Gadkari Suggestion To Banks: ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಸರ್ಕಾರ ಮತ್ತು ಸ್ಟಾರ್ಟ್‌ಅಪ್‌ಗಳು ಹಲವು ರೀತಿಯಲ್ಲಿ ಕೆಲಸ ಮಾಡುತ್ತಿವೆ. ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುವ ಮತ್ತು ಖರೀದಿಸುವವರಿಗೆ ಹಲವು ರೀತಿಯ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಇದೀಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಫ್ಲೆಕ್ಸ್ ಇಂಧನ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ಸೇರಿದಂತೆ ಶುದ್ಧ ಇಂಧನ ವಾಹನಗಳನ್ನು ಖರೀದಿಸುವವರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ ಬ್ಯಾಂಕ್‌ಗಳನ್ನು ಕೋರಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಸಹಕಾರಿ ಬ್ಯಾಂಕ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು, 4-5 ವರ್ಷಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್‌ನಲ್ಲಿ ಚಲಿಸುವ ವಾಹನಗಳನ್ನು ಹಂತಹಂತವಾಗಿ ನಿಲ್ಲಿಸಬೇಕು ಎಂಬುದು ನನ್ನ ಕನಸಾಗಿದೆ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕ ಸಾರಿಗೆಗಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವುದರಿಂದ ಪ್ರಯಾಣಿಕರಿಗೆ ಆಗುವ ಪ್ರಯೋಜನಗಳ ಕುರಿತು ಮಾತನಾಡಿರುವ ನಿತಿನ್ ಗಡ್ಕರಿ, ನಾನ್-ಎಸಿ ಎಲೆಕ್ಟ್ರಿಕ್ ಬಸ್ ಅನ್ನು ಪ್ರತಿ ಕಿಲೋಮೀಟರ್‌ಗೆ 39 ರೂ. ವೆಚ್ಚದಲ್ಲಿ ಚಲಾಯಿಸಬಹುದು. ಆದರೆ ಎಸಿ ಎಲೆಕ್ಟ್ರಿಕ್ ಬಸ್‌ಗೆ ಪ್ರತಿ ಕಿ.ಮೀ.ಗೆ ರೂ.41 ವೆಚ್ಚ ತಗುಲುತ್ತದೆ ಎಂದು ಅವರು ಹೇಳಿದ್ದಾರೆ.
ಥಾಣೆ, ಕಲ್ಯಾಣ್‌ನಂತಹ ನಗರಗಳ ಎಲ್ಲಾ ಬಸ್‌ಗಳನ್ನು ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತಿಸುವಂತೆ ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ. ಇದರಿಂದ, ಪ್ರಯಾಣಿಕರ ಟಿಕೆಟ್ ದರವನ್ನು ಕೂಡ ಶೇ.30 ರಷ್ಟು ಕಡಿಮೆ ಮಾಡಬಹುದು ಎಂದು ಅವರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ-New Bike 2023: ಸದ್ದಿಲ್ಲದೇ ಮಾರುಕಟ್ಟೆಗೆ ಅತ್ಯಂತ ಅಗ್ಗದ 110ಸಿಸಿ ಬೈಕ್ ಬಿಡುಗಡೆ ಮಾಡಿದೆ ಈ ಭಾರತೀಯ ಕಂಪನಿ
“ಬಾಳ್ ಠಾಕ್ರೆ ಒಮ್ಮೆ ನನಗೆ ಅಕ್ರಿಲಿಕ್‌ನಲ್ಲಿ ಬರೆದ ಉಲ್ಲೇಖವನ್ನು ನೀಡಿದರು. ಕೆಲಸ ಮಾಡುವವರನ್ನು ನಾನು ಇಷ್ಟಪಡುತ್ತೇನೆ ಎಂದು ಹೇಳಿದರು. ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಾಮಾಣಿಕ ಜನರನ್ನು ನಾನು ಇಷ್ಟಪಡುತ್ತೇನೆ. ಅಪ್ರಾಮಾಣಿಕ ಮತ್ತು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವ ಜನರನ್ನು ನಾನು ಪ್ರಶಂಸಿಸಲು ಸಿದ್ಧನಿದ್ದೇನೆ. ನಿರ್ಧಾರಗಳನ್ನು ತೆಗೆದುಕೊಳ್ಳಲು ಇಷ್ಟಪಡದ ಜನರನ್ನು ನಾನು ದ್ವೇಷಿಸುತ್ತೇನೆ" ಎಂದು ಗಡ್ಕರಿ ಹೇಳಿದ್ದಾರೆ.
ಇದನ್ನೂ ಓದಿ-PF ಖಾತೆದಾರರಿಗೆ ಮಹತ್ವದ ಸೌಕರ್ಯ ಒದಗಿಸಿದ ಸರ್ಕಾರ, ಈ ರೀತಿ ಲಾಭ ಪಡೆಯಿರಿ
ಜನರಿಗೆ ಶುದ್ಧ ಇಂಧನ ವಾಹನಗಳು ಗಳಿಸುವ ಸಾಧನ ಎಂದು ಗಡ್ಕರಿ ಬಣ್ಣಿಸಿದ್ದಾರೆ. ಸಹಕಾರಿ ಬ್ಯಾಂಕ್‌ಗಳಲ್ಲಿನ ಠೇವಣಿಗಳಿಗಿಂತ ತಮ್ಮ ಸಚಿವಾಲಯ ನೀಡಿರುವ ಬಾಂಡ್‌ಗಳು ಉತ್ತಮ ಆದಾಯವನ್ನು ನೀಡುತ್ತಿವೆ ಎಂದು ಅವರು ಹೇಳಿದ್ದಾರೆ. ಇವುಗಳಲ್ಲಿ ನಿವೃತ್ತ ನೌಕರರು ಮತ್ತಿತರರು ಇವುಗಳಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.