Rameshwaram Cafe Bomb Blast Case: ಇಡೀ ರಾಷ್ಟ್ರಾದ್ಯಂತ ಸುದ್ದಿ ಮಾಡಿರುವ ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ (Bengaluru Rameswaram cafe blast) ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ದಿ. ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೂ ಹುಬ್ಬಳ್ಳಿಗೂ ಲಿಂಕ್ ಇದಿಯಾ ಎಂಬ ಬಗ್ಗೆ ಎನ್ಐಎ ನಾಲ್ವರು ಅಧಿಕಾರಿಗಳ ತಂಡ ಹುಬ್ಬಳ್ಳಿಯಲ್ಲಿ ತನಿಖೆ ಚುರುಕುಗೊಳಿಸಿದೆ.
ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ (Rameswaram cafe blast case) ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು, ಶಂಕಿತ ಉಗ್ರರು ಪ್ರತ್ಯೇಕ ಕೋಡ್ ವರ್ಡ್ಗಳ ಮೂಲಕ ಸಂಭಾಷಣೆ ನಡೆಸುತ್ತಿದ್ದರೆಂಬ ಬಗ್ಗೆ ಮಾಹಿತಿ ಕಲೆಹಾಕಿದ್ದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ಹುಬ್ಬಳ್ಳಿಗೂ ಲಿಂಕ್ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲದೆ, ಈ ಉಗ್ರರು ಇಸ್ಲಾಮಿಕ್ ಸ್ಟೇಟ್ (ಐಎಸ್) ಸಂಘಟನೆಯ ಭಯೋತ್ಪಾದಕರೊಂದಿಗೆ (Terrorist) ಸಂಪರ್ಕದಲ್ಲಿದ್ದು, ಅವರ ಸೂಚನೆಯ ಪ್ರಕಾರವೇ ವಿಧ್ವಂಸಕ ಕೃತ್ಯ ಎಸಗಲು ತಯಾರಿಯಲ್ಲಿ ತೊಡಗಿದ್ದರು ಎಂಬ ಮಾಹಿತಿ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ, ಎನ್ಐಎ ತಂಡ (NIA team) ಫುಲ್ ಅಲರ್ಟ್ ಆಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ : ಹಿಂದೂಗಳ ಹೆಸರಲ್ಲಿ ರೂಮ್ ಬಾಡಿಗೆ ಪಡೆದಿದ್ದ ಶಂಕಿತ ಉಗ್ರರು
ಇನ್ನೂ ಶಂಕಿತರಿಬ್ಬರ ಕೋಡ್ ವರ್ಡ್ ಸಂಭಾಷಣೆಯ (A code word conversation between the two suspects) ಮೂಲಕ ಬಾಂಬ್ ಸ್ಫೋಟದ ಸಂಚು ಹಾಗೂ ಪರಾರಿ ಮಾರ್ಗದ ಬಗ್ಗೆ ಪುರಾವೆಗಳು ಸಿಕ್ಕಿದ್ದು, ರಾಮೇಶ್ವರಂ ಸ್ಫೋಟ ಪ್ರಕರಣಕ್ಕೂ ಹುಬ್ಬಳಿಗೂ ಲಿಂಕ್ ಇರಬಹುದೇ? ಹುಬ್ಬಳ್ಳಿ ಉಗ್ರರ ತಾಣವಾಗುತ್ತಿದೆಯೇ? ಎಂಬಿತ್ಯಾದಿ ಆಯಾಮಗಳಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ವೈದ್ಯರಿಬ್ಬರ ವಿಚಾರಣೆ:
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆಯ ಭಾಗವಾಗಿ, ಎನ್ಐಎ ಅಧಿಕಾರಿಗಳು ಕೊಯಮತ್ತೂರಿನ ಸಾಯಿಬಾಬಾ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಅಭ್ಯಾಸ ಮಾಡುತ್ತಿದ್ದ ಇಬ್ಬರು ವೈದ್ಯರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ವರದಿಯಾಗಿದೆ.
ಕರ್ನಾಟಕ ರಾಜ್ಯ ಎನ್ಐಎ ಅಧಿಕಾರಿಗಳ ಕೋರಿಕೆಯ ಮೇರೆಗೆ, ಚೆನ್ನೈನ ಎನ್ಐಎ ಅಧಿಕಾರಿಗಳು ಕೊಯಮತ್ತೂರು ಪೊಲೀಸರೊಂದಿಗೆ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯದ ಜಾಫರ್ ಇಕ್ಬಾಲ್ ಮತ್ತು ನೈನ್ ಸಾದಿಕ್ ಸಾಯಿಬಾಬಾ ಕಾಲೋನಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ನೈನ್ ಸಾದಿಕ್ ಎರಡು ವರ್ಷಗಳ ತರಬೇತಿಯನ್ನು ಪೂರ್ಣಗೊಳಿಸಿದ್ದರೆ, ಜಾಫರ್ ಇಕ್ಬಾಲ್ ಎರಡನೇ ವರ್ಷಕ್ಕೆ ತರಬೇತಿ ಪಡೆಯುತ್ತಿದ್ದಾರೆ. ಈ ವೇಳೆ ಇಂದು ಬೆಳಗ್ಗೆ ಅವರು ವಾಸವಿರುವ ಮನೆಗಳಿಗೆ ತೆರಳಿದ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ- ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ - ಎನ್ ಐಎಯಿಂದ ಬಾಂಬ್ ಇಟ್ಟಿದ್ದ ಉಗ್ರ ಬಂಧನ
ಕೊಯಮತ್ತೂರು ಪೊಲೀಸರ ನೆರವಿನೊಂದಿಗೆ ಸಾಯಿಬಾಬಾ ಕಾಲೋನಿಯ ಸುಪ್ಪಣ್ಣ ಗೌಂಡರ್ ರಸ್ತೆ ಮತ್ತು ನಾರಾಯಣ ರಸ್ತೆಯಲ್ಲಿ ದಾಳಿ ನಡೆಸಿದ ರಾಷ್ಟ್ರೀಯ ಭದ್ರತಾ ಸಂಸ್ಥೆ ಅಧಿಕಾರಿಗಳು ಒಂದು ಗಂಟೆ ದಾಳಿ ನಡೆಸಿ ಅಲ್ಲಿಂದ ತೆರಳಿದರು. ಈ ಇಬ್ಬರಿಗೂ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಖಾಸಗಿ ಆಸ್ಪತ್ರೆಯಲ್ಲಿಯೂ ಸಹ ತನಿಖೆ ನಡೆಸಿದ್ದಾರೆ. ಇದಲ್ಲದೆ, ಈ ಇಬ್ಬರಿಂದಲೂ ಮೊಬೈಲ್ ವಶಪಡಿಸಿಕೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.