ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬೆಂಗಳೂರಿನ ಉದ್ಯಮಿ! ಕಾರಣವೇನು ಗೊತ್ತಾ..?

Suicide case: ಕಾರು ಸುಟ್ಟು ಭಸ್ಮವಾಗಿದ್ದು, ಪ್ರದೀಪ್ ಮೃತದೇಹ ಗುರುತು ಸಿಗದಂತಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು  ಪ್ರದೀಪ್ ಅವರ ಕುಟುಂಬ ಮತ್ತು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Written by - Puttaraj K Alur | Last Updated : Nov 17, 2024, 06:10 PM IST
  • ಕಾರಿನೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ
  • ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಘಟನೆ
  • ಹೋಟೆಲ್‌ ಉದ್ಯಮದಲ್ಲಿ ನಷ್ಟ, ಸಾಕಷ್ಟು ಸಾಲ ಮಾಡಿಕೊಂಡಿದ್ದ ಉದ್ಯಮಿ?
ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬೆಂಗಳೂರಿನ ಉದ್ಯಮಿ! ಕಾರಣವೇನು ಗೊತ್ತಾ..? title=
ಉದ್ಯಮಿ ಸೂಸೈಡ್!

Businessaman suicide case: ಕಾರಿನೊಳಗೆ ಕುಳಿತು ಉದ್ಯಮಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಶನಿವಾರ ಸಂಜೆ (ನವೆಂಬರ್​ 16) ಈ ಘಟನೆ ನಡೆದಿದೆ.

ಮೃತರನ್ನು ನಾಗರಭಾವಿ ನಿವಾಸಿ ಪ್ರದೀಪ್​ (42) ಎಂದು ಗುರುತಿಸಲಾಗಿದೆ. ವಾಹನವೊಂದು ಹೊತ್ತಿ ಉರಿದಿರುವ ಬಗ್ಗೆ ಪೊಲೀಸರಿಗೆ ತುರ್ತು ಕರೆ ಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರಿನೊಳಗಿದ್ದ ಪ್ರದೀಪ್ ಉಸಿರುಗಟ್ಟಿ ಅದಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ v/s ದೋಸ್ತಿಗಳ ನಡುವೆ ನೇರಾನೇರ ಫೈಟ್‌

ಹೋಟೆಲ್‌ ಉದ್ಯಮದಲ್ಲಿ ಪ್ರದೀಪ್‌ ನಷ್ಟ ಅನುಭವಿಸಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಅವರು ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯ ಕುರಿತು ಮಾಹಿತಿ ನೀಡಿರುವ ಡಿಸಿಪಿ ಗಿರೀಶ್, ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಕೋಡಾ ಕಾರಿನಲ್ಲಿ ಪ್ರದೀಪ್​ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಗೆ ಬಂದಿದ್ದರು. ನಂತರ ಅವರು ಕಾರಿನಲ್ಲಿ ಕುಳಿತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರು ಸುಟ್ಟು ಭಸ್ಮವಾಗಿದ್ದು, ಪ್ರದೀಪ್ ಮೃತದೇಹ ಗುರುತು ಸಿಗದಂತಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು  ಪ್ರದೀಪ್ ಅವರ ಕುಟುಂಬ ಮತ್ತು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನಾ ಸ್ಥಳದಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ.

ಇದನ್ನೂ ಓದಿ: ವಸೂಲಿ ಆರೋಪವನ್ನು ಮೋದಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ! ಇಲ್ಲದಿದ್ದರೆ ನೀವು ನಿವೃತ್ತಿ ಘೋಷಿಸ್ತೀರಾ: ಸಿಎಂ ಸಿದ್ದರಾಮಯ್ಯ ಸವಾಲು

ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರದೀಪ್ ಸಾವಿಗೆ ಹಣಕಾಸಿನ ಅಥವಾ ವೈಯಕ್ತಿಕ ಸಮಸ್ಯೆ ಏನಾದರೂ ಇತ್ತೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News