"ಕೊರಗಜ್ಜ" ಚಿತ್ರಕ್ಕೆ 3ನೇ ಬಾರಿ ಕ್ಲೈಮ್ಯಾಕ್ಸ್ ರೀ ಶೂಟ್

Koragajja: ನಟಿ ಶ್ರುತಿಯವರು ನಿರ್ವಹಿಸುತ್ತಿರುವ ಕೊರಗಜ್ಜನ ಸಾಕು ತಾಯಿ ಬೈರಕ್ಕೆ ಬೈಕಡ್ತಿ ಯ ದೇವಸ್ಥಾನವು ಉಡುಪಿ ಬಳಿ ಇದ್ದು, ಕೊರಗಜ್ಜ ಮತ್ತು ಸಾಕುತಾಯಿ ಬೈಕಡ್ತಿಯ ಸಂಬಂಧದ ಕುತೂಹಲಕಾರಿ ಅಂಶ ಕ್ಲೈಮ್ಯಾಕ್ಸ್ ನಲ್ಲಿ ಮೂಡಿಬರಲಿದೆ

Written by - Yashaswini V | Last Updated : Jun 19, 2023, 10:41 AM IST
  • "ಕೊರಗಜ್ಜ" ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ
  • ಚಿತ್ರೀಕರಣದ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ‌ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ VFX ಮತ್ತು ಗ್ರಾಫಿಕ್ಸ್ ತಂತ್ರಜ್ಞರು ಭಾಗಿ
"ಕೊರಗಜ್ಜ" ಚಿತ್ರಕ್ಕೆ 3ನೇ ಬಾರಿ ಕ್ಲೈಮ್ಯಾಕ್ಸ್ ರೀ ಶೂಟ್  title=

Koragajja Movie Climax Reshoot: ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರಕ್ಕೆ  ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ.  ಗಗನ‌ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು.

"ಕೊರಗಜ್ಜ" ಚಿತ್ರಕ್ಕೆ ಹಾಲಿವುಡ್ ತಂತ್ರಜ್ಞರಿಂದ ಗ್ರಾಫಿಕ್ಸ್ ಟಚ್! 
"ಕೊರಗಜ್ಜ" ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ‌ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ VFX ಮತ್ತು ಗ್ರಾಫಿಕ್ಸ್  ತಂತ್ರಜ್ಞರು ಭಾಗಿಯಾಗಿದ್ದರು. 

ಇದನ್ನೂ ಓದಿ- ಕೊರಗಜ್ಜ" ಚಿತ್ರಕ್ಕೆ ಕನ್ನಡದಲ್ಲಿ ಡಬ್ಬಿಂಗ್ ಮಾಡಿದ ಹಾಲಿವುಡ್-ಬಾಲಿವುಡ್ ನಟ "ಕಬೀರ್ ಬೇಡಿ"

ನಂತರ ಯಲಹಂಕದ ಬಳಿ ಇರುವ ಸ್ಟುಡಿಯೋ 9 ರಲ್ಲಿ ಸತತ ಐದು ದಿನಗಳ ಕಾಲ ಹಿರಿಯ ನಟಿ ಶ್ರುತಿ, ನಾಯಕ ನಟ ಭರತ್ ಸೂರ್ಯ ಮತ್ತು ರಂಗಭೂಮಿ ಕಲಾವಿದ ಡುಂಡ್ಸಿ ಮೊದಲಾದವರು ಗ್ರೀನ್ ಮ್ಯಾಟ್ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು.

ನಟಿ ಶ್ರುತಿಯವರು ನಿರ್ವಹಿಸುತ್ತಿರುವ ಕೊರಗಜ್ಜನ ಸಾಕು ತಾಯಿ ಬೈರಕ್ಕೆ ಬೈಕಡ್ತಿ ಯ ದೇವಸ್ಥಾನವು ಉಡುಪಿ ಬಳಿ ಇದ್ದು, ಕೊರಗಜ್ಜ ಮತ್ತು ಸಾಕುತಾಯಿ ಬೈಕಡ್ತಿಯ ಸಂಬಂಧದ ಕುತೂಹಲಕಾರಿ ಅಂಶ ಕ್ಲೈಮ್ಯಾಕ್ಸ್ ನಲ್ಲಿ ಮೂಡಿಬರಲಿದೆ

ಇದನ್ನೂ ಓದಿ- ಉತ್ತರ ಕರ್ನಾಟಕದಲ್ಲಿ ಕರಾವಳಿ ದೈವ..!

ಬಹುಕೋಟಿ ರುಪಾಯಿಗಳನ್ನು ಹೂಡಿ ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ರವರು ಧೃತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ಕನ್ನಡ, ಮಲಯಾಳಂ ಹಾಗೂ ತುಳು ಭಾಷೆಗಳಲ್ಲಿ ನಿರ್ಮಿಸುತ್ತಿರುವ ಈ ಚಿತ್ರದ ಸಂಕಲನ ಕಾರ್ಯವನ್ನು ಸುರೇಶ್ ಅರಸ್ ಮತ್ತು ವಿದ್ಯಾಧರ್ ಶೆಟ್ಟಿ ಮುಗಿಸಿದ್ದಾರೆ. 

ಈ ಚಿತ್ರಕ್ಕೆ ಸುಧೀರ್ - ಕೃಷ್ಣ‌ ಸಂಗೀತ ಸಂಯೋಜನೆ ಮಾಡಿದ್ದರೆ, ಡಿಓಪಿ ಯಾಗಿ ಪವನ್ ಕುಮಾರ್ ಕಾರ್ಯ ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ಕಬೀರ್ ಬೇಡಿ, ಭವ್ಯ, ಸಂದೀಪ್ ಸೊಪರ್ಕರ್, ನವೀನ್ ಪಡಿಲ್ ಹೀಗೆ ಅನೇಕ ಕಲಾವಿದರು ನಟಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News