ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಆಚಾರ್ ಅಭಿನಯದ, ಪರಂವಃ ಪಿಕ್ಚರ್ಸ್ ನಿರ್ಮಾಣದ ‘ಸಪ್ತ ಸಾಗರದಾಚೆ ಎಲ್ಲೋ - Side B’ ಸಿನಿಮಾ ಇದೇ ನವೆಂಬರ್ 17ಕ್ಕೆ ಬಿಡುಗಡೆಯಾಗಲಿದೆ. ಹೇಮಂತ್ ಎಂ ರಾವ್ ನಿರ್ದೇಶನದ ಈ ಸಿನಿಮಾ ಕನ್ನಡ ಸೇರಿದಂತೆ ತೆಲುವು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
ಕಳೆದ ಕೆಲವು ದಿನಗಳಿಂದ ಈ ಚಿತ್ರದ Side B ಬಿಡುಗಡೆ ದಿನಾಂಕದ ಬಗ್ಗೆ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು. ಇದೀಗ ಈ ಬಗ್ಗೆ ಚಿತ್ರತಂಡ ಅಧಿಕೃತ ದಿನಾಂಕ ಘೋಷಿಸಿದೆ. ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ಚಿತ್ರದ ಪೋಸ್ಟರ್ ಹಂಚಿಕೊಂಡು ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: BBK10: ಬಿಗ್‌ಬಾಸ್ ಮನೆಯಲ್ಲಿ ಮ್ಯೂಸಿಕ್ ಕ್ಲಾಸ್..! ʼಸಂಗೀತʼಕ್ಕೆ ಅಭಿಮಾನಿಗಳು ಫುಲ್ ಫಿದಾ
Will there be a change in the course of destiny?
Sapta Sagaradaache Ello - Side B releases on 17th November in Kannada, Telugu, Tamil and Malayalam 🤍#SSESideBNov17 @hemanthrao11 @rukminitweets @Chaithra_Achar_ @charanrajmr2701 @AdvaithaAmbara #ParamvahPictures… pic.twitter.com/Bs5Iw0QXLW
— Rakshit Shetty (@rakshitshetty) October 20, 2023
‘ಸಪ್ತ ಸಾಗರದಾಚೆ ಎಲ್ಲೋ - Side A’ ಸಿನಿಪ್ರಿಯರಿಂದ ಅಪಾರ ಮೆಚ್ಚುಗೆ ಗಳಿಸಿತ್ತು. ಈ ಚಿತ್ರವನ್ನು ಅಕ್ಟೋಬರ್ ತಿಂಗಳಿನಲ್ಲಿಯೇ ಬಿಡುಗಡೆ ಮಾಡುತ್ತೇವೆಂದು ಈ ಮೊದಲು ಚಿತ್ರತಂಡ ಹೇಳಿಕೊಂಡಿತ್ತು. ಬಳಿಕ ಬಿಡುಗಡೆ ದಿನಾಂಕವನ್ನು ಮುಂದೂಡಿತು. ಹೀಗಾಗಿ ಚಿತ್ರದ Side B ಬಿಡುಗಡೆ ಬಗ್ಗೆ ಗೊಂದಲವುಂಟಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.
ರಕ್ಷಿತ್ ಶೆಟ್ಟಿ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ವಿಧಿಯ ಹಾದಿಯಲ್ಲಿ ಬದಲಾವಣೆಯಾಗುವುದೇ? ‘ಸಪ್ತ ಸಾಗರದಾಚೆ ಎಲ್ಲೋ - ಸೈಡ್ ಬಿ’ ನವೆಂಬರ್ 17ರಂದು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ’ ಎಂದು ಹೇಳಿದ್ದಾರೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಗಳಿಸಿದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಎ’ ಇದೀಗ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
ಇದನ್ನೂ ಓದಿ: Anirudh Ravichander: ʼಲಿಯೋʼಗಾಗಿ ಅನಿರುದ್ಧ್ ಪಡೆದ ಸಂಭಾವನೆ ಎಷ್ಟು ಗೊತ್ತಾ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.