Life threat to PM Modi: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿಯವರನ್ನು ಸಾಯಿಸುವುದಾಗಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಅಡಿಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯ ವಿರುದ್ಧ ಯಾದಗಿರಿಯ ಸುರಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ(ಮಾರ್ಚ್ 05) ಎಫ್ಐಆರ್ ದಾಖಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಯಾದಗಿರಿ ಜಿಲ್ಲೆಯ ಮೊಹಮ್ಮದ್ ರಸೂಲ್ ಕದ್ದರೆ ಎಂದು ಗುರುತಿಸಲಾಗಿದೆ. ಆರೋಪಿ ಮೊಹಮ್ಮದ್ ರಸೂಲ್ ಫೇಸ್ಬುಕ್ನಲ್ಲಿ ವಿಡಿಯೋ ಹಾಕಿದ್ದು, ಅದರಲ್ಲಿ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿರುವುದು ಕಂಡು ಬಂದಿದೆ. ಆರೋಪಿ ಯಾದಗಿರಿ ಜಿಲ್ಲೆಯ ಸುರಪುರ ನಿವಾಸಿಯಾಗಿದ್ದು, ಹೈದರಾಬಾದ್ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ.
Karnataka | An FIR has been registered against Mohammed Rasool Kaddare at Yadgiri's Surpur police station. He shared a video on social media where he threatened to kill PM Modi if the Congress government came to power at the Centre. FIR has been registered under section…
— ANI (@ANI) March 5, 2024
ಇದನ್ನೂ ಓದಿ- Chamarajanagar: ಬಸ್ ಪಲ್ಟಿಯಾಗಿ 30 ಮಂದಿ ಕಾರ್ಮಿಕರಿಗೆ ಗಾಯ
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಆತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ- ಆನಂದಪುರ ಪೊಲೀಸ್ ಸ್ಟೇಷನ್ ಲಿಮಿಟ್ಸ್ ನಲ್ಲಿ ಅಚ್ಚರಿಯ ಘಟನೆ: ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆ!
ಆರೋಪಿ ವಿರುದ್ಧ ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 505(1)(ಬಿ), 25(1)(ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿರುವ ಯಾದಗಿರಿಯ ಸುರಪುರ ಪೊಲೀಸರು ಹೈದರಾಬಾದ್, ಯಾದಗಿರಿ ಸೇರಿದಂತೆ ವಿವಿಧೆಡೆ ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.