ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾವಿಸಿದ ಶಿವಣ್ಣ.. ಅಭಿಮಾನಿಗಳಲ್ಲಿ ಆತಂಕ!

ಅನಾರೋಗ್ಯದ ಕಾರಣ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಿವಣ್ಣ ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಮೈ ಕೈ ನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾವಿಸಿದ್ದಾರೆ ಎಂದು ತಿಳಿದುಬಂದಿದೆ.

Written by - Chetana Devarmani | Last Updated : Apr 20, 2022, 02:08 PM IST
  • ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾವಿಸಿದ ಶಿವಣ್ಣ
  • ಆಸ್ಪತ್ರೆಗೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್
  • ಜನರಲ್ ಬಾಡಿ ಚೆಕ್ ಅಪ್ ಮಾಡಿಸಿಕೊಂಡ ನಟ
ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾವಿಸಿದ ಶಿವಣ್ಣ.. ಅಭಿಮಾನಿಗಳಲ್ಲಿ ಆತಂಕ! title=
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

ಅನಾರೋಗ್ಯದ ಕಾರಣ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಿವಣ್ಣ ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಮೈ ಕೈ ನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾವಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿಚ್ಛೇದನದ ಬಳಿಕ ಎರಡನೇ ಮದುವೆಗೆ ರೆಡಿಯಾದ್ರಾ ನಾಗ ಚೈತನ್ಯ?

ವೇದ ಚಿತ್ರದ ನಿಮಿತ್ತ ಸದ್ಯ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಮೈಸೂರಿನಲ್ಲಿದ್ದಾರೆ. ಈ ವೇಳೆ ಮೈ ಕೈ ನೋವು ಕಾಣಿಸಿಕೊಂಡ ಹಿನ್ನೆಲೆ ಮೈಸೂರಿನಲ್ಲಿ ಜನರಲ್ ಬಾಡಿ ಚೆಕ್ ಅಪ್ ಮಾಡಿಸಿಕೊಂಡಿದ್ದಾರೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಜನರಲ್‌ ಬಾಡಿ ಚೆಕ್ ಅಪ್ ಮಾಡಿಸಿ ಶಕ್ತಿಧಾಮಕ್ಕೆ ಹಿಂತಿರುಗಿದ್ದಾರೆ. ಸದ್ಯ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಶಿವಣ್ಣ ದಂಪತಿ ಕಾಲ ಕಳೆಯುತ್ತಿದ್ದಾರೆ. 

ಇದನ್ನೂ ಓದಿ: ಕೆಜಿಎಫ್ 2 ಚಿತ್ರದ ಯಶಸ್ಸಿನ ನಂತರ ರಜನಿಕಾಂತ್ ಪುತ್ರಿ ಹೇಳಿದ್ದೇನು ಗೊತ್ತೇ?

ಈ ಬಗ್ಗೆ ಮಾಹಿತಿ ನೀಡಿರುವ ವೇದ ಚಿತ್ರದ ನಿರ್ದೇಶಕ ಎ.ಹರ್ಷ, ಶಿವಣ್ಣ ಆರೋಗ್ಯವಾಗಿದ್ದಾರೆ. ಜನರಲ್‌ ಬಾಡಿ ಚೆಕ್‌ ಅಪ್‌ಗೆ ಆಸ್ಪತ್ರೆಗೆ ತೆರಳಿದ್ದರು. ನಾಳೆಯಿಂದ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದ್ದಾರೆ. 

ಶಿವಣ್ಣ ಸಿನಿಮಾದ ಜೊತೆಗೆ ಮೈಸೂರಿನ ಶಕ್ತಿಧಾಮದ ಜವಾಬ್ದಾರಿ ವಹಿಸಿಕೊಂಡಿದ್ದು, ಸದ್ಯ ಶಕ್ತಿದಾಮದಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಶಿವರಾಜ್ ಕುಮಾರ್ ಸದ್ಯ ವೇದ ಸಿನಿಮಾ ಜೊತೆಗೆ ಕಿರುತೆರೆ ಕಾರ್ಯಕ್ರಮದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ಶೋನಲ್ಲಿ ಜಡ್ಜ್‌ ಆಗಿದ್ದು, ಸಖತ್ ಬ್ಯುಸಿಯಾಗಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News