ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಭಾನುವಾರ ಹನುಮ ಜಯಂತಿ ಆಚರಣೆ ವೇಳೆ ಯುವ ಬ್ರಿಗೇಡ್ ಮತ್ತು ನಮೋ ಬ್ರಿಗೇಡ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿ.ನರಸೀಪುರದ ಹೊರವಲಯದಲ್ಲಿ ಹನುಮ ಜಯಂತಿ ಆಚರಣೆ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ ಎಂಬುವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ: ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪ
Siddaramayya 2.0 expanding its tentacles. We lost one of our volunteers yesterday just because he was an active organiser of Hanuma Jayanti! He was brutally murdered by the supporters of Congress..
Karnataka burning..
Another WB soon to be witnessed..#YuvaBrigade pic.twitter.com/0vMDsdDSZV— Chakravarty Sulibele (@astitvam) July 10, 2023
ಈ ಸಂಬಂಧ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು ಮತ್ತು ಹಾರಿಸ್ ಎಂಬ 6 ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ನಾವು ಇನ್ನೂ ಕೊಲೆ ಆರೋಪಿಗಳನ್ನು ಬಂಧಿಸಿಲ್ಲ. ಹನುಮ ಜಯಂತಿ ಆಚರಣೆ ವೇಳೆ ಬ್ಯಾನರ್‌ಗಾಗಿ ಗುಂಪುಗಳ ನಡುವೆ ಹೊಡೆದಾಟ ಆರಂಭವಾಗಿತ್ತು ಎಂಬುದು ತಿಳಿದುಬಂದಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೊಲೆಯಾದ ವೇಣುಗೋಪಾಲ್ ನಾಯಕ್ ಮೃತದೇಹವನ್ನು ತಾಲೂಕಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆಯವರು ನಾಯಕ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಪರಿಸ್ಥಿತಿ ಸೂಕ್ಷ್ಮವಾದ ಹಿನ್ನೆಲೆಯಲ್ಲಿ ಸೋಮವಾರ ಟಿ.ನರಸೀಪುರ ಬಂದ್ ಆಚರಿಸಲಾಯಿತು. ಮುಂಜಾಗೃತಾ ಕ್ರಮವಾಗಿ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: Crime News : ವಿಧಾನಸೌಧಕ್ಕೆ ಚಾಕು ತಂದ ಮಹಿಳೆ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.