"ಪ್ರಧಾನಿ ಮೋದಿ ಭಗವಾನ್ ವಿಷ್ಣುವಿನ ಅಂಶ" - ಬಾಲಿವುಡ್ ನಟಿ ಕಂಗನಾ ಕಾಮೆಂಟ್ಸ್ ವೈರಲ್

Kangana Ranaut: ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಳು ಸಮೀಪಿಸುತ್ತಿವೆ. ಈ ತಿಂಗಳ 19 ರಂದು 102 ಲೋಕಸಭೆ ಕ್ಷೇತ್ರಗಳು ಸೇರಿದಂತೆ ಅರುಣಾಚಲ ಪ್ರದೇಶದ ಮೊದಲ ಹಂತದ ಮತದಾನ ನಡೆಯಲಿದೆ.  

Written by - Chetana Devarmani | Last Updated : Apr 4, 2024, 12:30 PM IST
  • ಲೋಕಸಭೆ ಚುನಾವಣೆ 2024
  • "ಪ್ರಧಾನಿ ಮೋದಿ ವಿಷ್ಣುವಿನ ಅಂಶ"
  • ಬಿಜೆಪಿ ಅಭ್ಯರ್ಥಿ ಕಂಗನಾ ಹೇಳಿಕೆ ವೈರಲ್
"ಪ್ರಧಾನಿ ಮೋದಿ ಭಗವಾನ್ ವಿಷ್ಣುವಿನ ಅಂಶ" - ಬಾಲಿವುಡ್ ನಟಿ ಕಂಗನಾ ಕಾಮೆಂಟ್ಸ್ ವೈರಲ್ title=
ಕಂಗನಾ

Kangana Ranaut Political Speech: ಕೇಂದ್ರ ಚುನಾವಣಾ ಆಯೋಗ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆಗಳನ್ನು ನಡೆಸಲಿದೆ. ಮೊದಲ ಹಂತದಲ್ಲಿ ನಡೆಯಲಿರುವ 102 ಲೋಕಸಭಾ ಕ್ಷೇತ್ರಗಳ ಚುನಾವಣಾ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಇದೇ ತಿಂಗಳ 19ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತದಾರರ ಮನವೊಲಿಸಲು ನಾನಾ ಕಸರತ್ತು ನಡೆಸುತ್ತಿದ್ದಾರೆ. 

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಾಲಿವುಡ್ ಫೈರ್‌ಬ್ರಾಂಡ್ ಕಂಗನಾ ರಣಾವತ್ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಬುಧವಾರ ಮಂಡಿ ಲೋಕಸಭಾ ಕ್ಷೇತ್ರದ ಕಾರ್ಸೋಗ್ ವಿಧಾನಸಭಾ ಕ್ಷೇತ್ರದಲ್ಲಿ ಕಂಗನಾ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ರೂಪದಲ್ಲಿ ನಮ್ಮೆಲ್ಲರ ಬಗ್ಗೆ ಯೋಚಿಸುವ ನಾಯಕ ಸಿಕ್ಕಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ‘ರಾಮಾಯಣ’ ಸಿನಿಮಾ ಸೆಟ್ ಫೋಟೋ ಲೀಕ್ ! 

ಪ್ರಧಾನಿ ಮೋದಿ ವಿಷ್ಣುವಿನ ಅಂಶ ಎಂದು ಹೇಳಿದ್ದು, ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಕಂಗನಾ ಈ ಬಾರಿಯ ಚುನಾವಣೆಯಲ್ಲಿ ತಮ್ಮದೇ ರಾಜ್ಯದಲ್ಲಿ ತಮ್ಮದೇ ಜಾಗದಲ್ಲಿ ಎಂಪಿ ಟಿಕೆಟ್‌‌ ಪಡೆದು ಸ್ಪರ್ಧಿಸುತ್ತಿರುವುದು ವಿಶೇಷ. ಕಂಗನಾ ಹುಟ್ಟಿ ಬೆಳೆದದ್ದು ಇದೇ ಲೋಕಸಭಾ ಕ್ಷೇತ್ರದಲ್ಲಿ. ಇದೇ ಮೊದಲ ಬಾರಿಗೆ ಕಂಗನಾ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಈ ಕ್ಷೇತ್ರಕ್ಕೆ ಜೂನ್ 1 ರಂದು ಏಳನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಚುನಾವಣಾ ಮತ ಎಣಿಕೆ ನಡೆಯಲಿದೆ.

ಕಂಗನಾ 2006 ರಲ್ಲಿ ಅನುರಾಗ್ ಬಸು ನಿರ್ದೇಶನದ 'ಗ್ಯಾಂಗ್‌ಸ್ಟರ್' ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಅದಾದ ನಂತರ ಹಲವು ಚಿತ್ರಗಳಲ್ಲಿ ನಟಿಸಿದ್ದರು.. 'ಕ್ವೀನ್' ಚಿತ್ರ ಇವರಿಗೆ ದೊಡ್ಡ ಬ್ರೇಕ್ ನೀಡಿತ್ತು. ಅದಕ್ಕೂ ಮೊದಲು, ಅವರು 'ಫ್ಯಾಶನ್' ಚಿತ್ರದಲ್ಲಿನ ಅಭಿನಯಕ್ಕಾಗಿ ಮೊದಲ ಬಾರಿಗೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದರು. ಆ ನಂತರ ‘ತನು ವೆಡ್ಸ್ ಮನು’, ತನು ವೆಡ್ಸ್ ಮನು ರಿಟರ್ನ್ಸ್, ಪಂಗಾ, ಮಣಿಕರ್ಣಿಕಾ ಮತ್ತು ತೇಜಸ್ ಚಿತ್ರಗಳು ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟವು. 

ಕಂಗನಾ ಮೂರು ಬಾರಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪೋಷಕ ನಟಿಯಾಗಿ ಒಮ್ಮೆ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಸದ್ಯದಲ್ಲೇ ‘ಎಮರ್ಜೆನ್ಸಿ’ ಸಿನಿಮಾ ಸಹ ರಿಲೀಸ್‌ ಆಗಲಿದೆ. ಅದರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಪಾತ್ರ ನಿರ್ವಹಿಸಿದ್ದಾರೆ. ಕಂಗನಾ ನಟಿ, ನಿರ್ಮಾಪಕಿ ಮತ್ತು ನಿರ್ದೇಶಕರಾಗಿ ಗುರುತಿಸಲ್ಪಟ್ಟಿದ್ದಾರೆ. 2020 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು.  

ಇದನ್ನೂ ಓದಿ: ತನಗಿಂತ 10 ವರ್ಷ ಚಿಕ್ಕವನ ಜೊತೆ ಕೃತಿ ಸನೋನ್ ಡೇಟಿಂಗ್, ವಿಶ್ವದ ಈ ಶ್ರೀಮಂತ ಉದ್ಯಮಿಯ ಪುತ್ರ.. ಯಾರು ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News