Road Accident In Bengaluru: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿ- ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿರುವ ದುರ್ಘಟನೆ ನಗರದ ಕೆ.ಆರ್. ಸರ್ಕಲ್ ಬಳಿ ನಿನ್ನೆ (ಭಾನುವಾರ, ಜುಲೈ 28) ರಾತ್ರಿ 8.45 ರ ಸುಮಾರಿಗೆ ನಡೆದಿದೆ. ಮೃತ ದುರ್ದೈವಿಗಳನ್ನು ಪ್ರಶಾಂತ್, ಶಿಲ್ಪಾ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾರೆ.
ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಮತ್ತು ಯುವತಿ ಶಿಲ್ಪ ಮೆಜೆಸ್ಟಿಕ್ ನಿಂದ ಕೆ ಆರ್ ಸರ್ಕಲ್ ಮಾರ್ಗವಾಗಿ ಬೈಕ್ ನಲ್ಲಿ ಬರುತ್ತಿದ್ದಾಗ ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್. ಸರ್ಕಲ್ ಕಡೆ ವೇಗವಾಗಿ ಬಂದಿರೋ ಕಸದ ಲಾರಿ ಡಿಕ್ಕಿ (Garbage Lorry) ಹೊಡೆದಿದ್ದು ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ- ಅಂತರ್ ರಾಜ್ಯ ಕುಖ್ಯಾತ ದರೋಡೆಕೋರ ಫರ್ಹಾನ್ ಶೇಖ್ ಬಂಧನ
ತಿರುವು ಇದ್ದ ಮಾರ್ಗದಲ್ಲಿ ಬಿಬಿಎಂಪಿ ಕಸದ ಲಾರಿ (BBMP Garbage Lorry) ವೇಗವಾಗಿ ಬಂದಿದ್ದರಿಂದ ತಪ್ಪಿಸಿಕೊಳ್ಳಲಾಗದೇ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರೂ ಕೂಡ ಲಾರಿ ಕೆಳಗೆ ಸಿಲುಕಿದ್ದಾರೆ. ಬೈಕ್ ಸವಾರರ ಮೇಲೆಯೇ ಹರಿದಿರುವ ಲಾರಿ 10 ಮೀಟರ್ ನಷ್ಟು ದೂರ ದೇಹಗಳನ್ನ ಎಳೆದೊಯ್ದಿದೆ.
ಅಪಘಾತಕ್ಕೊಳಗಾದವರನ್ನ ಕೂಡಲೇ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಗಿದೆ. ಆದಾಗ್ಯೂ, ಮಾರ್ಗದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ನಂತರ ಮೃತ ದೇಹಗಳನ್ನು ಸೆಂಟ್ ಮಾರ್ಥಸ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಹಲಸೂರು ಗೇಟ್ ಸಂಚಾರ ಪೊಲೀಸರು (Halasur Gate Traffic Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ- ಪ್ರೇಯಸಿ ಜೊತೆ ಹೆಡ್ಕಾನ್ಸ್ಟೇಬಲ್ ಲವ್ವಿಡವ್ವಿ..! ಪತ್ನಿ ಕೈಯಲ್ಲಿ ಸಿಕ್ಕಿ ಬಿದ್ದ 'ಪೋಲಿ'ಸಪ್ಪ!
ಬಿಬಿಎಂಪಿ ಕಸದ ಲಾರಿಯೊಂದಿಗಿನ ಅಪಘಾತದಲ್ಲಿ ಮೃತಪಟ್ಟಿರುವ ಯುವಕ-ಯುವತಿ ಇಬ್ಬರೂ ಐಟಿಪಿಎಲ್ ಟಿಸಿಎಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಊಟಕ್ಕೆಂದು ಹೊರಗೆ ಬಂದಾಗ ಈ ಆಪ್ಘಾತ ಸಂಭವಿಸಿದೆ. ಯುವಕ ಪ್ರಶಾಂತ್ (25) ಬೆಂಗಳೂರಿನ ಬಾಣಸವಾಡಿ ಮೂಲದವರು. ಯುವತಿ ಬಯನ್ನ ಗಾರಿ ಶಿಲ್ಪ(27) ಆಂಧ್ರ ಮೂಲದವರು. ಈಕೆ ಪಿಜಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.