Uttarakhand Bus Accident : ಸುಮಾರು 45 ರಿಂದ 50 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಬಿದ್ದಿದೆ ಉರುಳಿ ಬಿದ್ದ ಘಟನೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಮಂಗಳವಾರ ರಾತ್ರಿ ರಿಖ್ನಿಖಾಲ್-ಬಿರೋಖಾಲ್ ರಸ್ತೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : Viral Video : ಇಬ್ಬರು ಹುಡುಗಿಯರಿಗೆ ಒಬ್ಬನೇ ಪ್ರೇಮಿ.. ಸಿಕ್ಕಿಬಿದ್ದಾಗ ಆಗಿದ್ದೇನು ನೋಡಿ.!
ಬಸ್ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
Uttarakhand | Rescue operation underway by SDRF after a bus carrying around 45 to 50 people fell into a gorge in the Birokhal area of Dhumakot in Pauri Garhwal district; one person has been found dead so far. pic.twitter.com/crbHXa1SQr
— ANI UP/Uttarakhand (@ANINewsUP) October 5, 2022
ಈ ಬಗ್ಗೆ ಮಾಹಿತಿ ನೀಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಘಟನಾ ಸ್ಥಳಕ್ಕೆ ತಂಡಗಳನ್ನು ರವಾನಿಸಲಾಗಿದೆ. ಅಲ್ಲಿ ಗ್ರಾಮಸ್ಥರಿಂದ ರಕ್ಷಣಾ ಕಾರ್ಯವೂ ನಡೆಯುತ್ತಿದೆ. ಎಲ್ಲರೂ ಸುರಕ್ಷಿತವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುಃಖಕರ ಘಟನೆ. ಬಸ್ಸಿನಲ್ಲಿ ಸುಮಾರು 45 ಕ್ಕೂ ಹೆಚ್ಚು ಜನರಿದ್ದಾರೆ ಅಂಬಾ ಮಾಹಿತಿ ಇದೆ, ಬಸ್ ಆಳವಾದ ಕಮರಿಗೆ ಬಿದ್ದಿದೆ. ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ರಕ್ಷಣಾ ಕಾರ್ಯ ಆರಂಭಿಸಬೇಕು, ನಾನೇ ಎಲ್ಲರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕಾಶ್ಮೀರದ ಪಹಾರಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ- ಅಮಿತ್ ಶಾ ಘೋಷಣೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.