Edible Oil Price Cut: ಶ್ರೀಸಾಮಾನ್ಯರಿಗೊಂದು ಭಾರಿ ಸಂತಸದ ಸುದ್ದಿ, ಅಡುಗೆ ಎಣ್ಣೆ ಬೆಲೆಯಲ್ಲಿ ಲೀಟರ್ ಗೆ ರೂ.30 ಇಳಿಕೆ

Edible Oil Price Cut: ಫಾರ್ಚ್ಯೂನ್ ಬ್ರಾಂಡ್ ಅಡಿ ತನ್ನ ಸರಕುಗಳನ್ನು ಮಾರಾಟ ಮಾಡುವ ಕಂಪನಿ ಅಡಾನಿ ವಿಲ್ಮರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖಾದ್ಯ ತೈಲ ಬೆಲೆ ಇಳಿಕೆಯಾದ ಕಾರಣ ತನ್ನ ಕಂಪನಿಯ ಬ್ರಾಂಡ್ ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ ಮಾಡುವುದಾಗಿ ಘೋಷಿಸಿದೆ.

Written by - Nitin Tabib | Last Updated : Jul 18, 2022, 03:31 PM IST
  • ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸತತ ಪ್ರಯತ್ನಗಳ ಬಳಿಕ ಖಾದ್ಯ ತೈಲದ ಬೆಳೆಗಳು ಇದೀಗ ಕಡಿಮೆಯಾಗಲಾರಂಭಿಸಿವೆ.
  • ಈ ಹಿಂದೆಯೂ ಕೂಡ ತೈಲ ಕಂಪನಿಗಳು ಬೆಲೆ ಇಳಿಕೆ ಮಾಡುವ ಘೋಷಣೆ ಮಾಡಿದ್ದವು.
  • ಅಂತಾರಾಷ್ಟ್ರೀಯ ಮಟ್ಟದಲ್ಲಿ ಖಾದ್ಯ ತೈಲ ಬೆಲೆ ಇಳಿಕೆಯಾದ ನಂತರ ತನ್ನ ಉತ್ಪನ್ನಗಳ ದರಗಳನ್ನು ಕಡಿಮೆ ಮಾಡುವುದಾಗಿ ಅಡಾನಿ ವಿಲ್ಮರ್ ಹೇಳಿದೆ.
Edible Oil Price Cut: ಶ್ರೀಸಾಮಾನ್ಯರಿಗೊಂದು ಭಾರಿ ಸಂತಸದ ಸುದ್ದಿ, ಅಡುಗೆ ಎಣ್ಣೆ ಬೆಲೆಯಲ್ಲಿ ಲೀಟರ್ ಗೆ ರೂ.30 ಇಳಿಕೆ title=
Edible Oil Price Cut

Edible Oil Price Cut: ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸತತ ಪ್ರಯತ್ನಗಳ ಬಳಿಕ ಖಾದ್ಯ ತೈಲದ ಬೆಳೆಗಳು ಇದೀಗ ಕಡಿಮೆಯಾಗಲಾರಂಭಿಸಿವೆ. ಈ ಹಿಂದೆಯೂ ಕೂಡ ತೈಲ ಕಂಪನಿಗಳು ಬೆಲೆ ಇಳಿಕೆ ಮಾಡುವ ಘೋಷಣೆ ಮಾಡಿದ್ದವು. ಇದೀಗ ಮತ್ತೊಮ್ಮೆ ಫಾರ್ಚೂನ್ ಬ್ರಾಂಡ್‌ನಲ್ಲಿ ತನ್ನ ಉತ್ಪನ್ನವನ್ನು ಮಾರಾಟ ಮಾಡುವ ಖಾದ್ಯ ತೈಲ ಕಂಪನಿ ಅಡಾಣಿ ವಿಲ್ಮರ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖಾದ್ಯ ತೈಲ ಬೆಲೆ ಇಳಿಕೆಯಾದ ನಂತರ ತನ್ನ ಉತ್ಪನ್ನಗಳ ದರಗಳನ್ನು ಕಡಿಮೆ ಮಾಡುವುದಾಗಿ ಹೇಳಿದೆ. ಖಾದ್ಯ ತೈಲದ ಬೆಲೆಯನ್ನು ಲೀಟರ್‌ಗೆ 30 ರೂ.ವರೆಗೆ ಕಡಿತಗೊಳಿಸುವುದಾಗಿ ಕಂಪನಿಯು ಘೋಷಣೆ ಮಾಡಿದೆ.

ಸೋಯಾಬೀನ್ ಎಣ್ಣೆಯ ಬೆಲೆಯಲ್ಲಿ ಭಾರಿ ಇಳಿಕೆ
ಸೋಯಾಬೀನ್ ಎಣ್ಣೆಯ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಹೊಸ ಬೆಲೆಗಳೊಂದಿಗೆ ಸರಕುಗಳು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಬರಲಿವೆ. ಈ ಹಿಂದೆ ಧಾರಾ ಬ್ರಾಂಡ್‌ನಲ್ಲಿ ಖಾದ್ಯ ತೈಲವನ್ನು ಮಾರಾಟ ಮಾಡುವ ಮದರ್ ಡೈರಿ ಸೋಯಾಬೀನ್ ಮತ್ತು ರೈಸ್ ಬ್ರಾನ್ ಎಣ್ಣೆಯ ಬೆಲೆಯನ್ನು ಲೀಟರ್‌ಗೆ 14 ರೂ.ಗಳಷ್ಟು ಇಳಿಕೆ ಮಾಡಿತ್ತು.  ಖಾದ್ಯ ತೈಲದ ಬೆಲೆಗಳ ಬಗ್ಗೆ ಚರ್ಚಿಸಲು ಆಹಾರ ಸಚಿವಾಲಯವು ಜುಲೈ 6 ರಂದು ಸಭೆಯನ್ನು ನಡೆಸಿತ್ತು. ಈ ಸಂದರ್ಭದಲ್ಲಿ, ಜಾಗತಿಕವಾಗಿ ಬೆಲೆ ಕುಸಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಎಲ್ಲಾ ಖಾದ್ಯ ತೈಲ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು.

ಗ್ರಾಹಕರಿಗೆ ದರ ಇಳಿಕೆಯ ಲಾಭ ಸಿಗಲಿದೆ
"ಜಾಗತಿಕವಾಗಿ ಬೆಲೆ ಇಳಿಕೆ ಮತ್ತು ಖಾದ್ಯ ತೈಲ ಬೆಲೆಯಲ್ಲಿನ ಇಳಿಕೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಸರ್ಕಾರದ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು, ಅಡಾಣಿ ವಿಲ್ಮಾರ್ ಖಾದ್ಯ ತೈಲದ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಿದೆ" ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ತಿಂಗಳೂ ಕೂಡ ಬೆಲೆ ಇಳಿಕೆಯಾಗಿತ್ತು ಎಂಬುದು ಇಲ್ಲಿ ಗಮನಾರ್ಹ.

ಇದನ್ನೂ ಓದಿ-Mahindra Scorpioಯಿಂದ Boleroವರೆಗೆ 1.79 ಲಕ್ಷ ರಿಯಾಯಿತಿ ದರದಲ್ಲಿ ಸಿಗುತ್ತಿವೆ ಈ ಕಾರುಗಳು

ಪ್ರತಿ ಲೀಟರ್ ಸೋಯಾಬೀನ್ ಎಣ್ಣೆಗೆ 165 ರೂ
ಫಾರ್ಚೂನ್ ಸೋಯಾಬೀನ್ ತೈಲ ಬೆಲೆ ಲೀಟರ್‌ಗೆ 195 ರೂ.ನಿಂದ 165 ರೂ.ಗೆ ಇಳಿಕೆಯಾಗಿದೆ. ಸೂರ್ಯಕಾಂತಿ ಎಣ್ಣೆಯ ಬೆಲೆ ಲೀಟರ್‌ಗೆ 210 ರೂ.ನಿಂದ 199 ರೂ.ಗೆ ಇಳಿಕೆಯಾಗಿದೆ. ಸಾಸಿವೆ ಎಣ್ಣೆಯ ಗರಿಷ್ಠ ಚಿಲ್ಲರೆ ಬೆಲೆ ಲೀಟರ್‌ಗೆ 195 ರೂ.ನಿಂದ 190 ರೂ.ಗೆ ಇಳಿಕೆಯಾಗಿದೆ.

ಇದನ್ನೂ ಓದಿ-ITR Filing: ಆದಾಯ ತೆರಿಗೆ ರಿಟರ್ನ್‌ನಲ್ಲಿ ಪೂರ್ಣ ಹಣ ಬಂದಿಲ್ಲವೇ?

ಫಾರ್ಚೂನ್ ರೈಸ್ ಬ್ರ್ಯಾನ್ ತೈಲ ಬೆಲೆ ಲೀಟರ್‌ಗೆ ರೂ. 225  ರಿಂದ ರೂ.210 ರೂ.ಗಳಿಗೆ ಇಳಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಅಡಾನಿ ವಿಲ್ಮಾರ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಂಗ್ಶು ಮಲಿಕ್, "ನಾವು ಜಾಗತಿಕವಾಗಿ ಗ್ರಾಹಕರಿಗೆ ಬೆಲೆ ಇಳಿಕೆಯ ಲಾಭವನ್ನು ರವಾನಿಸಿದ್ದೇವೆ ಮತ್ತು ಹೊಸ ಸರಕುಗಳು ಶೀಘ್ರದಲ್ಲೇ ಮಾರುಕಟ್ಟೆಯನ್ನು ತಲುಪಲಿವೆ" ಎಂದು ಹೇಳಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News