ಚಾಮರಾಜನಗರ: ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.
ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ ಡಾ.ಸಿಂದುಜಾ (28) ಸಾವನ್ನಪ್ಪಿದವರು. ಚೈನೈ ಮೂಲದ ವೈದ್ಯೆ ಸಿಂದುಜಾ ಕೊಳ್ಳೇಗಾಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಇದನ್ನೂ ಓದಿ: ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ - ಡಿಕೆಶಿ
ಶುಕ್ರವಾರ ಮಲಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕರ್ತವ್ಯಕ್ಕೆ ಹಾಜರಾಗದೆ ಇದ್ದರಿಂದ ಆಸ್ಪತ್ರೆ ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗ ಸಿಂದುಜಾ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಸಿಂದುಜಾ ಮಲಗಿರುವ ಸ್ಥಳದಲ್ಲಿ ಇಂಜೆಕ್ಷನ್ ಸಿರೀಂಜ್ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವ ಅಗತ್ಯವಿದೆ, ತಜ್ಞರ ಜೊತೆ ಚರ್ಚಿದ ಬಳಿಕ ತೀರ್ಮಾನ: ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.