ಬೆಂಗಳೂರು : ಕುಟುಂಬದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಸುಕನ್ಯಾ ಸಮೃದ್ಧಿ ಯೋಜನೆಯಂಥಹ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದರೆ ಈ ಸುದ್ದಿ ನಿಮಗಾಗಿ. ಸರ್ಕಾರ ಈ ಎರಡೂ ಯೋಜನೆಗಳಲ್ಲಿ ಬದಲಾವಣೆ ಮಾಡಲು ಸಿದ್ಧತೆ ನಡೆಸುತ್ತಿದೆ. ವರದಿಗಳ ಪ್ರಕಾರ, ಕೇಂದ್ರ ಸರ್ಕಾರದಿಂದ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಪ್ರಕ್ರಿಯೆಯನ್ನು ಸಡಿಲಿಸಲು ಸಿದ್ಧತೆಗಳು ನಡೆಯುತ್ತಿವೆ.
ಆಧಾರ್ ಕಾರ್ಡ್ ಮೂಲಕ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಸಾಧ್ಯ :
ಸರ್ಕಾರದ ಯೋಜನೆಗಳೊಂದಿಗೆ ಹೆಚ್ಚು ಹೆಚ್ಚು ಜನರನ್ನು ಸಂಪರ್ಕಿಸುವುದು ಈ ವಿನಾಯಿತಿ ನೀಡುವ ಉದ್ದೇಶವಾಗಿದೆ. ಇದರಿಂದ ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ವರದಿಯ ಪ್ರಕಾರ, ಪ್ಯಾನ್ ಕಾರ್ಡ್ ಬದಲಿಗೆ ಆಧಾರ್ ಕಾರ್ಡ್ ಬಳಸಿ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಲು ಜನರಿಗೆ ಅವಕಾಶ ನೀಡಲಾಗುವುದು ಎನ್ನಲಾಗಿದೆ.
ಇದನ್ನೂ ಓದಿ : Arecanut today price: ರಾಜ್ಯದ ಮಾರುಕಟ್ಟೆಯಲ್ಲಿ ಬುಧವಾರದ ಅಡಿಕೆ ಧಾರಣೆ
ಗ್ರಾಮೀಣ ಪ್ರದೇಶದ ಹೂಡಿಕೆದಾರರಿಗೆ ಆಗುವುದು ಲಾಭ :
ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕಡಿಮೆ ಆದಾಯ ಹೊಂದಿರುವ ಜನರು ಸಣ್ಣ ಉಳಿತಾಯ ಯೋಜನೆಯ ಲಾಭ ಪಡೆಯಲು ಪ್ರೋತ್ಸಾಹಿಸಲಾಗುತ್ತದೆ. ದೇಶದಲ್ಲಿ ಪ್ಯಾನ್ ಕಾರ್ಡ್‌ಗಳಿಗಿಂತ ಆಧಾರ್ ಕಾರ್ಡ್‌ಗಳನ್ನು ಹೊಂದಿರುವವರ ಸಂಖ್ಯೆಯೇ ಹೆಚ್ಚು. ಹೋಲಿಸಿ ನೋಡಿದರೆ ಪ್ಯಾನ್ ಕಾರ್ಡ್ ಹೊಂದಿರುವವರ ಸಂಖ್ಯೆ ಬಹಳ ಕಡಿಮೆ.
ಕ್ಲೈಮ್‌ಗಳಿಗೆ ಸಂಬಂಧಿಸಿದ ಪ್ರಕ್ರಿಯೆಯು ಸುಲಭವಾಗಿರಲಿದೆ :
ಪಿಪಿಎಫ್ ಮತ್ತು ಸುಕನ್ಯಾ ಸಮೃದ್ಧಿಯಂತಹ ಯೋಜನೆಗಳಿಗೆ ಜನ್ ಧನ್ ಖಾತೆಗಳಿಗೆ ಕೆವೈಸಿಯನ್ನು ನಿಗದಿಪಡಿಸಲಾಗಿದೆ ಎಂದು ಹಣಕಾಸು ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ. ಇದಲ್ಲದೆ, ಹೂಡಿಕೆದಾರರ ಮರಣದ ನಂತರ, ಕ್ಲೈಂ ಪ್ರಕ್ರಿಯೆಯನ್ನು ಸರಳಗೊಳಿಸುವ ಕೆಲಸವನ್ನೂ ಸರ್ಕಾರ ಮಾಡುತ್ತಿದೆ. ಇಲ್ಲಿಯವರೆಗೆ, ಕ್ಲೈಮ್‌ನ ಸಂಕೀರ್ಣತೆಯಿಂದಾಗಿ, ಮೃತರ ಹಣವನ್ನು ಅವರ ವಾರಸುದಾರರು ಸ್ವೀಕರಿಸುವುದು ಸಾಧ್ಯವಾಗುತ್ತಿರಲಿಲ್ಲ. ನಾಮಿನೇಷನ್ ಪ್ರಕ್ರಿಯೆಯನ್ನು ಕೂಡಾ ಇನ್ನು ಮುಂದೆ ಸರಳಗೊಳಿಸಲಾಗುವುದು.
ಇದನ್ನೂ ಓದಿ : Safest Cars: ದೇಶದ ಟಾಪ್ 5 ಸುರಕ್ಷಿತ ಕಾರುಗಳು ಇವೇ ನೋಡಿ
ಇದಲ್ಲದೆ, ಮಾರ್ಚ್‌ನಲ್ಲಿ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿಯ ಬಗ್ಗೆಯೂ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಸಣ್ಣ ಉಳಿತಾಯ ಯೋಜನೆಗಳ ಬಡ್ಡಿಯನ್ನು ಹಣಕಾಸು ಸಚಿವಾಲಯವು ಪ್ರತಿ ಮೂರು ತಿಂಗಳಿಗೊಮ್ಮೆ ಪರಿಶೀಲಿಸುತ್ತದೆ. ದೀರ್ಘಕಾಲದಿಂದ ಇದರಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಇದೀಗ EPFO ಬಡ್ಡಿದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿಯು ಕೂಡಾ ಹೆಚ್ಚಾಗುವ ನಿರೀಕ್ಷೆಯಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.