SSLC Exam 2025 Time Table: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ.. ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Karnataka SSLC Exam 2025 Time Table: ಕರ್ನಾಟಕ 10 ನೇ ತರಗತಿ ಪರೀಕ್ಷೆ 2025 ರ ವೇಳಾಪಟ್ಟಿ ವಿಷಯವಾರು ದಿನಾಂಕ ಮತ್ತು ಸಮಯವನ್ನು ಒಳಗೊಂಡಿರುತ್ತದೆ.  

Written by - Chetana Devarmani | Last Updated : Nov 29, 2024, 08:07 AM IST
  • ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ 2025
  • ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ಟೈಮ್ ಟೇಬಲ್‌
  • ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ದಿನಾಂಕ
SSLC Exam 2025 Time Table: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ.. ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ  title=

SSLC Exam 2025 Time Table: ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ 2025 ಕ್ಕೆ ಹಾಜರಾಗಲು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ 10 ನೇ ತರಗತಿ ಪರೀಕ್ಷೆ ದಿನಾಂಕವನ್ನು ಮಂಡಳಿ ಪ್ರಕಟಿಸಿದೆ. ಕರ್ನಾಟಕದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯು 2025ರ ಮಾರ್ಚ್‌ 24ರಿಂದ ಏಪ್ರಿಲ್‌ 17ವರೆಗೂ ನಡೆಯಲಿದೆ. 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025ನೇ ಸಾಲಿನ ಎಸ್ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ದಿನಾಂಕಗಳನ್ನ ತಿಳಿಸಿದೆ. ಮಾರ್ಚ್‌ 24 ರಿಂದ ಏಪ್ರಿಲ್ 17 ರವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಸಿದ್ಧಗೊಳಿಸಲಾಗಿದೆ ಎಂದು ಮಂಡಳಿಯು ಮಾಹಿತಿ ನೀಡಿದೆ. ಈ ಪರೀಕ್ಷೆ ದಿನಾಂಕಗಳಿಗೆ ಯಾವುದೇ ಆಕ್ಷೇಪಣೆ ಬರದಿದ್ದಲ್ಲಿ, ಹಾಗೂ ಸರ್ಕಾರದ ಆಡಳಿತಾತ್ಮಕ ಕಾರಣಗಳು, ಇತರೆ ಸಮಸ್ಯೆಗಳು ಎದುರಾಗದಿದ್ದಲ್ಲಿ ಇದೇ ದಿನಾಂಕಗಳ ನಡುವೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ. ಮೇ ತಿಂಗಳ ವೇಳೆಗೆ ಫಲಿತಾಂಶವನ್ನು ಪ್ರಕಟಿಸಬಹುದಾಗಿದೆ. 

ಕರ್ನಾಟಕ 10 ನೇ ತರಗತಿ ಪರೀಕ್ಷೆ 2025 ರ ವೇಳಾಪಟ್ಟಿ ವಿಷಯವಾರು ದಿನಾಂಕ ಮತ್ತು ಸಮಯವನ್ನು ಒಳಗೊಂಡಿರುತ್ತದೆ. ಒಟ್ಟು 25 ದಿನಗಳ ಅವಧಿಯಲ್ಲಿ 10 ನೇ ತರಗತಿ ಪರೀಕ್ಷೆ ನಡೆಸಲು ಮಂಡಳಿಯು ತಾತ್ಕಾಲಿವಾಗಿ ವೇಳಾಪಟ್ಟಿ ಸಿದ್ದಪಡಿಸಿದೆ. ನವೆಂಬರ್‌ 27 ರ ಬುಧವಾರ ಬೆಂಗಳೂರಿನಲ್ಲಿರುವ ಮಂಡಳಿ ಕಚೇರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಸಂಬಂಧ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ : ಸಿ‌ಬಿ‌ಎಸ್‌ಇ 12ನೇ ತರಗತಿ ಬೋರ್ಡ್ ಪರೀಕ್ಷೆ ಡೇಟ್‌ಶೀಟ್: ಇಲ್ಲಿದೆ ಸಂಪೂರ್ಣ ಪಟ್ಟಿ

ಶುಕ್ರವಾರದಂದು ಅಂದರೆ 89 ನವೆಂಬರ್‌ 2024 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿಯನ್ನು ವೆಬ್‌ಸೈಟ್‌ ಮೂಲಕ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 15 ದಿನಗಳ ಆಕ್ಷೇಪಣೆ ಅವಧಿ ನಂತರ ಬಹುತೇಕ ಡಿಸೆಂಬರ್‌ ಎರಡನೇ ವಾರದ ವೇಳೆಗೆ ಅಧಿಕೃತ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಬಹುದು ಎಂದು ತಿಳಿದುಬಂದಿದೆ. 

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ರ ತಾತ್ಕಾಲಿಕ ವೇಳಾ ಪಟ್ಟಿ ಹೀಗಿದೆ: 

2025 ರ ಮಾರ್ಚ್‌ 24 ಸೋಮವಾರ - ಗಣಿತಶಾಸ್ತ್ರ

2025 ರ ಮಾರ್ಚ್‌ 28 ಶುಕ್ರವಾರ - ದ್ವಿತೀಯ ಭಾಷೆ 

2025 ರ ಏಪ್ರಿಲ್‌ 1 ಮಂಗಳವಾರ - ವಿಜ್ಞಾನ

2025 ರ ಏಪ್ರಿಲ್‌ 4 ಶುಕ್ರವಾರ - ಸಮಾಜ ಶಾಸ್ತ್ರ

2025 ರ ಏಪ್ರಿಲ್‌ 7 ಸೋಮವಾರ - ಮೊದಲ ಭಾಷೆ 

2025 ರ ಏಪ್ರಿಲ್‌ 11 ಶುಕ್ರವಾರ - ತೃತೀಯ ಭಾಷೆ

ವಿದ್ಯಾರ್ಥಿಗಳೇ ಗಮನಿಸಿ:

ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ ( ಎನ್‌ಸಿಇಆರ್‌ಟಿ), ಸಂಸ್ಕೃತ

ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ

ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಎನ್‌ಎಸ್‌ಕ್ಯೂಎಫ್‌ ವಿಷಯಗಳು.

ಕರ್ನಾಟಕ SSLC 2025 ವೇಳಾಪಟ್ಟಿ pdf kseab.karnataka.gov.in ನಲ್ಲಿ ಲಭ್ಯವಿರುತ್ತದೆ. ಪರೀಕ್ಷೆಗಳು ಬೆಳಿಗ್ಗೆ 10:15 ರಿಂದ ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿರಬೇಕು.  

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ರ ತಾತ್ಕಾಲಿಕ ವೇಳಾಪಟ್ಟಿ ಡೌನ್‌ಲೋಡ್ ಮಾಡುವ ವಿಧಾನ ಇಲ್ಲಿದೆ: 

ಹಂತ 1: KSEAB ನ kseab.karnataka.gov.in ಅಧಿಕೃತ ವೆಬ್‌ಸೈಟ್ ತೆರೆಯಿರಿ 

ಹಂತ 2: ಅಲ್ಲಿ ಕೊಟ್ಟಿರುವ 'SSLC ವೇಳಾಪಟ್ಟಿ 2025 ಕರ್ನಾಟಕ' ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ತಾತ್ಕಾಲಿಕ ವೇಳಾಪಟ್ಟಿ ತೆರೆಯುತ್ತದೆ

ಹಂತ 4:  ತಾತ್ಕಾಲಿಕ ವೇಳಾಪಟ್ಟಿಯ pdf ಅನ್ನು ಡೌನ್‌ಲೋಡ್ ಮಾಡಿಟ್ಟು ಕೊಳ್ಳಿ.

ಇದನ್ನೂ ಓದಿ : Job Latest Updates: ಸಹಾಯಕ ಶಿಕ್ಷಕರು ಹುದ್ದೆಗಳ ಫಲಿತಾಂಶ ಪ್ರಕಟ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News