Mysore Paper Mills: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಕಾರ್ಖಾನೆ ಉಳಿಸಿಕೊಂಡಿರುವ ಸಾಲದ ಮೊತ್ತ, ವಿದ್ಯುತ್ ಬಿಲ್ ಮತ್ತು ಮುಂದಿನ ಹಾದಿ ಏನಾಗಿರಬೇಕು ಎಂಬ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸಚಿವರು ಸೂಚಿಸಿದರು. ಈ ಸಭೆಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರನ್ನೂ ಕರೆಯಲು ಸಚಿವರು ಸೂಚಿಸಿದರು.
ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಮೈಸೂರು ಪೇಪರ್ ಮಿಲ್ಸ್ ಸದ್ಯಕ್ಕೆ 1,482 ಕೋಟಿ ರೂ. ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ 2010 ರಿಂದ ಈತನಕ 850 ಕೋಟಿ ರೂ. ಸಾಲದ ರೂಪದಲ್ಲಿ ಕೊಟ್ಟಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ- ಬಾಗಲಕೋಟೆ- ಕುಡಚಿ ರೈಲ್ವೆ ಮಾರ್ಗ 2025ಕ್ಕೆ ಪೂರ್ಣ
ಈ ಮಧ್ಯೆ ಎಂಪಿಎಂ ಖಾಸಗೀಕರಣಕ್ಕೆ ಯತ್ನ ನಡೆದಿತ್ತು. ಸಂಸ್ಥೆ ಮೇಲೆ ಇರುವ ಆರ್ಥಿಕ ಹೊರೆಯನ್ನು ನಿಭಾಯಿಸಲು ಹಣಕಾಸು ಇಲಾಖೆಯ ಸಹಕಾರ ಬೇಕಾಗುತ್ತದೆ. ಹೀಗಾಗಿ ಅಧಿಕಾರಿಗಳ ಸಭೆ ನಂತರ ಖಾಸಗೀಕರಣದ ರೂಪುರೇಷೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.
ಎಂಪಿಎಂ ವ್ಯಾಪ್ತಿಯಲ್ಲಿ ಸುಮಾರು 23 ಸಾವಿರ ಹೆಕ್ಟೇರ್ ಅರಣ್ಯ ಮತ್ತು ಅರಣ್ಯೇತರ ಭೂಮಿ ಇದ್ದು ಇಲ್ಲಿ ಸದ್ಯಕ್ಕೆ ಅಕೇಶಿಯಾ, ನೀಲಗಿರಿ ಮತ್ತು ಬಿದಿರನ್ನು ಬೆಳೆಯಲಾಗುತ್ತಿದೆ. ಒಂದು ವೇಳೆ ಕಾರ್ಖಾನೆಯನ್ನು ಗುತ್ತಿಗೆ ನೀಡಿದರೂ, ಕಾರ್ಖಾನೆ ಜಾಗದಲ್ಲಿ, ನಿಷೇಧಿಸಿರುವ ನೀಲಿಗಿರಿ ಬೆಳೆಯಲು ಅವಕಾಶ ನೀಡಬಹುದೇ ಎಂಬುದನ್ನೂ ಕೂಲಂಕಶವಾಗಿ ಪರಿಶೀಲಿಸಬೇಕು ಎಂದು ಅವರು ವಿವರಿಸಿದರು.
ಇದನ್ನೂ ಓದಿ- ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ,,!
ಇದಲ್ಲದೆ ಎಂಪಿಎಂನ ಕೆಲವು ಉದ್ಯೋಗಿಗಳಿಗೆ ಸರ್ಕಾರದ ವಿವಿಧ ಸಂಸ್ಥೆ/ನಿಗಮಗಳಲ್ಲಿ ನೌಕರಿ ಕೊಡಿಸುವ ಕೆಲಸವೂ ಆಗುತ್ತಿದೆ. ಕೆಲವರಿಗೆ ಸ್ವಯಂ ನಿವೃತ್ತಿ ನೀಡಲಾಗಿದೆ. ಜತೆಗೆ ತಾತ್ಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ 250 ಫಾರೆಸ್ಟ್ ವಾಚರ್ ಗಳ ವೇತನ ಏರಿಕೆಗೂ ಒಂದು ಪರಿಹಾರ ರೂಪಿಸಬೇಕು ಎಂದು ಪಾಟೀಲ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಎಂಪಿಎಂ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಎಪಿಸಿಸಿಎಫ್ ವನಶ್ರೀ ವಿಪಿನ್ ಸಿಂಗ್, ಚೀಫ್ ಆಪರೇಟಿಂಗ್ ಆಫೀಸರ್ ರವೀಂದ್ರನಾಥ್ ಮುಂತಾದವರು ಭಾಗವಹಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.