Petrol-Diesel Price : ಮೇ 2022ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೆಚ್ಚುತ್ತಿರುವ ತೈಲ ಬೆಲೆಗಳು ಜನರ ಜೇಬಿನ ಮೇಲೆ ಭಾರೀ ಪರಿಣಾಮ ಬೀರಿವೆ. ಆದರೆ, ಈಗ ಈ ಹೊರೆಯಿಂದ ಶೀಘ್ರದಲ್ಲೇ ಪರಿಹಾರ ಸಿಗಬಹುದು. ಚುನಾವಣೆಗೂ ಮುನ್ನ ಹಣದುಬ್ಬರದಿಂದ ಮುಕ್ತಿ ಸಿಗುವ ನಿರೀಕ್ಷೆಯಲ್ಲಿದ್ದಾರೆ ಜನ ಸಾಮಾನ್ಯರು. ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಇಳಿಕೆಯ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.
ಕಚ್ಚಾ ತೈಲದ ಬೆಲೆಯಲ್ಲಿ ನಿರಂತರ ಇಳಿಕೆಯ ಪರಿಣಾಮ ತೈಲ ಬೆಲೆ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 80 ಡಾಲರ್ಗಿಂತ ಕಡಿಮೆ ಆಗಿದೆ. ಹಾಗಾಗಿ ಸರ್ಕಾರ ಶೀಘ್ರದಲ್ಲೇ ತೈಲ ಬೆಲೆ ಇಳಿಸುವ ಮೂಲಕ ಜನಸಾಮಾನ್ಯರಿಗೆ ಪರಿಹಾರ ನೀಡಬಹುದು. ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಕುಸಿತದಿಂದಾಗಿ ತೈಲ ಕಂಪನಿಗಳ ಲಾಭ ಹೆಚ್ಚಾಗಿದೆ.ಹಾಗಾಗಿ ಲೋಕಸಭೆ ಚುನಾವಣೆಗೂ ಮುನ್ನ ತೈಲ ಬೆಲೆ ಇಳಿಕೆ ಮಾಡುವ ಮೂಲಕ ಸರ್ಕಾರ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಬಹುದು.
ಇದನ್ನೂ ಓದಿ : ವಿಜಯಪುರದಲ್ಲಿ ಲುಲು ಗ್ರೂಪ್ ನಿಂದ ₹300 ಕೋಟಿ ಹೂಡಿಕೆ
ಬೆಲೆಗಳು ಎಷ್ಟು ಕಡಿಮೆಯಾಗಬಹುದು? :
ಕ್ರೆಡಿಟ್ ರೇಟಿಂಗ್ ಏಜೆನ್ಸಿ ಐಸಿಆರ್ಎ ಪ್ರಕಾರ, ಕಚ್ಚಾ ತೈಲ ಬೆಲೆ ಕುಸಿತದಿಂದಾಗಿ, ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿ, ಎಚ್ಪಿಸಿಎಲ್, ಬಿಪಿಸಿಎಲ್ ಪ್ರತಿ ಲೀಟರ್ ಪೆಟ್ರೋಲ್ನಲ್ಲಿ 11 ರೂ ಮತ್ತು ಪ್ರತಿ ಲೀಟರ್ ಡೀಸೆಲ್ನಲ್ಲಿ 6 ರೂ ಲಾಭವಾಗಬಹುದು. ಡಿಸೆಂಬರ್ ತ್ರೈಮಾಸಿಕದಲ್ಲಿ ತೈಲ ಕಂಪನಿಗಳ ಲಾಭ 75 ಸಾವಿರ ಕೋಟಿಗಳಷ್ಟಾಗಿರಬಹುದು ಎನ್ನಲಾಗಿದೆ. ಕಂಪನಿಗಳ ಹೆಚ್ಚಿದ ಮಾರ್ಜಿನ್ಗಳಿಂದಾಗಿ, ಪೆಟ್ರೋಲ್ ಮತ್ತು ಡೀಸೆಲ್ನ ಚಿಲ್ಲರೆ ಬೆಲೆಯಲ್ಲಿ ಇಳಿಕೆಯಾಗಬಹುದು ಎಂದು ICRA ಆಶಿಸಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಸ್ಥಿರವಾಗಿದ್ದರೆ, ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್ಗೆ 5 ರಿಂದ 10 ರೂಪಾಯಿಗಳಷ್ಟು ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಕುಸಿಯುತ್ತಲೇ ಇದೆ ಕಚ್ಚಾ ತೈಲದ ಬೆಲೆ :
ಕಳೆದ ವರ್ಷ ಸೆಪ್ಟೆಂಬರ್ನಿಂದ ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ. ಈಗ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 80 ಡಾಲರ್ ಗಿಂತ ಕಡಿಮೆ ವಹಿವಾಟು ನಡೆಸುತ್ತಿದೆ. ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿದ್ದರೂ, ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಿಲ್ಲ.ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರ್ಕೆಟಿಂಗ್ ಮಾರ್ಜಿನ್ ಅನ್ನು ಕ್ರಮವಾಗಿ ಲೀಟರ್ಗೆ 11 ಮತ್ತು 6 ರೂ.ಯಷ್ಟು ಕಡಿಮೆ ಮಾಡಬಹುದು ಎನ್ನಲಾಗಿದೆ. ಹೀಗಿರುವಾಗ ಲೋಕಸಭೆ ಚುನಾವಣೆಗೂ ಮುನ್ನ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಗಣನೀಯವಾಗಿ ಇಳಿಸುವ ಮೂಲಕ ಜನಸಾಮಾನ್ಯರಿಗೆ ನೆಮ್ಮದಿ ನೀಡಬಹುದೆಂಬ ನಿರೀಕ್ಷೆ ಈಗ ವ್ಯಕ್ತವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.