ಯುವ ಪರಿವರ್ತಕರು ಮತ್ತು ಯುವ ಸಮಾಲೋಚಕರ ಹುದ್ದೆ: ತರಬೇತಿಗೆ ಅರ್ಜಿ ಆಹ್ವಾನ

ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದ ಯೋಜನೆ ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Written by - Manjunath N | Last Updated : Jan 5, 2024, 03:53 PM IST
  • ಆಸಕ್ತ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿಳಾಸ, ವಯಸ್ಸು, ವಾಸಿಸುತ್ತಿರುವ ವಿಳಾಸ, ವೈಯಕ್ತಿಕ ಮಾಹಿತಿಯೊಂದಿಗೆ ಜನವರಿ 09 ರೊಳಗೆ ಕ್ರೀಡಾ ಇಲಾಖೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
  • ಈ ಹುದ್ದೆಗಳಿಗೆ ಜನವರಿ 11 ರಂದು ಸಹಾಯಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11.30 ಗಂಟೆಗೆ ನೇರ ಸಂದರ್ಶನ ನಡೆಸಲಾಗುವುದು.
 ಯುವ ಪರಿವರ್ತಕರು ಮತ್ತು ಯುವ ಸಮಾಲೋಚಕರ ಹುದ್ದೆ: ತರಬೇತಿಗೆ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಕೊಪ್ಪಳ: ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದ ಯೋಜನೆ ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ ಪಡೆದು ಆಯ್ಕೆಯಾದ ನಂತರ ಯುವ ಪರಿವರ್ತಕ ಹಾಗೂ ಯುವ ಸಮಾಲೋಚಕರೆಂದು ಪ್ರಮಾಣೀಕರಿಸಲಾಗುತ್ತದೆ. ಈ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರು ಯುವಸ್ಪಂದನ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವನೀತಿ ಅನ್ವಯ, ಯುವಜನರನ್ನು ತಲುಪಿ, ಯುವಜನರಿಂದಲೇ ನಡೆಸಿ, ಯುವ ಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ದಿನ ಅಯೋಧ್ಯೆಯಲ್ಲಿ ಬಿಗಿ ಭದ್ರತೆ: ಎಲ್ಲಿಲ್ಲೆ ಹೇಗಿರಲಿದೆ ಗೊತ್ತಾ ಸೆಕ್ಯೂರಿಟಿ?

ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕನಕಗಿರಿ, ಕಾರಟಗಿ, ಕುಷ್ಟಗಿ, ಕುಕನೂರ ತಾಲ್ಲೂಕಿನ ಖಾಲಿಯಿರುವ 07 ಹುದ್ದೆಗೆ ಯುವ ಪರಿವರ್ತಕರನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ.

ಪದವಿ ಹಾಗೂ ಮೇಲ್ಪಟ್ಟು ( Psychology/Social work ಪದವಿ) ತೇರ್ಗಡೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಸಮುದಾಯದಲ್ಲಿ ಕೆಲಸ ಮಾಡಿರುವವರ ಅನುಭವ ಅಪೇಕ್ಷಿಸಲಾಗಿದೆ. ಸಾರ್ವಜನಿಕರ ಮಾನಸಿಕ ಆರೋಗ್ಯ ಸಂವರ್ಧನ ಸೇವೆಗಳ ಬಗ್ಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು ಹೊಂದಿರಬೇಕು. ಕನ್ನಡವನ್ನು ಸ್ವಚ್ಛ ಹಾಗೂ ಸ್ಪಷ್ಟವಾಗಿ ಮಾತನಾಡುವುದು ಅವಶ್ಯಕ. ಪರಸ್ಪರ ಬಾಂಧವ್ಯಾಭಿವೃದ್ಧಿಯ ಕೌಶಲ್ಯ, ತರಬೇತಿ ನೀಡುವ ಕೌಶಲ್ಯ, ಸಂವಹನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ಥೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯಗಳು ಇರಬೇಕು. ಕನಿಷ್ಠ ವಯೋಮಿತಿ 21 ರಿಂದ 35 ವರ್ಷಗಳು. ಗೌರವಧನ ಮತ್ತು ಅವಧಿ ಪ್ರಮಾಣೀಕೃತ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ಹಾಗೂ ಪ್ರವಾಸ ಭತ್ಯೆ ಆರು ತಿಂಗಳ ಕಾಲ ನೀಡಲಾಗುವುದು.

ಕೊಪ್ಪಳ ಜಿಲ್ಲೆಗೆ ಖಾಲಿಯಿರುವ 01 ಯುವ ಪರಿವರ್ತಕ ಹುದ್ದೆಗೆ ತರಬೇತಿಗೆ ಪದವಿ ಹಾಗೂ ಎಂಎಸ್‌ಡಬ್ಲ್ಯೂ ( Psychology/Social work ಪದವಿ) ತೇರ್ಗಡೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಸಮುದಾಯದಲ್ಲಿ ಕೆಲಸ ಮಾಡಿರುವವರ ಅನುಭವ ಅಪೇಕ್ಷಿಸಲಾಗಿದೆ. ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯವನ್ನು ಹೊಂದಿರಬೇಕು. ಸಾರ್ವಜನಿಕರ ಮಾನಸಿಕ ಆರೋಗ್ಯ ಸಂವರ್ಧನ ಸೇವೆಗಳ ಬಗ್ಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು ಹೊಂದಿರಬೇಕು. ಕನ್ನಡವನ್ನು ಸ್ವಚ್ಛವಾಗಿ ಮಾತನಾಡುವುದು ಅವಶ್ಯಕ. ಪರಸ್ಪರ ಬಾಂಧವ್ಯಾಭಿವೃದ್ಧಿಯ ಕೌಶಲ್ಯ, ತರಬೇತಿ ನೀಡುವ ಕೌಶಲ್ಯ, ಸಂವಹನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ಥೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯಗಳು ಇರಬೇಕು. ಕನಿಷ್ಠ ವಯೋಮಿತಿ 21 ರಿಂದ 35 ವರ್ಷಗಳು. ಗೌರವಧನ ಮತ್ತು ಅವಧಿ ಪ್ರಮಾಣೀಕೃತ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ಹಾಗೂ ಪ್ರವಾಸ ಭತ್ಯೆ ಆರು ತಿಂಗಳ ಕಾಲ ನೀಡಲಾಗುವುದು.

ಇದನ್ನೂ ಓದಿ: ಕುದುರೆ ಹತ್ತಿ ಫುಡ್‌ ಡೆಲಿವರಿಗೆ ಹೊರಟ ಝೊಮಾಟೋ ಡೆಲಿವರಿ ಬಾಯ್...

ಆಸಕ್ತ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿಳಾಸ, ವಯಸ್ಸು, ವಾಸಿಸುತ್ತಿರುವ ವಿಳಾಸ, ವೈಯಕ್ತಿಕ ಮಾಹಿತಿಯೊಂದಿಗೆ ಜನವರಿ 09 ರೊಳಗೆ ಕ್ರೀಡಾ ಇಲಾಖೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಜನವರಿ 11 ರಂದು ಸಹಾಯಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11.30 ಗಂಟೆಗೆ ನೇರ ಸಂದರ್ಶನ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಇಲ್ಲಿ ಕಛೇರಿ ಅವಧಿಯಲ್ಲಿ ಮಾಹಿತಿ ಪಡೆಯಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News