ʼಸ್ಟೋರಿ ಆಫ್ ಸೌಜನ್ಯʼ...ಸಿನಿಮಾ ಆಗಲಿದೆ ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ..!

Story of Soujanya : ಅಕ್ಟೋಬರ್ 9ರಂದು ಅಪಹರಿಸಲಾದ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಸಾವಿನ ಕಥೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ.

Written by - Savita M B | Last Updated : Jul 21, 2023, 12:58 PM IST
  • ಧರ್ಮಸ್ಥಳದ ಸೌಜನ್ಯ ಅವರನ್ನು ಅಪಹರಿಸಲಾಯಿತು
  • ಸೌಜನ್ಯ ಅವರ ಮೇಲೆ ಅತ್ಯಾಚಾರವೂ ನಡೆದಿತ್ತು.
  • ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ
ʼಸ್ಟೋರಿ ಆಫ್ ಸೌಜನ್ಯʼ...ಸಿನಿಮಾ ಆಗಲಿದೆ ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ..!  title=

Soujanya Rape case : 2012ರಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ ಅವರನ್ನು ಅಪಹರಿಸಲಾಯಿತು. ಅದೇ ದಿನ ರಾತ್ರಿ ಅವರ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು. 

ಸೌಜನ್ಯ ಅವರ ಮೇಲೆ ಅತ್ಯಾಚಾರವೂ ನಡೆದಿತ್ತು. ಆದರೆ ಈ ಕೇಸ್‌ಗೆ ಸಂಬಂಧಿಸಿದಂತೆ ಬಂದನಕ್ಕೊಳಗಾಗಿದ್ದ ಸಂತೋಷ್ ರಾವ್ ಅವರು ನಿರಪರಾಧಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ.

ಇದನ್ನೂ ಒದಿ-50 ನೇ ವಯಸ್ಸಿನಲ್ಲಿ ಮತ್ತೆ ತಂದೆಯಾದ ಖ್ಯಾತ ನಟ, ಮದುವೆಯಾಗದೇ ಎರಡನೇ ಮಗು ಪಡೆದ ಬಾಲಿವುಡ್‌ ತಾರೆ!

ನೈಜ ಘಟನೆಯಾಧಾರಿತ ಸಿನಿಮಾಗಳು ಸಾಕಷ್ಟಿವೆ. ಅಪಹರಿಸಲಾದ ಹಾಗೂ ಅತ್ಯಾಚಾರಕ್ಕೊಳಗಾದ ಎಷ್ಟೋ ಮಹಿಳೆಯರ ನೊಂದ ಕಥೆಗಳನ್ನು ಸಿನಿಮಾ ಮಾಡಲಾಗಿದೆ. ಇದೀಗ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದು,  ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಸೌಜನ್ಯ ಅವರ ಸಾವಿನ ಕಥೆ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದ್ದು,  ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಕಥಾಹಂದವನ್ನು ಒಳಗೊಂಡಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಬರಲಿದೆ. 

ಇದನ್ನೂ ಒದಿ-ದಿ ರೆಕಾರ್ಡಿಂಗ್ ಅಕಾಡೆಮಿ ಮತದಾನ ಸದಸ್ಯರಾಗಿ ಇಂಡೋ-ಆಸ್ಟ್ರೇಲಿಯನ್ ಗಾಯಕ ಶ್ರೀರಾಮ್ ಅಯ್ಯರ್ ಆಯ್ಕೆ .

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News