MYTH FX Studio: ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ "MYTH FX" ಸ್ಟುಡಿಯೋ ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸುಸಜ್ಜಿತ ವಿ ಎಫ್ ಎಕ್ಸ್ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು. ನಂತರ ಗಣ್ಯರು ಹಾಗೂ ಸ್ಟುಡಿಯೋ ಮುಖ್ಯಸ್ಥರು ಮಾತನಾಡಿದರು.
ವಿಡಿಯೋ ಕಾನ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಾನು ಕವಿ ಕೂಡ. ನನ್ನ ಎರಡು ಕವನ ಸಂಕಲನಗಳನ್ನು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಬಿಡುಗಡೆ ಮಾಡಿದ್ದಾರೆ. ಆನಂತರ ನಟನಾಗುವ ಆಸೆ ಮೂಡಿತ್ತು. ಇತ್ತೀಚೆಗೆ ತೆರೆಕಂಡ "ದಿ ಸೂಟ್" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದೇನೆ. ಚಿತ್ರರಂಗಕ್ಕೆ ಅನುಕೂಲವಾಗುವಂತಹ ಏನಾದರೊಂದು ಕೆಲಸ ಮಾಡಬೇಕೆಂದು ನನಗೆ ಅನಿಸುತ್ತಲೇ ಇತ್ತು. ಆ ಸಮಯಕ್ಕೆ ನನಗೆ ಇಪ್ಪತ್ತಕ್ಕೂ ಅಧಿಕ ವರ್ಷಗಳ ಅನುಭವವಿರುವ ಲೋಕೇಶ್ ಹಾಗೂ ಮಾರುತಿ ಎಂಬ ನುರಿತ ತಂತ್ರಜ್ಞರು ಸಿಕ್ಕರು. ನಾವೆಲ್ಲಾ ಸೇರಿ ಈ "MYTH FX" ಸ್ಟುಡಿಯೋವನ್ನು ಆರಂಭ ಮಾಡಿದ್ದೇವೆ. ನಿರ್ಮಾಪಕರಿಗೆ ಅನುಕೂಲವಾಗುವಂತಹ ಸ್ಟುಡಿಯೋ ಮಾಡಿರುವ ಖುಷಿಯಿದೆ ಎಂದರು ನಟ ಹಾಗೂ "MYTH FX" ಮುಖ್ಯಸ್ಥ ಕಮಲ್.
ನನಗೆ ಸುಮಾರು ಇಪ್ಪತ್ತೈದು ವರ್ಷಗಳಿಂದ ಚಲನಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿ ಅನುಭವವಿದೆ ಎಂದು ಮಾತನಾಡಿದ ತಂತ್ರಜ್ಞ ಲೋಕೇಶ್, ಕಳೆದ ಒಂದು ವರ್ಷದಿಂದ ನಾವು ಈ ಸ್ಟುಡಿಯೋ ಕೆಲಸ ಆರಂಭಿಸಿದ್ದೇವೆ. ಸುಮಾರು ನೂರಕ್ಕೂ ಅಧಿಕ ಜನ ತಂತ್ರಜ್ಞರು ನಮ್ಮ ಸ್ಟುಡಿಯೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾವು ಕಾರ್ಯ ನಿರ್ವಹಿಸಿದ ಮೊದಲ ಚಿತ್ರ ಧ್ರುವ ಸರ್ಜಾ ಅಭಿನಯದ "ಮಾರ್ಟಿನ್". ಈಗ ರಮೇಶ್ ರೆಡ್ಡಿ ಅವರ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ "45" ಚಿತ್ರದ ಕೆಲಸ ಕೂಡ ನಮ್ಮ ಸ್ಟುಡಿಯೋದಲ್ಲೇ ನಡೆಯುತ್ತಿದೆ ಎಂದರು. ಮತ್ತೊಬ್ಬ ತಂತ್ರಜ್ಞ ಮಾರುತಿ ಸಹ ಸ್ಟುಡಿಯೋದ ಅನುಕೂಲತೆ ಬಗ್ಗೆ ಮಾತನಾಡಿದರು. ವಿತರಕ ರಾಜು ಪತ್ರಿಕಾಗೋಷ್ಠಿಯಲ್ಲಿದ್ದರು.
ಕಮಲ್ ಹಾಗೂ ಸ್ನೇಹಿತರು ಆರಂಭಿಸಿರುವ "MYTH FX" ಸ್ಟುಡಿಯೋದಿಂದ ಕನ್ನಡ ನಿರ್ಮಾಪಕರಿಗೆ ಅನುಕೂಲವಾಗಲಿದೆ. ಅವರ ಈ ಪ್ರಯತ್ನ ಯಶಸ್ವಿಯಾಗಲಿ ಎಂದು ಅತಿಥಿಗಳಾಗಿ ಆಗಮಿಸಿದ್ದ ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾರೈಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.