“ಇವತ್ತು ಕನ್ನಡ ಚಿತ್ರರಂಗ ಉತ್ತುಂಗದಲ್ಲಿರಲು ಅಣ್ಣಾವ್ರು ಮತ್ತು ಅವರ ಕುಟುಂಬ ಕಾರಣ”

ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಹೇಯ ಕೃತ್ಯವೆಸಗಿರುವ ಕಿಡಿಗೇಡಿ ವಿಚಾರದಲ್ಲಿ ಪುನೀತ್ ರಾಜಕುಮಾರ್ ಅವರನ್ನು ಎಳೆದು ತರುತ್ತಿರುವುದಕ್ಕೆ ನಟ ದುನಿಯಾ ವಿಜಯ್ ಬೇಸರ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Dec 22, 2022, 04:17 PM IST
  • ಇವತ್ತು ಕನ್ನಡವಾಗಲಿ ಕನ್ನಡ ಚಿತ್ರರಂಗವಾಗಲಿ ಉತ್ತುಂಗ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಕಾರಣ ಹಲವಾರು ಮಹಾನುಭಾವರು .
  • ಅಂತಹವರ ಸಾಲಿನಲ್ಲಿ ಮಂಚೂಣಿಯಲ್ಲಿ ನಿಲ್ಲುವವರು ಅಂದ್ರೆ
  • ನಮ್ಮ ಅಣ್ಣಾವ್ರು ಮತ್ತೆ ಅಣ್ಣಾವ್ರ ಕುಟುಂಬದವರು ಎಂದು ಹೇಳಿದ್ದಾರೆ.
“ಇವತ್ತು ಕನ್ನಡ ಚಿತ್ರರಂಗ ಉತ್ತುಂಗದಲ್ಲಿರಲು ಅಣ್ಣಾವ್ರು ಮತ್ತು ಅವರ ಕುಟುಂಬ ಕಾರಣ” title=
file photo

ಬೆಂಗಳೂರು: ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಹೇಯ ಕೃತ್ಯವೆಸಗಿರುವ ಕಿಡಿಗೇಡಿ ವಿಚಾರದಲ್ಲಿ ಪುನೀತ್ ರಾಜಕುಮಾರ್ ಅವರನ್ನು ಎಳೆದು ತರುತ್ತಿರುವುದಕ್ಕೆ ನಟ ದುನಿಯಾ ವಿಜಯ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಸುದೀರ್ಘವಾಗಿ ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ದುನಿಯಾ ವಿಜಯ್ ಅವರು " ಇವತ್ತು ಕನ್ನಡವಾಗಲಿ ಕನ್ನಡ ಚಿತ್ರರಂಗವಾಗಲಿ ಉತ್ತುಂಗ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಕಾರಣ ಹಲವಾರು ಮಹಾನುಭಾವರು . ಅಂತಹವರ ಸಾಲಿನಲ್ಲಿ ಮಂಚೂಣಿಯಲ್ಲಿ ನಿಲ್ಲುವವರು ಅಂದ್ರೆ ನಮ್ಮ ಅಣ್ಣಾವ್ರು ಮತ್ತೆ ಅಣ್ಣಾವ್ರ ಕುಟುಂಬದವರು ಎಂದು ಹೇಳಿದ್ದಾರೆ.

ಇದನ್ನೂ ಓದಿ : Lucky Gemstone: ಈ ರಾಶಿಯವರು ಈ ರತ್ನವನ್ನು ಧರಿಸಿದರೆ ರಾಜಯೋಗ ಪಡೆಯುತ್ತೀರಿ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ವಿಧ್ಯಮಾನಗಳನ್ನು ಗಮನಿಸಿದರೆ ಒಬ್ಬನ ಅಚಾತುರ್ಯವನ್ನು ನೇರವಾಗಿ ಅಣ್ಣಾವ್ರ ಪುತ್ರ ಮತ್ತು ನಮ್ಮ ಕರುನಾಡಿನ ಹೆಮ್ಮೆಯ ಕುಡಿ ದಿವಂಗತ ಅಪ್ಪು ಅವರನ್ನು ಗುರಿಯಾಗಿಸುತ್ತಿದ್ದಾರೆ . ಇದು ಅತ್ಯಂತ ನೋವಿನ ಸಂಗತಿ.ಇಲ್ಲಿಗೇ ನಿಲ್ಲಿಸದೇ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಕೆಟ್ಟ ಭಾಷೆಯ ಪದಪ್ರಯೋಗಿಸುತ್ತಿದ್ದಾರೆ.ಇದಂತೂ ಯಾರೂ ಕ್ಷಮಿಸಲಾರದಂತಹ ಕೆಟ್ಟ ನಡೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

' ಒಂದಂತು ಸತ್ಯ ನಾವು ಮನುಷ್ಯರಾಗಿ ಎಷ್ಟೇ ಜನುಮವೆತ್ತಿದರೂ ಆ ದೇವತಾ ಮನುಷ್ಯನ ಬಗ್ಗೆಯಾಗಲಿ ಅವರ ಕುಟುಂಬದವರ ಬಗ್ಗೆಯಾಗಲಿ ಮಾತಾಡೋ ಯೋಗ್ಯತೇನೂ ಇಲ್ಲದವರು '  . ಇಂತಹ ಪರಿಸ್ಥಿತಿಯಲ್ಲಿ ಕಲಾವಿದರಾಗಿ ನಾವು ನಿಲ್ಲದೇ ಇದ್ದರೆ ಇದು ನಿಲ್ಲದೇ ಇನ್ನೊಂದು ಮಜಲನ್ನು ತಲುಪುವ ಅಪಾಯವಿದೆ" ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ : Vastu Tips For Camphor: ನಿಮ್ಮ ಹಲವು ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ನೀಡುತ್ತದೆ ಕರ್ಪೂರದ ಸಣ್ಣ ತುಂಡು

ನಾನು ದರ್ಶನ್ ಅವರಲ್ಲಿ ಕೇಳಿಕೊಳ್ಳುವುದು ಒಂದೇ ಮಾತು....ಅಂತಹ ಪರಿಸ್ಥಿತಿಯಲ್ಲೂ "ಪರ್ವಾಗಿಲ್ಲ ಬಿಡು ಚಿನ್ನ " ಎಂಬ ಸಹನೆಯ ಮಾತಾಡಿ  ಹೃದಯವನ್ನೇ ಗೆದ್ದಿದ್ದೀರಿ . ಇನ್ನೊಂದು ಮಾತು  ನಿಮ್ಮನ್ನು ಇಷ್ಟಪಡುವ  ಮತ್ತು ನಿಮ್ಮ ಮಾತನ್ನು ಎಂದೂ ದಾಟದ ನಿಮ್ಮ ಅಭಿಮಾನಿಗಳಿಗೆ ಹೇಳಿದರೆ ಎಲ್ಲವೂ ಸರಿಹೋಗುತ್ತದೆ ಎಂದು ದುನಿಯಾ ವಿಜಯ್ ಅವರು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News