Free Health Insurance: ಈ ರಾಜ್ಯದ ಜನರಿಗೆ 25 ಲಕ್ಷ ಮೊತ್ತದ ಉಚಿತ ಆರೋಗ್ಯ ವಿಮೆ ಘೊಷಿಸಿದ ಸರ್ಕಾರ!

Chiranjeevi Health Insurance Scheme: ನಿಮ್ಮ ವಾರ್ಷಿಕ ಆದಾಯ 8 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ನಿಮಗೆ ಸರ್ಕಾರವು ಉಚಿತವಾಗಿ ಆರೋಗ್ಯ ವಿಮೆ ನೀಡುತ್ತದೆ. ಇದರಡಿ ಎಲ್ಲಾ ವರ್ಗಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ವಿಮೆಯ ಪ್ರೀಮಿಯಂ ಮೊತ್ತವನ್ನು ಪಾವತಿಸುತ್ತದೆ.

Written by - Puttaraj K Alur | Last Updated : Aug 4, 2023, 04:12 PM IST
  • ರಾಜಸ್ಥಾನ ಸರ್ಕಾರವು ರಾಜ್ಯದ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ
  • ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಉಚಿತ ವಿಮೆ ಯೋಜನೆ
  • ಅಶೋಕ್ ಗೆಹ್ಲೋಟ್ ಸರ್ಕಾರದಿಂದ 25 ಲಕ್ಷ ರೂ. ಮೊತ್ತದ ಉಚಿತ ಆರೋಗ್ಯ ವಿಮೆ
Free Health Insurance: ಈ ರಾಜ್ಯದ ಜನರಿಗೆ 25 ಲಕ್ಷ ಮೊತ್ತದ ಉಚಿತ ಆರೋಗ್ಯ ವಿಮೆ ಘೊಷಿಸಿದ ಸರ್ಕಾರ! title=
ಚಿರಂಜೀವಿ ಆರೋಗ್ಯ ವಿಮಾ ಯೋಜನೆ

ಚಿರಂಜೀವಿ ಆರೋಗ್ಯ ವಿಮಾ ಯೋಜನೆ: ರಾಜಸ್ಥಾನ ಸರ್ಕಾರವು ರಾಜ್ಯದ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವವರಿಗೆ 25 ಲಕ್ಷ ರೂ. ಮೊತ್ತದ ಉಚಿತ ಆರೋಗ್ಯ ವಿಮೆಯನ್ನು ಸರ್ಕಾರ ಘೋಷಿಸಿದೆ. ಹೌದು, ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ನೀಡಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ‘ಚಿರಂಜೀವಿ ಆರೋಗ್ಯ ವಿಮಾ ಯೋಜನೆ' ಅಡಿಯಲ್ಲಿ ಉಚಿತ ಆರೋಗ್ಯ ವಿಮೆ ಘೋಷಿಸಿದ್ದಾರೆ. ಈ ಯೋಜನೆಯನ್ನು ಎಲ್ಲಾ ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವರ್ಗಗಳು) ಗೂ ವಿಸ್ತರಿಸುವುದಾಗಿ ಅವರು ಘೋಷಿಸಿದ್ದಾರೆ. ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವ ಜನರು ‘ಚಿರಂಜೀವಿ ಸ್ವಾಸ್ಥ್ಯ ಬಿಮಾ ಯೋಜನೆ’ಯ ಪ್ರೀಮಿಯಂನ್ನು ಪಾವತಿಸಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇದೇ ತಿಂಗಳಿನಲ್ಲಿ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ! ಬೆಂಗಳೂರಿನಿಂದಲೇ ಓಡಾಟ ನಡೆಸಲಿರುವ ರೈಲು

8 ಲಕ್ಷಕ್ಕಿಂತ ಕಡಿಮೆ ಆದಾಯದವರಿಗೆ ಪ್ರಯೋಜನ! 

ವಾರ್ಷಿಕ ಆದಾಯ 8 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇದ್ದರೆ ರಾಜಸ್ಥಾನ ಸರ್ಕಾರವು ಉಚಿತ ಆರೋಗ್ಯ ವಿಮೆಯನ್ನು ನೀಡುತ್ತದೆ. ಸಾಮಾನ್ಯ, ಇತರೆ ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲಾ ವರ್ಗಗಳ 8 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳಿಗೆ ಪ್ರೀಮಿಯಂ ಮೊತ್ತವನ್ನು ರಾಜ್ಯ ಸರ್ಕಾರವೇ ಪಾವತಿಸಲಿದೆ. ಮುಖ್ಯಮಂತ್ರಿ ನಿವಾಸದಲ್ಲಿ ಗೆಹ್ಲೋಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ.

ಹೆಚ್ಚುವರಿಯಾಗಿ 425 ಕೋಟಿ ರೂ. ಒದಗಿಸಿದೆ

ಇದಕ್ಕಾಗಿ ರಾಜ್ಯ ಸರ್ಕಾರವು 425 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಿದೆ ಎಂದು ಸಿಎಂ ಗೆಹ್ಲೋಟ್ ತಿಳಿಸಿದ್ದಾರೆ. ಇದೇ ವೇಳೆ 771 ಕೋಟಿ ರೂ.ಗಳ 249 ಕಾಮಗಾರಿಗಳನ್ನು ಆನ್‌ಲೈನ್‌ ಮೂಲಕ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಾಯಿತು. 10 ಚಿರಂಜೀವಿ ಜನನಿ ಎಕ್ಸ್‌ಪ್ರೆಸ್ ಆಂಬ್ಯುಲೆನ್ಸ್‌ಗಳು ಮತ್ತು 25 ಮೊಬೈಲ್ ಆಹಾರ ಪರೀಕ್ಷಾ ಆಂಬ್ಯುಲೆನ್ಸ್‌ಗಳಿಗೆ ಇದೇ ವೇಳೆ ಹಸಿರು ನಿಶಾನೆ ತೋರಿಸಿದರು.  

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ! ಹೊಸ ಸೂತ್ರದ ಆಧಾರದಲ್ಲಿ ವೇತನ ಪರಿಷ್ಕರಣೆ !

ಯೋಜನೆ ಏನು?

‘ಚಿರಂಜೀವಿ ಆರೋಗ್ಯ ವಿಮಾ ಯೋಜನೆ’ಯನ್ನು ರಾಜಸ್ಥಾನ ಸರ್ಕಾರವು 2021ರಲ್ಲಿ ಪ್ರಾರಂಭಿಸಿತು. ಹಿಂದಿನ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ನೀಡಲಾಗುತ್ತಿತ್ತು. ಇದರ ನಂತರ ಸಿಎಂ ಗೆಹ್ಲೋಟ್ ಅವರು 2022-23ರ ಆರ್ಥಿಕ ವರ್ಷದಲ್ಲಿ ಯೋಜನೆಯಡಿ 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದರು. ಇದೀಗ ಈ ಮೊತ್ತವನ್ನು 2023-24ಕ್ಕೆ 25 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

5 ಲಕ್ಷ ರೂ.ಗಳ ಅಪಘಾತ ವಿಮೆ

ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ.ಗಳ ಅಪಘಾತ ವಿಮೆ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬಗಳು ಕಪ್ಪು ಶಿಲೀಂಧ್ರ, ಕ್ಯಾನ್ಸರ್, ಪಾರ್ಶ್ವವಾಯು, ಹೃದಯ ಶಸ್ತ್ರಚಿಕಿತ್ಸೆ, ನರಶಸ್ತ್ರಚಿಕಿತ್ಸೆ, ಅಂಗಾಂಗ ಕಸಿ, ಕೋವಿಡ್ -19 ನಂತಹ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News