Muruga Mutt case: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಮುರುಘಾ ಶ್ರೀ ಶಿಫ್ಟ್!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗ ಜಿಲ್ಲಾ ಸರ್ಜನ್ ಡಾ‌.ಬಸವರಾಜ್ , ‘ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ರಸ್ತೆ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

Written by - Puttaraj K Alur | Last Updated : Sep 2, 2022, 03:07 PM IST
  • ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯ ಆರೋಗ್ಯದಲ್ಲಿ ಏರುಪೇರು
  • ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ
  • ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಿಂದ ರಸ್ತೆ ಮಾರ್ಗವಾಗಿ ಅಂಬುಲೆನ್ಸ್‍ನಲ್ಲಿ ಶ್ರೀಗಳ ರವಾನೆ
Muruga Mutt case: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಮುರುಘಾ ಶ್ರೀ ಶಿಫ್ಟ್!  title=
ಬೆಂಗಳೂರಿಗೆ ಮುರುಘಾ ಶ್ರೀ ಶಿಫ್ಟ್!

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಚಿತ್ರದುರ್ಗದ  ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಶ್ರೀಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಜಿಲ್ಲಾ ಸರ್ಜನ್ ಡಾ‌.ಬಸವರಾಜ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ರಸ್ತೆ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ’ ಎಂದು ಹೇಳಿದರು. ‘ಶ್ರೀಗಳು ಹೃದಯ ರೋಗದಿಂದ ಬಳಲುತ್ತಿದ್ದರು. ಎದೆ ನೋವಿನಿಂದ ಬಳಲುತ್ತಿದ್ದ ಶ್ರೀಗಳಿಗೆ ಬೆಳಗ್ಗೆಯಿಂದಲೇ ಚಿಕಿತ್ಸೆ ನೀಡಲಾಗಿದೆ. ಹೃದಯರೋಗ ಹಾಗೂ ರಕ್ತದೊತ್ತಡ ಹೆಚ್ಚು ಇರುವುದರಿಂದ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಬೇಕೆಂದು ದಾವಣಗೆರೆಯ ನಾರಾಯಣ ಹೃದಯಾಲಯದ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ʼಪ್ರಧಾನಿಗಳೇ ನೀವು ಆಡಿದ್ದ ಮಾತುಗಳನ್ನು ಕನ್ನಡಿಗರು ಮರೆತಿಲ್ಲʼ : ಮೋದಿಯನ್ನ ಕೆಣಕಿದ ʼಕೈʼ

ಶ್ರೀಗಳನ್ನು ಕೂಡಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲು ಸಲಹೆ ನೀಡಿದ್ದಾರೆ. ಅದರಂತೆ ಏರ್‍ಲಿಫ್ಟ್ ಮೂಲಕ ಅವರನ್ನು ಶಿಫ್ಟ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ರಸ್ತೆ ಮಾರ್ಗದ ಮೂಲಕ ಅವರನ್ನು ರವಾನಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಬೆಂಗಳೂರಿಗೆ ಶ್ರೀಗಳನ್ನು ಶಿಫ್ಟ್ ಮಾಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಿಂದ ಅಂಬುಲೆನ್ಸ್ ಮೂಲಕ ಹಿರಿಯೂರು,‌ ಶಿರಾ, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: Murugha Matta: ಮುರುಘಾ ಶ್ರೀ ಲೈಂಗಿಕರ ಕಿರುಕುಳ ಪ್ರಕರಣ : 2ನೇ ಆರೋಪಿ ಬಂಧನ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News