊಸ ಆದಾಯ ತೆರಿಗೆ ಸ್ಲ್ಯಾಬ್‌ಗಳು: ತೆರಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದ ನಿರ್ಮಲಾ ಸೀತಾರಾಮನ್, 12ಲಕ್ಷದವರೆಗೆ ತೆರಿಗೆ ವಿನಾಯಿತಿ

New Income Tax Slabs 2025 -26: ಸತತ ಎಂಟನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಸ್ಲ್ಯಾಬ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದು ತೆರಿಗೆದಾರರು ಮತ್ತು ಮಧ್ಯಮವರ್ಗಕ್ಕೆ ಬಂಪರ್ ಗುಡ್ ನ್ಯೂಸ್ ನೀಡಿದ್ದಾರೆ. 

Written by - Yashaswini V | Last Updated : Feb 1, 2025, 01:31 PM IST
  • ತೆರಿಗೆದಾರರು ಮತ್ತು ಮಧ್ಯಮ ವರ್ಗದವರಿಗೆ ಭರ್ಜರಿ ಗಿಫ್ಟ್
  • 12ಲಕ್ಷದವರೆಗಿನ ಆದಾಯದ ಮೇಲೆ ತೆರಿಗೆ ವಿನಾಯಿತಿ
  • ಮುಂದಿನ ವಾರ ಹೊಸ ತೆರಿಗೆ ನೀತಿಯನ್ನು ಘೋಷಣೆ
ಹೊಸ ಆದಾಯ ತೆರಿಗೆ ಸ್ಲ್ಯಾಬ್‌ಗಳು: ತೆರಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದ ನಿರ್ಮಲಾ ಸೀತಾರಾಮನ್,  12ಲಕ್ಷದವರೆಗೆ ತೆರಿಗೆ ವಿನಾಯಿತಿ  title=

New Income Tax Slabs Budget 2025: ಮೋದಿ 3.o ಸರ್ಕಾರದಲ್ಲಿ ಸತತವಾಗಿ 8ನೇ ಬಜೆಟ್ ಮಂಡಿಸುತ್ತಿರುವ ಹಣಸಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯಲ್ಲಿ ಹೊಸ ಇತಿಹಾಸವನ್ನೆ ನಿರ್ಮಿಸಿದ್ದಾರೆ. ತಮ್ಮ ಬಜೆಟ್ ನಲ್ಲಿ ತೆರಿಗೆದಾರರು ಮತ್ತು ಮಧ್ಯಮ ವರ್ಗದವರಿಗೆ ಭರ್ಜರಿ ಗಿಫ್ಟ್ ನೀಡಿರುವ ನಿರ್ಮಲಾ ಸೀತಾರಾಮನ್ 12 ಲಕ್ಷದವರೆಗಿನ ಆದಾಯದ ಮೇಲೆ ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದಾರೆ. 

ಕೇಂದ್ರ ಬಜೆಟ್ 2025ರಲ್ಲಿ  ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಗಳಲ್ಲಿ ಅನುಕೂಲಕರ ಬದಲಾವಣೆಗಳನ್ನು ನಿರೀಕ್ಷಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತೆರಿಗೆದಾರರಿಗಾಗಿ ಮುಂದಿನ ವಾರ ಹೊಸ ತೆರಿಗೆ ನೀತಿಯನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.  

12 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆಯನ್ನು ಪಾವತಿಸುವಂತಿಲ್ಲ: 
ಹೊಸ ಆದಾಯ ತೆರಿಗೆ ಪದ್ಧತಿಯಲ್ಲಿ 12 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಪಾವತಿಸುವಂತಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ- Budget 2025 Live Updates: ಹೊಸ ಆದಾಯ ತೆರಿಗೆ ಮಸೂದೆ ಮಂಡನೆಗೆ ನಿರ್ಧಾರ,  KYC ಸೇವೆಗಳ ಮಹತ್ವದ ಬದಲಾವಣೆ 

ಹೊಸ ತೆರಿಗೆ ಸ್ಲ್ಯಾಬ್‌ಗಳು ಕೆಳಕಂಡಂತಿದೆ: 
₹ 4 ಲಕ್ಷದವರೆಗಿನ ಆದಾಯ - ಶೂನ್ಯ ತೆರಿಗೆ 
₹ 4 ಲಕ್ಷದಿಂದ ₹ 8 ಲಕ್ಷ – 5% ತೆರಿಗೆ 
₹ 8 ಲಕ್ಷದಿಂದ ₹ 12 ಲಕ್ಷ – 10% ತೆರಿಗೆ 
₹ 12 ಲಕ್ಷದಿಂದ ₹ 16 ಲಕ್ಷ – 15% ತೆರಿಗೆ 
₹ 16 ಲಕ್ಷದಿಂದ ₹ 20 ಲಕ್ಷ – 20% ತೆರಿಗೆ 
₹ 20 ಲಕ್ಷದಿಂದ ₹ 24 ಲಕ್ಷ- 25% ತೆರಿಗೆ 
₹ 24 ಲಕ್ಷಕ್ಕಿಂತ ಹೆಚ್ಚು - 30% ತೆರಿಗೆ 

ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ. ಎಲ್ಲಾ ತೆರಿಗೆದಾರರ ಆದಾಯವನು ಗರಿಷ್ಠಗೊಳಿಸಲು ಬಹು ತೆರಿಗೆ ಸುಧಾರಣೆಗಳನ್ನು ಪರಿಚಯಿಸಲು ನಿರ್ಧರಿಸಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದು ಹೆಚ್ಚು ಸರಳವಾಗಿರಲಿದೆ ಎಂದು ವಿತ್ತ ಸಚಿವರು ಭರವಸೆ ನೀಡಿದ್ದಾರೆ. 

ಇದನ್ನೂ ಓದಿ- Union Budget 2025: ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕೇಂದ್ರ.. ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?    

64ವರ್ಷಗಳಷ್ಟು ಹಳೆಯದಾದ ಆದಾಯ್ ತೆರಿಗೆ ಕಾಯಿದೆ, 1961ರ ಬದಲಿಗೆ ಹೊಸ ಆದಾಯ ತೆರಿಗೆ ಕಾಯ್ದೆ ಬರಲಿದ್ದು, ಇದು ಹೆಚ್ಚು ಸರಳವಾಗಿರಲಿದ್ದು, ತೆರಿಗೆದಾರರಿಗೆ ಹೆಚ್ಚಿನ ಪರಿಹಾರ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News