Bigg Boss: ಹಳ್ಳಿಮನೆಯಲ್ಲಿ ಹೊತ್ಕೊಂಡಿದೆ ಮಾತಿನ ಬೆಂಕಿ!

BBK10: ಮಣ್ಣಿನ ಪಾತ್ರೆಗಳನ್ನು ಮಾಡುವ ಟಾಸ್ಕ್‌ನಲ್ಲಿ, ‘ಎದುರಾಳಿ ಕುಟುಂಬದ ಸದಸ್ಯರು ಅದನ್ನು ಕೆಡಿಸದಂತೆ ರಕ್ಷಿಸಿಕೊಳ್ಳಬೇಕು’ ಎಂಬ ನಿಯಮವೇ ಈ ಚಕಮಕಿಗೆ ಕಾರಣವಾದಂತಿದೆ. ಒಬ್ಬರು ಮಾಡಿದ ಪಾತ್ರೆಗಳನ್ನು ಕಿತ್ತುಕೊಳ್ಳಲು ಇನ್ನೊಬ್ಬರು ಬಂದಿರುವುದು ಜಗಳಕ್ಕೆ ಕಾರಣವಾಗಿದೆ.  

Written by - Yashaswini V | Last Updated : Nov 1, 2023, 10:57 AM IST
  • ಪ್ರಾರಂಭದಲ್ಲಿ ಹಳ್ಳಿ ಸೊಗಡಿನ ಡೈಲಾಗ್ಸ್‌, ಪರಸ್ಪರ ಕಾಲೆಳೆದುಕೊಳ್ಳುವ ಖುಷಿಯೊಂದಿಗೇ ಟಾಸ್ಕ್ ಆರಂಭಗೊಂಡಿತ್ತು.
  • ಎಲ್ಲರೂ ಅದನ್ನು ಎಂಜಾಯ್ ಮಾಡುತ್ತಿರುವಂತೆ ತೋರುತ್ತಿತ್ತು.
  • ಆದರೆ ಯಾವಾಗ ಹಳ್ಳಿ ಬದುಕಿನಲ್ಲಿ ಟಾಸ್ಕ್‌ ಶುರುವಾಗಿದೆಯೋ, ಒಲೆಯೊಳಗಿನ ಬೆಂಕಿ ಕಿಡಿ ಎರಡೂ ಕುಟುಂಬಗಳ ನಡುವೆಯೂ ಹಬ್ಬಿಕೊಂಡಿದೆ.
Bigg Boss: ಹಳ್ಳಿಮನೆಯಲ್ಲಿ ಹೊತ್ಕೊಂಡಿದೆ ಮಾತಿನ ಬೆಂಕಿ! title=

Bigg Boss Kannada 10: ‘ತಳ್ಳೋದು ಪಳ್ಳೋದು ಮಾಡಿದ್ರೆ ತೆಗ್ದು ಕಪಾಳಕ್ಕೇ ಬಾರಿಸ್ಬೇಕು, 'ಏ ಲೂಸರ್', 'ಬಾಯಿ ಮುಚ್ಕೊಂಡ್ ಆಡು, 'ಬಾಯಿ ಮುಚ್ಕೊಂಡ್ ಆಡು ಅನ್ನೋಕೆ ನೀನ್ಯಾವಳೇ?', 'ಕಿತ್ತೋದೋಳು' 'ನೀನ್ ಕಿತ್ತೋದೋಳು', 'ಮರ್ಯಾದೆ ಇಲ್ದಿರೋ ನಿನ್ನಂಥೋಳ ಹತ್ರ ಏನ್ ಮಾತು?', 'ಬಾರೋ', 'ಹೋಗಲೇ ಗಂಡಸಿನ ಥರ ಆಡು, ಬಳೆಗಳ ಹಾಕ್ಕೊಂಡು ಹೆಂಗಸರ ಥರ ಆಡೋದಲ್ಲ' -ಇವೆಲ್ಲ ಯಾವುದೋ ಬೀದಿ ಜಗಳವಲ್ಲ. ಬಿಗ್‌ಬಾಸ್‌ ಮನೆಯೊಳಗೇ ರೂಪುಗೊಂಡಿರುವ ಹಳ್ಳಿ ಟಾಸ್ಕ್‌ನಲ್ಲಿ ಕೇಳಿಬಂದ ಮಾತುಗಳು.

ಈ ಚಕಮಕಿಯ ತುಣುಕುಗಳು JioCinema ಬಿಡುಗಡೆ ಮಾಡಿರುವ ಬೆಳಗಿನ ಪ್ರೋಮೊದಲ್ಲಿ ಕಾಣಿಸಿಕೊಂಡಿವೆ. ನವೆಂಬರ್‍ 1ರ ರಾಜ್ಯೋತ್ಸವದ ಸಂಭ್ರಮದಲ್ಲಿ ಬಿಗ್‌ಬಾಸ್‌, ಮನೆಯೊಳಗಿನ ಸ್ಪರ್ಧಿಗಳಿಗೆ ಒಂದು ವಿಶಿಷ್ಟವಾದ ಟಾಸ್ಕ್‌ ಕೊಟ್ಟಿದ್ದರು. ಸದಸ್ಯರೆಲ್ಲರೂ ಎರಡು ಕುಟುಂಬಗಳಾಗಿ ವಿಭಾಗಗೊಂಡು ಹಳ್ಳಿ ಜೀವನವನ್ನು ನಡೆಸಬೇಕು. ಸಂಗೀತಾ ಮತ್ತು ವಿನಯ್ ಒಬ್ಬರೂ ಒಂದೊಂದು ಕುಟುಂಬದ ಮುಖ್ಯಸ್ಥರಾಗಬೇಕು ಎಂದು ಹೇಳಿದ್ದರು. 

ಇದನ್ನೂ ಓದಿ- BBK 10: ಹಳ್ಳಿಕಾರ್ ರೀ ಎಂಟ್ರಿಯಿಂದ ಕ್ರಿಯೆಟಾಯ್ತು ಹೊಸ ಜಗತ್ತು..! ಬಿಗ್‌ಬಾಸ್ ಮನೆಯೀಗ ಹಳ್ಳಿ

ಅದರ ಪ್ರಕಾರವೇ ಟಾಸ್ಕ್‌ ಆರಂಭಗೊಂಡಿತ್ತು. ಪ್ರಾರಂಭದಲ್ಲಿ ಹಳ್ಳಿ ಸೊಗಡಿನ ಡೈಲಾಗ್ಸ್‌, ಪರಸ್ಪರ ಕಾಲೆಳೆದುಕೊಳ್ಳುವ ಖುಷಿಯೊಂದಿಗೇ ಟಾಸ್ಕ್ ಆರಂಭಗೊಂಡಿತ್ತು. ಎಲ್ಲರೂ ಅದನ್ನು ಎಂಜಾಯ್ ಮಾಡುತ್ತಿರುವಂತೆ ತೋರುತ್ತಿತ್ತು. ಆದರೆ ಯಾವಾಗ ಹಳ್ಳಿ ಬದುಕಿನಲ್ಲಿ ಟಾಸ್ಕ್‌ ಶುರುವಾಗಿದೆಯೋ, ಒಲೆಯೊಳಗಿನ ಬೆಂಕಿ ಕಿಡಿ ಎರಡೂ ಕುಟುಂಬಗಳ ನಡುವೆಯೂ ಹಬ್ಬಿಕೊಂಡಿದೆ. 

ಮಣ್ಣಿನ ಪಾತ್ರೆಗಳನ್ನು ಮಾಡುವ ಟಾಸ್ಕ್‌ನಲ್ಲಿ, ‘ಎದುರಾಳಿ ಕುಟುಂಬದ ಸದಸ್ಯರು ಅದನ್ನು ಕೆಡಿಸದಂತೆ ರಕ್ಷಿಸಿಕೊಳ್ಳಬೇಕು’ ಎಂಬ ನಿಯಮವೇ ಈ ಚಕಮಕಿಗೆ ಕಾರಣವಾದಂತಿದೆ. ಒಬ್ಬರು ಮಾಡಿದ ಪಾತ್ರೆಗಳನ್ನು ಕಿತ್ತುಕೊಳ್ಳಲು ಇನ್ನೊಬ್ಬರು ಬಂದಿರುವುದು ಜಗಳಕ್ಕೆ ಕಾರಣವಾಗಿದೆ. ಅದರಲ್ಲಿಯೂ ಸಂಗೀತಾ ಮತ್ತು ನಮ್ರತಾ ನಡುವಿನ ಗಲಾಟೆ ಮತ್ತು ವಿನಯ್‌ ಮತ್ತು ಕಾರ್ತಿಕ್ ನಡುವಿನ ಜಿದ್ದಾಜಿದ್ದಿ ಕೈಕೈ ಮಿಲಾಯಿಸುವ ಮಟ್ಟಕ್ಕೂ ಹೋಗುವಂತಿದೆ. 

ಇದನ್ನೂ ಓದಿ- BBK 10: ಉಪ್ಪಿನಕಾಯಿ ಟೇಸ್ಟು ನಿಮಗೆ ಸಾಲ್ತಿಲ್ವಾ?.. ಟಿಶ್ಯೂ ಮೇಲೆ ಇಶಾನಿ ರಾಪ್‌ ಲಿರಿಕ್‌!

ಹೀಗೆ ಜಗಳದ ಕಿಡಿ ಹೊತ್ತಿಕೊಂಡ ಸಂದರ್ಭ ಯಾವುದು? ಅದರ ಪರಿಣಾಮ ಏನಾಗುತ್ತದೆ ಎಂಬುದನ್ನು ನೋಡಲು JioCinemaದಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಕನ್ನಡ ನೇರಪ್ರಸಾರವನ್ನು ವೀಕ್ಷಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News