Crime: ಪತ್ನಿಗೆ ಹೆದರಿಸಲು ಹೋಗಿ ತಾನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಇಟ್ಟುಕೊಂಡು ಪತಿಯೇ ನರಳಾಡಿದ ಘಟನೆ ತುಮಕೂರು ಜಿಲ್ಲೆ ನಡೆದಿದೆ. ವಿನೋದ್ (38 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ಭೂಪ.ಕೊರಟಗೆರೆ ತಾಲೂಕಿನ ತಂಗನಹಳ್ಳಿಯಲ್ಲಿ ತಡರಾತ್ರಿ ಘಟನೆ ನಡೆದಿದೆ.
ಏನಿದು ಘಟನೆ?
ಎಂದಿನಂತೆ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಇದರಿಂದ ಕುಪಿತಗೊಂಡ ಪತಿ ವಿನೋದ್ ಪತ್ನಿಗೆ ಹೆದರಿಸಲು ಮೈಮೇಲೆ ಪೆಟ್ರೋಲ್ ಸುರಿದು ಕೊಂಡು ಬೆಂಕಿ ಕಡ್ಡಿ ಹಚ್ಚಿದ್ದಾನೆ. ಕ್ಷಣಾರ್ಥದಲ್ಲಿ ಇಡೀ ದೇಹ ಬೆಂಕಿ ಆವರಿಸಿದೆ.
ಇದನ್ನೂ ಓದಿ- ಕಾನ್ಸ್ಟೇಬಲ್ ಪತ್ನಿ ಆತ್ಮಹತ್ಯೆ: ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ
ಈ ಘಟನೆಯಲ್ಲಿ ಪತಿ ವಿನೋದ್ ದೇಹ ಬಹುತೇಕ ಬೆಂಕಿಯಲ್ಲಿ ಸುಟ್ಟು ಹೋಗಿದೆ. ಸದ್ಯ ಸಾವು ಬದುಕಿನ ಜೋತೆ ನರಳಾಡುತ್ತಿರುವ ವಿನೋದ್ ನನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ಗೆ ದಾಖಲಿಸಲಾಗಿದೆ.
ಇದನ್ನೂ ಓದಿ- ಡ್ರೈವರ್ ಪಕ್ಕ ಕೂತು ದರೋಡೆ ಸ್ಕೇಚ್ ಹಾಕಿದ್ದ ಹಳೆ ಸ್ನೇಹಿತ...!
ಇನ್ನು ಸ್ಥಳೀಯರು ಆಂಬುಲೆನ್ಸ್ಗಾಗಿ ಫೋನ್ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಕಾದು ಕುಳಿತರೂ ಸಮಯಕ್ಕೆ ಅಂಬ್ಯೂಲೆನ್ಸ್ ಬಾರದ ಹಿನ್ನಲೆ ಫ್ರೆಂಡ್ಸ್ ಗ್ರೂಪ್ ಗೆಳೆಯರ ಬಳಗದಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಿ ವಿನೋದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಳಾಲಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಪ್ರತಿದಿನ ಕುಡಿದ ಮತ್ತಿನಲ್ಲಿ ಜಗಳ ಮಾಡುತ್ತಿದ್ದ ಎಂದು ಸ್ಥಳೀಯರ ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ