ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ʼದಾದಾʼ ಪಾರು!! ಈಗ ಹೇಗಿದ್ದಾರೆ ಗೊತ್ತಾ?

Sourav Ganguly Car Accident: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಕಾರು ಗುರುವಾರ ಪಶ್ಚಿಮ ಬಂಗಾಳದ ಬುರ್ದ್ವಾನ್​ಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದೆ. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ರೇಂಜ್ ರೋವರ್ ಕಾರಿಗೆ ಲಾರಿ ಡಿಕ್ಕಿ ಹೊಡೆದು, 

Written by - Puttaraj K Alur | Last Updated : Feb 21, 2025, 03:52 PM IST
  • ಟೀಂ ಇಂಡಿಯಾದ ಮ್ಯಾಜಿ ಕ್ಯಾಪ್ಟನ್‌ ಸೌರವ್ ಗಂಗೂಲಿ ಕಾರು ಭೀಕರ ಅಪಘಾತ
  • ಕೂದಲೆಳೆ ಅಂತರದಲ್ಲಿ ಪಾರಾದ ಬಿಸಿಸಿಐನ ಮಾಜಿ ಅಧ್ಯಕ್ಷ ʼದಾದಾʼ
  • ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇನ ದಂತನ್‌ಪುರ ಪ್ರದೇಶದಲ್ಲಿ ಘಟನೆ
ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ʼದಾದಾʼ ಪಾರು!! ಈಗ ಹೇಗಿದ್ದಾರೆ ಗೊತ್ತಾ? title=
ಸೌರವ್‌ ಗಂಗೂಲಿ ಕಾರು ಅಪಘಾತ!

Sourav Ganguly Car Accident: ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿದೆ. ಘಟನೆಯಲ್ಲಿ ʼದಾದಾʼ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಗುರುವಾರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಗಂಗೂಲಿ ಅವರ ರೇಂಜ್ ರೋವರ್ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇನ ದಂತನ್‌ಪುರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ನಂತರ ಬೆಂಗಾವಲು ಪಡೆ ವಾನಹಗಳೂ ಡಿಕ್ಕಿಯಾಗಿವೆ.

ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಗಂಗೂಲಿಯವರ ಚಾಲಕ ಕಾರಿನ ನಿಯಂತ್ರಣ ಪಡೆಯಲು ತಕ್ಷಣವೇ ಬ್ರೇಕ್ ಹಾಕಿದ್ದಾನೆ. ಪರಿಣಾಮ ಬೆಂಗಾವಲು ಪಡೆಯ ಎಲ್ಲಾ ವಾಹನಗಳು ಒಂದರ ನಂತರ ಒಂದರಂತೆ ಗಂಗೂಲಿಯವರ ಕಾರಿಗೆ ಡಿಕ್ಕಿ ಹೊಡೆದಿವೆ. ಈ ಅಪಘಾತದಲ್ಲಿ ಗಂಗೂಲಿಯವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡಿವೆ. ವಾಹನಗಳಿಗೆ ಕೊಂಚ ಹಾನಿಯಾಗಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲಿ ಕಾದ ನಂತರ ಗಂಗೂಲಿ ಬೇರೆ ವಾಹನದಲ್ಲಿ ಸಮಾರಂಭಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: ಡಿವೋರ್ಸ್‌ ಬಳಿಕ ಈ ಖ್ಯಾತ ನಟಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ಶಿಖರ್‌ ಧವನ್!‌ ಬಹಿರಂಗವಾಗಿ ಸತ್ಯ ಒಪ್ಪಿಕೊಂಡ ಸ್ಟಾರ್‌ ಕ್ರಿಕೆಟರ್‌..

ಅಪಘಾತದ ನಂತರ ಗಂಗೂಲಿಯವರು ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲೇ ಇದ್ದರು. ನಂತರ ಅವರು ಬರ್ಧಮಾನ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು. ಈ ಅಹಿತಕರ ಘಟನೆಯ ಹೊರತಾಗಿಯೂ, ಗಂಗೂಲಿ ಸಂಯಮದಿಂದಿದ್ದರು. ಬುರ್ದ್ವಾನ್‌ನಲ್ಲಿ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಮತ್ತು ಗಣ್ಯರೊಂದಿಗೆ ಚರ್ಚೆ ನಡೆಸಿದರು. ಭಾರತೀಯ ಕ್ರಿಕೆಟ್‌ನ ಭವಿಷ್ಯದ ಬಗ್ಗೆ ಮಾತನಾಡಿದ ಅವರು, ತಮ್ಮ ವೃತ್ತಿಜೀವನದ ಪ್ರಮುಖ ಘಟನೆಗಳ ಬಗ್ಗೆ ಹಂಚಿಕೊಂಡರು.  

ಬಂಗಾಳ ತಂಡದಲ್ಲಿ ಇದೀಗ ಅನೇಕ ಪ್ರತಿಭಾವಂತ ಕ್ರಿಕೆಟಿಗರು ಬೆಳಕಿಗೆ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕರು ಭಾರತೀಯ ಕ್ರಿಕೆಟ್‌ಗೆ ಉತ್ತಮ ಕೊಡುಗೆ ನೀಡಲಿ ಎಂದು ಗಂಗೂಲಿ ಆಶಿಸಿದರು. ಬುರ್ದ್ವಾನ್‌ನಲ್ಲಿನ ಕಾರ್ಯಕ್ರಮ ಮುಗಿದ ನಂತರ ಅವರು ಕೋಲ್ಕತ್ತಾಗೆ ಮರಳಿದರು. ಟೀಂ ಇಂಡಿಯಾದ ನಾಯಕರಾಗಿ, ಬಿಸಿಸಿಐ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಗಂಗೂಲಿಯವರನ್ನ ಅಕ್ಟೋಬರ್ 2024ರಲ್ಲಿ ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್‌ನಲ್ಲಿ ಕ್ರಿಕೆಟ್ ನಿರ್ದೇಶಕರಾಗಿ ನೇಮಿಸಲಾಯಿತು. ಮಹಿಳಾ ಪ್ರೀಮಿಯರ್ ಲೀಗ್ (WPL)ನಲ್ಲಿ ದೆಹಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಸೇರಿದಂತೆ ಎಲ್ಲಾ ಕ್ರಿಕೆಟ್ ಉದ್ಯಮಗಳನ್ನು ಅವರು ಮೇಲ್ವಿಚಾರಣೆ ಮಾಡಿದ್ದಾರೆ.

ಇದನ್ನೂ ಓದಿ: ಡಿವೋರ್ಸ್ ಗೆ ಇದೇ ಮುಖ್ಯ ಕಾರಣ !ಕಳೆದ 18 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿತ್ತು ಎಂದು ನ್ಯಾಯಾಲಯಕ್ಕೆ ವಿವರಿಸಿದ ಧನಶ್ರೀ! ಸ್ಟಾರ್ ಜೋಡಿ ವಿಚ್ಛೇದನಕ್ಕೆ ಅಧಿಕೃತ ಮುದ್ರೆ ಒತ್ತಿದ ಕೋರ್ಟ್!

2025ರ WPL ಋತುವಿಗೂ ಮುಂಚಿತವಾಗಿ ಗಂಗೂಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. WPL ಹರಾಜಿನಿಂದ ಹೊಸ ಪ್ರತಿಭೆಗಳನ್ನು ಕರೆತಂದಿದ್ದಾರೆ. ಗಂಗೂಲಿ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, ತಂಡವನ್ನು ಚಾಂಪಿಯನ್‌ಶಿಪ್ ಯಶಸ್ಸಿನತ್ತ ಮುನ್ನಡೆಸುವ ಗುರಿಯನ್ನು ಹೊಂದಿದ್ದಾರೆ. ಪ್ರಸಕ್ತ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ಆಟಗಾರರಿಗೆ ಗಂಗೂಲಿ ಮಾರ್ಗದರ್ಶನ ಮತ್ತು ಕಾರ್ಯತಂತ್ರ ರೂಪಿಸುವಲ್ಲಿ ನೆರವಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News