ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಶಕ್ತಿ ಯೋಜ’ನೆ ಜಾರಿಯಾದ ನಂತರ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ‘ಶಕ್ತಿ ಯೋಜನೆ’ಯಿಂದ ನಮ್ಮ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ 15 ರಿಂದ 20 ಲಕ್ಷ ಜನರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಯೋಜನೆ ಜಾರಿ ನಂತರ ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಪ್ರತಿದಿನದ ಸರಾಸರಿ ಆದಾಯ KSRTCಯಲ್ಲಿ 12.57 ಕೋಟಿ ರೂ., ಬಿಎಂಟಿಸಿಯಲ್ಲಿ 5.39 ಕೋಟಿ ರೂ. ವಾಯುವ್ಯ ಸಾರಿಗೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ. ತಲುಪಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ
ಶಕ್ತಿ ಯೋಜನೆ ಜಾರಿ ನಂತರ ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.#shakti #KSRTC #redbus @RLR_BTM pic.twitter.com/th6sPsqJ8R
— DIPR Karnataka (@KarnatakaVarthe) December 7, 2023
9 ಸಾವಿರ ಸಿಬ್ಬಂದಿ ನೇಮಕ
4 ವರ್ಷ ಸತತವಾಗಿ ನಿಗಮಕ್ಕೆ ಬಸ್ ಖರೀದಿ ಮಾಡಿಲ್ಲ. 2016ರ ನಂತರ ಸಿಬ್ಬಂದಿ ನೇಮಕಾತಿಯೂ ಆಗಲಿಲ್ಲ. ಇದೀಗ ಹೊಸದಾಗಿ 5,500 ಹೊಸ ಬಸ್‍ಗಳ ಖರೀದಿಗೆ ಅನುಮತಿ ನೀಡಿದ್ದು, 9 ಸಾವಿರ ಸಿಬ್ಬಂದಿ ನೇಮಕ ಮಾಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಶಕ್ತಿ ಯೋಜನೆ ಜಾರಿಯಾದ ನಂತರ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.#shakti #KSRTC @RLR_BTM pic.twitter.com/0CzqH6m8TI
— DIPR Karnataka (@KarnatakaVarthe) December 7, 2023
ಬೆಂಗಳೂರಿಗೆ 921 ಎಲೆಕ್ಟ್ರಿಕ್ ಬಸ್!
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದುವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟು 90 ಎಲೆಕ್ಟ್ರಿಕಲ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ. ಬಿಎಂಟಿಸಿಯಿಂದ ಪ್ರಸ್ತುತ ಈಗ ಒಟ್ಟು 15 ಬಸ್ ಘಟಕ/ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟ್ರಿಕಲ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವು ಬಿಎಂಟಿಸಿಗೆ 150 ಕೋಟಿ ರೂ.ಗಳ ಅನುದಾನ ನೀಡಿದೆ. 2024ರ ಮಾರ್ಚ್ ಅಂತ್ಯಕ್ಕೆ ಬಿಎಂಟಿಸಿಗೆ 921 ಎಲೆಕ್ಟ್ರಿಕ್ ಬಸ್‍ಗಳನ್ನು ನೀಡಲಾಗುವುದು ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ರಣತಂತ್ರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.