Kannada Actress Leelavati Death: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದ ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ಲಿಲಾವತಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ವರದಿಗಳ ಪ್ರಕಾರ ಹಿರಿಯ ನಟಿಯ ಅಂತ್ಯ ಸಂಸ್ಕಾರವನ್ನು ನೆಲಮಂಗಲದ ಎಸ್ಟೇಟ್ನಲ್ಲಿ ನಡೆಸಲಾಗುವುದು. ಲಿಲಾವತಿಯವರ ಪಾರ್ಥಿವ ಶರೀರವನ್ನು ಅವರ ಫಾರ್ಮ್ಹೌಸ್ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.
ಹಿರಿಯ ನಟಿಗೆ ಜೀವಮಾನದ ಸಾಧನೆಗಾಗಿ ನಂದಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳಿಗೆ ಭಾಜನರಾಗಿದ್ದಾರೆ. 1937ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಲೀಲಾ ಕಿರಣ್ ಆಗಿ ಜನಿಸಿದ ಲಿಲಾವತಿಯರು ಕನ್ನಡ, ತಮಿಳು ಮತ್ತು ತೆಲುಗು ಚಲನಚಿತ್ರೋದ್ಯಮಗಳಲ್ಲಿ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: Leelavati: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ
ಸುಮಾರು 6 ದಶಕಗಳ ವೃತ್ತಿಜೀವನದಲ್ಲಿ ಲೀಲಾವತಿ ಅವರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ, ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಅವರು 1958ರಲ್ಲಿ ಕನ್ನಡ ಚಲನಚಿತ್ರ ʼಮಾಂಗಲ್ಯ ಯೋಗʼದೊಂದಿಗೆ ಸಿನಿಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ, ಸಂತ ತುಕಾರಂ, ರಣಧೀರ ಕಂಠೀರವ, ರಾಣಿ ಹೊನ್ನಮ್ಮ, ಗಾಳಿ ಗೋಪುರ, ನಾಗರಹಾವು, ಗೆಜ್ಜೆ ಪೂಜೆ ಮುಂತಾದ ಶ್ರೇಷ್ಠ ಚಿತ್ರಗಳಲ್ಲಿ ನಟಿಸಿದರು.
ಹಿರಿಯ ನಟಿಗೆ ಕರ್ನಾಟಕ ಸರ್ಕಾರದಿಂದ 1999ರಲ್ಲಿ ಡಾ.ರಾಜ್ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಅನೇಕ ಫಿಲ್ಮ್ಫೇರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಲೀಲಾವತಿ ಅಭಿನಯದ ಜೊತೆಗೆ ಕನ್ನಡದಲ್ಲಿ ಯಾರದು?, ಕಾಲೇಜ್ ಹೀರೋ, ಕನ್ನಡದ ಕಂದ, ಶುಕ್ರ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ಪುತ್ರ ವಿನೋದ್ ರಾಜ್ ಸೇರಿದಂತೆ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.
ಇದನ್ನೂ ಓದಿ: ಸಾರಾ ಜೊತೆ ಅಲ್ಲ… ಈ ನಟಿಯೊಂದಿಗೆ ಲಂಡನ್ ಬೀದಿಯಲ್ಲಿ ಸುತ್ತಾಡಿದ ಪ್ರಿನ್ಸ್ ಶುಭ್ಮನ್ ಗಿಲ್!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ