ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸತತ 25ನೇ ದಿನವಾದ ಇಂದು(ಡಿ.26) ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price Today)ಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಇನ್ನೂ 100 ರೂ. ದರದಲ್ಲಿ ಮಾರಾಟವಾಗುತ್ತಿದೆ. ದೇಶದಲ್ಲಿ ತೈಲ ಬೆಲೆ ಇನ್ನೂ ಜನಸಾಮಾನ್ಯರ ಜೇಬಿನ ಮೇಲೆ ಪರಿಣಾಮ ಬೀರುತ್ತಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 95.41 ರೂ, ಡೀಸೆಲ್ ಬೆಲೆ(Diesel Price) ಲೀಟರ್‌ಗೆ 86.67 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ 109.98 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.14 ರೂ.ನಂತೆ ಮಾರಾಟವಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ (7 ಪೈಸೆಯಷ್ಟು ಏರಿಕೆ) 100.65 ರೂ. ಇದ್ದರೆ, ಡೀಸೆಲ್ ಲೀಟರ್‌ಗೆ 85.08 ರೂ. ಇದೆ.
ಚೆನ್ನೈನಲ್ಲಿ ಪೆಟ್ರೋಲ್ 101.40 ರೂ. ಇದ್ದರೆ, ಡೀಸೆಲ್ 91.43 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.67 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 89.79 ರೂ. ಇದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂ. ಹಾಗೂ ಲೀಟರ್ ಡೀಸೆಲ್ ದರ(Diesel Price) 94.62 ರೂ. ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂ. ಇದ್ದರೆ, ಲೀಟರ್ ಡೀಸೆಲ್ ದರ 86.80 ರೂ. ಇದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 106.90 ರೂ. ಇದ್ದರೆ, ಡೀಸೆಲ್ 90.56 ರೂ.ನಲ್ಲಿ ಮಾರಾಟವಾಗುತ್ತಿದೆ.
ಇದನ್ನೂ ಓದಿ: Arecanut Price: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ?
ದೀಪಾವಳಿ ಹಬ್ಬದ ಮುನ್ನಾದಿನ(ನವೆಂವರ್ 4) ಕೇಂದ್ರ ಸರ್ಕಾರವು ಪೆಟ್ರೋಲ್ (Petrol Price) ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಪೆಟ್ರೋಲ್ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ.ಕಡಿತಗೊಳಿಸಿತ್ತು. ಬಳಿಕ ಪೆಟ್ರೋಲ್ & ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಏರಿಳಿತ ಕಂಡು ಬಂದಿಲ್ಲ.ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್(ಮೌಲ್ಯವರ್ಧಿತ ತೆರಿಗೆ)ಕಡಿತಗೊಳಿಸಿದ್ದು, ಪರಿಣಾಮ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 8 ರೂ. ಕಡಿಮೆಯಾಗಿತ್ತು. ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇ.30 ರಿಂದ ಶೇ.19.4ಕ್ಕೆ ಇಳಿಸಲು ನಿರ್ಧರಿಸಿದ್ದರಿಂದ ಪೆಟ್ರೋಲ್ ಬೆಲೆ ಪ್ರಸ್ತುತ ಲೀಟರ್ ಗೆ 103 ರೂ.ನಿಂದ 95 ರೂ.ಗೆ ಇಳಿದಿದೆ.
ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರ(Fuel Rates)ಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.
ಇದನ್ನೂ ಓದಿ: Post Office Super Hit Scheme! ನಿತ್ಯ ಕೇವಲ 50ರೂ.ಹೂಡಿಕೆ ಮಾಡಿ 35 ಲಕ್ಷ ಪಡೆಯಿರಿ
ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price)ಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.