ಪ್ಯಾನ್-ಆಧಾರ್ ಲಿಂಕ್: ಜನರು ತಮ್ಮ ಆಧಾರ್ ಗುರುತಿನ ಸಂಖ್ಯೆಯೊಂದಿಗೆ ತಮ್ಮ ಪ್ಯಾನ್ ಕಾರ್ಡ್ ಅಥವಾ ಶಾಶ್ವತ ಖಾತೆ ಸಂಖ್ಯೆಯನ್ನು ಲಿಂಕ್ ಮಾಡುವುದನ್ನು ಭಾರತ ಸರ್ಕಾರವು ಕಡ್ಡಾಯಗೊಳಿಸಿದೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಆದಾಯ ತೆರಿಗೆ ಇಲಾಖೆಯು 30 ಜೂನ್ 2022 ರವರೆಗೆ ಗಡುವು ನೀಡಿದೆ. ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್ ಅನ್ನು ನೀವು ಇನ್ನೂ ಲಿಂಕ್ ಮಾಡದಿದ್ದರೆ, ಅದನ್ನು ಜೂನ್ 30 ರ ಮೊದಲು ಮಾಡಿ, ಇಲ್ಲದಿದ್ದರೆ ನೀವು ಹೆಚ್ಚಿನ ದಂಡವನ್ನು ಪಾವತಿಸಬೇಕಾಗಬಹುದು.
ಪ್ಯಾನ್-ಆಧಾರ್ ಅನ್ನು ಪರಸ್ಪರ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು. ಪ್ಯಾನ್, ತೆರಿಗೆ ಸೇರಿದಂತೆ ಹಣಕಾಸು ಸೇವೆಗಳಿಗೆ ಪ್ರಮುಖ ದಾಖಲೆ ಆಗಿದೆ. ಆದಾಯ ತೆರಿಗೆ ಕಾಯ್ದೆ, 1961 ರ ನಿಬಂಧನೆಗಳ ಪ್ರಕಾರ ಮಾರ್ಚ್ 1, 2022 ರವರೆಗೆ ಪ್ಯಾನ್-ಆಧಾರ್ ಅನ್ನು ಲಿಂಕ್ ಮಾಡಲು ಆದಾಯ ತೆರಿಗೆ ಇಲಾಖೆಯು ಕಡ್ಡಾಯಗೊಳಿಸಿದೆ .
ಮಾರ್ಚ್ 1, 2023 ರವರೆಗೆ ಪ್ಯಾನ್-ಆಧಾರ್ ಲಿಂಕ್ ಮಾಡಲು ಅವಕಾಶ, ಆದರೆ...
ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವನ್ನು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ (CBDT) ಯಿಂದ ಮಾರ್ಚ್ 1, 2023 ರವರೆಗೆ ವಿಸ್ತರಿಸಲಾಗಿದೆ. ಆದರೆ, ಅದು ಉಚಿತವಾಗಿರುವುದಿಲ್ಲ. ಯಾವುದೇ ವ್ಯಕ್ತಿ ಇನ್ನೂ ತಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ಅವರು ಜೂನ್ 30 ರ ನಂತರ ಮೊತ್ತವು ದ್ವಿಗುಣಗೊಳ್ಳುವುದರಿಂದ ಹೆಚ್ಚಿನ ದಂಡವನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ- ವೈಟಿಂಗ್ ನಲ್ಲಿರುವ ರೈಲು ಟಿಕೆಟ್ ಕಂಫರ್ಮ್ ಆಗುತ್ತದೆಯೇ ಇಲ್ಲವೇ ಸುಲಭವಾಗಿ ತಿಳಿದುಕೊಳ್ಳಿ
ಜುಲೈ 1 ರಿಂದ, ಯಾವುದೇ ವ್ಯಕ್ತಿ ತಮ್ಮ ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡಲು ಬಯಸಿದರೆ ರೂ. 1,000 ದಂಡವನ್ನು ಪಾವತಿಸಬೇಕಾಗುತ್ತದೆ:
ಜುಲೈ 1 ರಂದು ಅಥವಾ ನಂತರ ನೀವು ಪ್ಯಾನ್-ಆಧಾರ್ ಅನ್ನು ಲಿಂಕ್ ಮಾಡಿದರೆ, ಅದಕ್ಕೆ ನೀವು ರೂ. 1000 ಪಾವತಿಸಬೇಕಾಗುತ್ತದೆ. ಮತ್ತೊಂದೆಡೆ, ನೀವು ಜೂನ್ ತಿಂಗಳಲ್ಲಿ ಈ ಕೆಲಸವನ್ನು ಮಾಡುವಲ್ಲಿ ಯಶಸ್ವಿಯಾದರೆ, ನೀವು ಕೇವಲ 500 ರೂ. ದಂಡವನ್ನು ಪಾವತಿಸಬೇಕಾಗುತ್ತದೆ.
ಈ ರೀತಿಯಾಗಿ ನೀವೇ ಆಧಾರ್ ಮತ್ತು ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಬಹುದು:
* ಪ್ಯಾನ್-ಆಧಾರ್ ಲಿಂಕ್ ಮಾಡಲು, ಆದಾಯ ತೆರಿಗೆ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ.
* ಸೈಟ್ ಪುಟದ ಎಡಭಾಗದಲ್ಲಿ, ನೀವು ತ್ವರಿತ ಲಿಂಕ್‌ಗಳ ಆಯ್ಕೆಯನ್ನು ಕಾಣಬಹುದು.
* ಇಲ್ಲಿ ನೀವು 'ಲಿಂಕ್ ಆಧಾರ್' ಆಯ್ಕೆಯನ್ನು ಕ್ಲಿಕ್ ಮಾಡಬೇಕು.
* ಇಲ್ಲಿ ನೀವು ನಿಮ್ಮ ಪ್ಯಾನ್, ಆಧಾರ್ ಸಂಖ್ಯೆ ಮತ್ತು ಹೆಸರನ್ನು ನಮೂದಿಸಬೇಕು.
* ಈ ಮಾಹಿತಿಯನ್ನು ನೀಡಿದ ನಂತರ, ನಿಮಗೆ OTP ಕಳುಹಿಸಲಾಗುತ್ತದೆ.
* OTP ನಮೂದಿಸಿದ ನಂತರ, ನಿಮ್ಮ ಆಧಾರ್ ಮತ್ತು PAN ಅನ್ನು ಲಿಂಕ್ ಮಾಡಲಾಗುತ್ತದೆ.
* ನಿಮ್ಮ ಆಧಾರ್ ಮತ್ತು ಪ್ಯಾನ್ ಮಾಹಿತಿಯು ಮಾನ್ಯವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಆದಾಯ ತೆರಿಗೆ ಇಲಾಖೆಯು ನಿಮ್ಮ ವಿವರಗಳನ್ನು ಪರಿಶೀಲಿಸುತ್ತದೆ ಎಂಬುದನ್ನು ನೆನಪಿನಲ್ಲಿಡಿ.
ಇದನ್ನೂ ಓದಿ- Income Tax Return: ಜುಲೈ 31ರೊಳಗೆ ಈ ಕೆಲಸ ಮುಗಿಸಲು ಮರೆಯಬೇಡಿ, ಇಲ್ದಿದ್ರೆ ದಂಡ ಗ್ಯಾರಂಟಿ
ಈ ರೀತಿಯಾಗಿ, ಪ್ಯಾನ್-ಆಧಾರ್ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿ:-
ನಿಮ್ಮ ಕಡ್ಡಾಯ ಪ್ಯಾನ್-ಆಧಾರ್ ಲಿಂಕ್ ಮಾಡುವುದು ಪೂರ್ಣಗೊಂಡಿದೆಯೇ ಎಂದು ಪರಿಶೀಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ:
- ಅಧಿಕೃತ ವೆಬ್‌ಸೈಟ್‌ಗೆ ಲಾಗ್ ಇನ್ ಮಾಡಿ: incometaxindiaefiling.gov.in/aadhaarstatus
- ಇದರ ನಂತರ ಪರದೆಯ ಮೇಲೆ ಹೊಸ ಪುಟ ತೆರೆಯುತ್ತದೆ.
- ಈ ಪುಟದ ಮೇಲ್ಭಾಗದಲ್ಲಿ ಹೈಪರ್‌ಲಿಂಕ್ ಇರುತ್ತದೆ, ಅದನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗಿರುತ್ತದೆ, ನೀವು ಈಗಾಗಲೇ ಆಧಾರ್ ಅನ್ನು ಲಿಂಕ್ ಮಾಡಲು ವಿನಂತಿಸಿದ್ದರೆ ಸ್ಟೇಟಸ್ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಎಂಬ ಆಯ್ಕೆ ಇರುತ್ತದೆ.
- ಈ ಹೈಪರ್ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ನೀವು ನಿಮ್ಮ ಪ್ಯಾನ್ ಮತ್ತು ಆಧಾರ್ ವಿವರಗಳನ್ನು ನಮೂದಿಸಬೇಕಾಗುತ್ತದೆ.
- 'ವ್ಯೂ ಲಿಂಕ್ ಆಧಾರ್ ಸ್ಟೇಟಸ್' ಮೇಲೆ ಕ್ಲಿಕ್ ಮಾಡಿ. ಅದರ ಫಲಿತಾಂಶದಲ್ಲಿ, ನಿಮ್ಮ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂದು ನಿಮಗೆ ತಿಳಿಯುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.