ಕನ್ನಡದ ಕಾಂತಾರ ಒಂದು ದೊಡ್ಡ ಸ್ಫೂರ್ತಿ : "ತಂಗಲಾನ್‍" ಪ್ರಚಾರದ ವೇಳೆಗೆ ಚಿಯಾನ್ ವಿಕ್ರಮ್ ಬಿಚ್ಚು ಮಾತು

‘ತಂಗಲಾನ್’ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರೆ. ಈ ಸಿನಿಮಾಗಾಗಿ ದೇಹ ತೂಕವನ್ನು ಕೂಡಾ ಬಹಳವಾಗಿಯೇ ಕಳೆದುಕೊಂಡಿದಾರಂತೆ.

Written by - Ranjitha R K | Last Updated : Aug 8, 2024, 10:30 AM IST
  • ‘ತಂಗಲಾನ್’ ಚಿತ್ರ ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಬಿಡುಗಡೆ
  • ಐದು ಭಾಷೆಗಳಲ್ಲಿ ತೆರೆ ಕನಾಲಿರುವ ಸಿನಿಮಾ
  • ಸಿನಿಮಾ ಬಗ್ಗೆ ಚಿತ್ರ ತಂಡದ ಮಾತು

Trending Photos

ಕನ್ನಡದ ಕಾಂತಾರ ಒಂದು ದೊಡ್ಡ ಸ್ಫೂರ್ತಿ : "ತಂಗಲಾನ್‍"  ಪ್ರಚಾರದ ವೇಳೆಗೆ ಚಿಯಾನ್ ವಿಕ್ರಮ್ ಬಿಚ್ಚು ಮಾತು  title=

ಬೆಂಗಳೂರು : ಜ್ಞಾನವೇಲ್ ರಾಜ್ ನಿರ್ಮಾಣದ ಪ.ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್’ ಚಿತ್ರ ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. 

ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರವಾಗಿ ಹೊರ ತಂದಿದ್ದಾರೆ "ಕಬಾಲಿ" ಖ್ಯಾತಿಯ ನಿರ್ದೇಶಕ ಪ. ರಂಜಿತ್‍. ಈ ಚಿತ್ರದಲ್ಲಿ ವಿಕ್ರಮ್,ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟಿಷ್‍ ನಟ ಡೇನಿಯಲ್‍ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ : ಸರಳ ಸೂಟ್‌ ಧರಿಸಿ ಅಭಿಮಾನಿಗಳ ಮನ ಗೆದ್ದ ಸುಂದರಿ..ಸಂಪ್ರಾದಾಯಕ್ಕೆ ಮತ್ತೊಂದು ಹೆಸರೇ ಈಕೆ ಎಂದ ಫ್ಯಾನ್ಸ್‌

ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ "ಅನ್ನಿಯನ್", "ಪಿತಾಮಗನ್" ಸೇರಿದಂತೆ  ಹಲವು  ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ.ಆದರೆ, ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ.ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು.ನಾವು ನಮಗೆ ಗೊತ್ತಿಲ್ಲದ ಪಾತ್ರಗಳಾಗುವುದೇ ನಿಜವಾದ ಕಷ್ಟ.ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು? ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ.ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು.ಈ ಚಿತ್ರಕ್ಕಾಗಿ ಒಂದು ಶತಕದ ಹಿಂದಕ್ಕೆಹೋಗುವಂತಾಯಿತು ಎಂದು ತಿಳಿಸಿದರು.

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರೆಯಂತೆ. ಇದಕ್ಕಾಗಿ ತುಂಬಾ ತೂಕವನ್ನು ಕಳೆದುಕೊಂಡಿದಾರಂತೆ.ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು.ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಹಂಚಿಕೊಂಡರು. 

ಇದನ್ನೂ ಓದಿ : ತಂದೆ ಮೃತದೇಹದ ಮುಂದೆ ಅಳುತ್ತಾ ಕುಳಿತ್ತಿದ್ದ ಹುಡುಗಿ ಸಲ್ಮಾನ್‌ ಖಾನ್‌ಗೆ ತಂಗಿ ಆಗಿದ್ದು ಹೇಗೆ ಗೊತ್ತಾ..?

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವುದಕ್ಕೆ ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ದೊಡ್ಡ ಸ್ಫೂರ್ತಿ ಎಂದು ತಿಳಿಸಿದ ಚಿಯಾನ್ ವಿಕ್ರಮ್, ಉತ್ತಮ  ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎನ್ನುವುದನ್ನು ಆ ಚಿತ್ರ ತೋರಿಸಿತು’ ಎಂದರು.

ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕ ಪ.ರಂಜಿತ್ ವಿವರಿಸಿದರು. "ನಾನು ಮತ್ತು ವರಲಕ್ಷ್ಮೀ"  ಕನ್ನಡ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ ನಟಿ ಮಾಳವಿಕ ಮೋಹನನ್ "ತಂಗಲಾನ್" ಚಿತ್ರದ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಹಾಲಿವುಡ್ ನಟ ಡೇನಿಯಲ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಈ ಚಿತ್ರ ಪ್ರತಿಷ್ಠಿತ ಕೆ.ವಿ‌.ಎನ್ ಸಂಸ್ಥೆಯ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ‌.

ಇದನ್ನೂ ಓದಿ : 'ಮರ್ಫಿ' ಸಿನಿಮಾದ ಮನಮೋಹಕ ಹಾಡು ಬಿಡುಗಡೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News