RBI MPC Meeting Today : ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್ ಬಿಐ) ಮೂರು ದಿನಗಳ ಹಣಕಾಸು ನೀತಿ ಸಮಿತಿ ಸಭೆ ಇಂದು ಮುಕ್ತಾಯವಾಗಲಿದೆ. ಜೂನ್ 6ರಂದು ಆರಂಭವಾಗಿರುವ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಈ ನಿರ್ಧಾರಗಳನ್ನು ಜೂನ್ 8 ರಂದು ಅಂದರೆ ಇಂದು ಪ್ರಕಟಿಸಲಾಗುವುದು. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯ (ಎಂಪಿಸಿ) 43ನೇ ಸಭೆ ಇದಾಗಿದೆ. ಇದಕ್ಕೂ ಮುನ್ನ ವಿತ್ತೀಯ ನೀತಿ ಸಮಿತಿಯ (ಎಂಪಿಸಿ) 42ನೇ ಸಭೆಯಲ್ಲಿ ರೆಪೊ ದರವನ್ನು ಹೆಚ್ಚಿಸಲಾಗಿರಲಿಲ್ಲ.
ರೆಪೊ ದರ ಯಥಾಸ್ಥಿತಿಯಲ್ಲಿ ಇರುವ ನಿರೀಕ್ಷೆ :
ಮೂರು ದಿನಗಳ ಎಂಪಿಸಿ ಸಭೆಯ ಫಲಿತಾಂಶಗಳ ಕುರಿತು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಮಾಹಿತಿ ನೀಡಲಿದ್ದಾರೆ. ರಿಸರ್ವ್ ಬ್ಯಾಂಕ್ (ಆರ್ಬಿಐ) ಈ ಬಾರಿ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳುತ್ತವೆ. ಎಪ್ರಿಲ್ನಲ್ಲಿ ನಡೆದ ಎಂಪಿಸಿ ಸಭೆಯಲ್ಲಿ ರೆಪೊ ದರವನ್ನು ಶೇ.6.5ರಲ್ಲೇ ಇರಿಸಲಾಗಿತ್ತು. ಈ ಬಾರಿಯೂ ರೆಪೋ ದರದಲ್ಲಿ ಏರಿಕೆಯಾಗದಿದ್ದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಾಲದ ಬಡ್ಡಿ ದರದಿಂದ ಜನರಿಗೆ ಮುಕ್ತಿ ಸಿಗಲಿದೆ ಎಂದರ್ಥ.
ಇದನ್ನೂ ಓದಿ : Post Office Scheme: ಅಂಚೆ ಕಚೇರಿಯ ಈ ಯೋಜನೆಯಲ್ಲಿ 50 ರೂ. ಹೂಡಿಕೆ ಮಾಡಿ 35 ಲಕ್ಷ ರೂ. ಪಡೆಯಿರಿ
ಗ್ರಾಹಕರಿಗೆ ನೀಡಿದ ಸಾಲದ ಮೇಲೆ ಹೇಗೆ ಬೀರಲಿದೆ ಪರಿಣಾಮ :
ಆರ್ಬಿಐ ಮೇ 2022 ರಿಂದ ರೆಪೋ ದರವನ್ನು ನಿರಂತರವಾಗಿ ಹೆಚ್ಚಿಸುತ್ತಾ ಬಂದಿದೆ. ಮೇ 2022 ರಿಂದ ಇಲ್ಲಿಯವರೆಗೆ, ರೆಪೋ ದರವನ್ನು ಶೇಕಡಾ 2.5 ರಷ್ಟು ಹೆಚ್ಚಿಸಲಾಗಿದೆ. ಇದರ ನೇರ ಪರಿಣಾಮ ಬ್ಯಾಂಕ್ ಗ್ರಾಹಕರಿಗೆ ನೀಡುವ ಸಾಲದ ಮೇಲೆ ಪರಿಣಾಮ ಬೀರುತ್ತಿತ್ತು. ಬ್ಯಾಂಕುಗಳು ಎಲ್ಲಾ ವರ್ಗಗಳ ಸಾಲಗಳ ಬಡ್ಡಿದರವನ್ನು ಹೆಚ್ಚಿಸಿವೆ. ಇದಲ್ಲದೆ, ಹೂಡಿಕೆದಾರರನ್ನು ಆಕರ್ಷಿಸಲು ಬ್ಯಾಂಕ್ಗಳು ದೀರ್ಘಾವಧಿಯ ಎಫ್ಡಿಗಳ ಬಡ್ಡಿದರವನ್ನು ಹೆಚ್ಚಿಸಲು ಕೂಡಾ ನಿರ್ಧರಿಸಿದ್ದವು.
ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರ ದರವನ್ನು ನಿಯಂತ್ರಿಸಲು RBI ಬಡ್ಡಿದರವನ್ನು ಹೆಚ್ಚಿಸಿದೆ ಎನ್ನುವುದು ಇಲ್ಲಿ ಗಮನಿಸಬೇಕಾದ ಅಂಶ. ಆದರೆ ಏಪ್ರಿಲ್ 2023 ರಲ್ಲಿ ಬಿಡುಗಡೆಯಾದ ಚಿಲ್ಲರೆ ಹಣದುಬ್ಬರ ದರವು 18 ತಿಂಗಳ ಕನಿಷ್ಠ ಶೇಕಡಾ 4.7 ಕ್ಕೆ ಇಳಿದಿದೆ. ಈ ಹಿಂದೆ ಮಾರ್ಚ್ನಲ್ಲಿ ಶೇ.5.7 ರಷ್ಟಿತ್ತು.
ಇದನ್ನೂ ಓದಿ : ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ ಬಂಪರ್ ಹೆಚ್ಚಳ ! ರೈತರಿಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ ಕ್ಯಾಬಿನೆಟ್ !
ರೆಪೋ ದರ ಎಂದರೇನು? :
ಆರ್ಬಿಐ ಬ್ಯಾಂಕ್ಗಳಿಗೆ ನೀಡುವ ಸಾಲದ ದರವನ್ನು ರೆಪೊ ದರ ಎಂದು ಕರೆಯಲಾಗುತ್ತದೆ. ರೆಪೊ ದರವನ್ನು ಹೆಚ್ಚಿಸುವುದರಿಂದ ಬ್ಯಾಂಕ್ಗಳು ಆರ್ಬಿಐನಿಂದ ದುಬಾರಿ ದರದಲ್ಲಿ ಸಾಲ ಪಡೆಯುತ್ತವೆ. ಇದು ಗೃಹ ಸಾಲ, ಕಾರು ಸಾಲ ಮತ್ತು ವೈಯಕ್ತಿಕ ಸಾಲ ಇತ್ಯಾದಿಗಳ ಬಡ್ಡಿ ದರವನ್ನು ಹೆಚ್ಚಿಸುತ್ತದೆ, ಇದು ನಿಮ್ಮ EMI ಮೇಲೆ ನೇರ ಪರಿಣಾಮ ಬೀರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.