Indian Railway Recruitment 2024: ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Railway Recruitment 2024: ಈ ನೇಮಕಾತಿ ಅಧಿಸೂಚನೆಯಡಿ 7,934 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 13 ಕೆಮಿಕಲ್ ಸೂಪರ್ವೈಸರ್, ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್/ರಿಸರ್ಚ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.  

Written by - Puttaraj K Alur | Last Updated : Jul 27, 2024, 04:50 PM IST
  • ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ
  • ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 35,400 ರೂ. ವೇತನ
Indian Railway Recruitment 2024: ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ title=
Indian Railway Recruitment 2024

Indian Railway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಧಿಸೂಚನೆಯಡಿ 7,934 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 13 ಕೆಮಿಕಲ್ ಸೂಪರ್ವೈಸರ್, ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್/ರಿಸರ್ಚ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.  

ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು. ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಬಿಸಿಎ/ಬಿಟೆಕ್ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಪೂರ್ಣಗೊಳಿಸಿದವರು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ನಿರಂತರ ಮಳೆ, ಶೀತಗಾಳಿ ಹಿನ್ನೆಲೆಯಲ್ಲಿ ಜುಲೈ 27 ರಂದು ಶಾಲಾ ಕಾಲೇಜುಗಳಿಗೆ ರಜೆ

ವಯಸ್ಸು: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 36 ವರ್ಷಗಳ ನಡುವೆ ಇರಬೇಕು. SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.   

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 35,400 ರೂ. ವೇತನ ನೀಡಲಾಗುತ್ತದೆ. ಇದಲ್ಲದೆ ಸರ್ಕಾರ ನೀಡುವ ಇತರ ಪ್ರಯೋಜನಗಳು ದೊರೆಯಲಿವೆ. 

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.   

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರು ಮತ್ತು SC/ST ಅಭ್ಯರ್ಥಿಗಳು 250 ರೂ. ಮತ್ತು OBC ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. 

ಇದನ್ನೂ ಓದಿ: Kargil Vijay Diwas: ʼಕಾರ್ಗಿಲ್ ವಿಜಯ ದಿವಸʼ 25ನೇ ವಾರ್ಷಿಕೋತ್ಸವ; ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವ

ಪರೀಕ್ಷಾ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News