ನವದೆಹಲಿ: ಚಿನ್ನದ ಬೆಲೆಯಲ್ಲಿ ಗುರುವಾರವೂ ಇಳಿಕೆ ಕಂಡುಬಂದಿದೆ. ಇದಲ್ಲದೇ ಇಂದು ಬುಲಿಯನ್ ಮಾರುಕಟ್ಟೆಯಲ್ಲಿ ಬೆಳ್ಳಿಯೂ ಅಗ್ಗವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ದೌರ್ಬಲ್ಯದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಗುರುವಾರ ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 61 ಸಾವಿರ ರೂ. ದಾಟಿದೆ. ಅದೇ ರೀತಿ ಬೆಳ್ಳಿಯ ಬೆಲೆ 76 ಸಾವಿರ ರೂ.ನ ಆಸುಪಾಸಿನಲ್ಲಿ ಕೊನೆಗೊಂಡಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಈ ಬಗ್ಗೆ ಮಾಹಿತಿ ನೀಡಿದೆ.
ಚಿನ್ನ ಬೆಳ್ಳಿ ಬೆಲೆ ಎಷ್ಟಿತ್ತು?: ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂ.ಗೆ 330 ರೂ. ಕುಸಿತ ಕಂಡಿದ್ದು, 61,370 ರೂ.ನಂತೆ ವಹಿವಾಟು ನಡೆಸುತ್ತಿದೆ. ಕಳೆದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂ.ಗೆ 61,700 ರೂ. ಇತ್ತು. ಇದಲ್ಲದೇ ಬೆಳ್ಳಿಯ ಬೆಲೆಯೂ ಪ್ರತಿ ಕೆಜಿಗೆ 1,650 ರೂ. ಇಳಿಕೆಯಾಗಿ 75,950 ರೂ.ಗೆ ತಲುಪಿದೆ.
ಇದನ್ನೂ ಓದಿ: Petrol ಪಂಪ್ ಬಿಸ್ನೆಸ್ ಆರಂಭಿಸಿ ಲಕ್ಷಾಂತರ ಗಳಿಕೆ ಮಾಡಿ, ಹೇಗೆ ಇಲ್ಲಿ ತಿಳಿದುಕೊಳ್ಳಿ!
ತಜ್ಞರ ಅಭಿಪ್ರಾಯವೇನು?: ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಮಾತನಾಡಿ, ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನದ ಬೆಲೆ 10 ಗ್ರಾಂ.ಗೆ 330 ರೂ. ಕುಸಿತ ಕಂಡಿದ್ದು, 61,370 ರೂ.ಗೆ ಇಳಿಕೆಯಾಗಿದೆ. ಸಾಗರೋತ್ತರ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್ ಚಿನ್ನ 2,026 ಡಾಲರ್‍ಗೆ ಕುಸಿದರೆ, ಬೆಳ್ಳಿ ಪ್ರತಿ ಔನ್ಸ್‍ಗೆ 25.10 ಡಾಲರ್‍ಗೆ ಇಳಿಕೆ ಕಂಡಿದೆ. ಅಮೆರಿಕದ ಹಣದುಬ್ಬರ ಅಂಕಿಅಂಶಗಳ ಆಗಮನದ ನಂತರ ಚಿನ್ನದಲ್ಲಿ ಚಂಚಲತೆ ಕಂಡುಬಂದಿದೆ. ಈ ಕಾರಣದಿಂದ ಏಷ್ಯಾದ ಮಾರುಕಟ್ಟೆಯಲ್ಲಿ ಗುರುವಾರ ಚಿನ್ನದ ಬೆಲೆ ಕುಸಿತ ಕಂಡಿದೆ ಎಂದು ಗಾಂಧಿ ಹೇಳಿದರು.
ದೀರ್ಘ ಕಾಲ ಚಿನ್ನದ ಬೆಲೆಯಲ್ಲಿ ಏರಿಳಿತ!: ಕಳೆದ ಕೆಲ ದಿನಗಳಿಂದ ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದೆ. ಫೆಬ್ರವರಿಯಲ್ಲಿ ಚಿನ್ನದ ದರ 10 ಗ್ರಾಂ.ಗೆ 55 ಸಾವಿರ ರೂ. ಇದ್ದರೆ, ದೀಪಾವಳಿಯಂದು ಚಿನ್ನದ ದರ 10 ಗ್ರಾಂ.ಗೆ 65 ಸಾವಿರ ರೂ. ಇತ್ತು. ಹೀಗೆ ಕಾಲಕಾಲಕ್ಕೆ ಚಿನ್ನದ ದರದಲ್ಲಿ ಏರಿಳಿತ ಕಂಡುಬರುತ್ತಿದೆ. ಇದೀಗ ಮದುವೆ ಸೀಸನ್ ಆಗಿರುವುದರಿಂದ ಚಿನ್ನದ ಬೆಲೆಯಲ್ಲಿ ಅಲ್ಪ ಕುಸಿತ ಕಂಡಿದೆ. ಇದು ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಇದನ್ನೂ ಓದಿ: Adani-Hindenburg ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಗೆ ವರದಿ ಸಲ್ಲಿಕೆ, ಮೇ 12 ಕ್ಕೆ ವಿಚಾರಣೆ
ಆ್ಯಪ್ ಮೂಲಕ ಶುದ್ಧತೆ ಪರಿಶೀಲಿಸಿ: ನೀವು ಕೂಡ ಮಾರುಕಟ್ಟೆಯಲ್ಲಿ ಚಿನ್ನ ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಖರೀದಿಸಿ. ಚಿನ್ನ ಶುದ್ಧತೆ ಪರಿಶೀಲಿಸಲು ನೀವು ಸರ್ಕಾರಿ ಅಪ್ಲಿಕೇಶನ್ ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ನೀವು ಚಿನ್ನದ ಶುದ್ಧತೆ ನಿಜವೇ ಅಥವಾ ನಕಲಿಯೇ ಎಂಬುದನ್ನು ಪರಿಶೀಲಿಸಬಹುದು. ಇದಲ್ಲದೇ ಈ ಆಪ್ ಮೂಲಕವೂ ನೀವು ದೂರು ನೀಡಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.