ಈ ಆಹಾರಗಳ ಮೂಲಕ ಬ್ಲಡ್ ಪ್ರೆಶರ್ ಅನ್ನು ಸುಲಭವಾಗಿ ಕಂಟ್ರೋಲ್ ಮಾಡಬಹುದು .!

Food For Blood Pressure:ರಕ್ತದೊತ್ತಡ ಹೆಚ್ಚಾದಾಗ ತಲೆನೋವು, ಉಸಿರಾಟಕ್ಕೆ ತೊಂದರೆ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಕಾಯಿಲೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದಿದ್ದರೆ, ಪಾರ್ಶ್ವವಾಯು, ಮೂತ್ರಪಿಂಡದ ಹಾನಿಯಂತಹ ಸಮಸ್ಯೆಗಳು ಕೂಡಾ ಎದುರಾಗಬಹುದು. 

Written by - Ranjitha R K | Last Updated : Jan 9, 2023, 04:45 PM IST
  • ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.
  • ಅಧಿಕ ರಕ್ತದೊತ್ತಡವನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯಲಾಗುತ್ತದೆ.
  • ಇದು ಹೃದ್ರೋಗ ಮತ್ತು ಹೃದಯಾಘಾತದ ಅಪಾಯವನ್ನು ಕೂಡಾ ಹೆಚ್ಚಿಸುತ್ತದೆ.
ಈ ಆಹಾರಗಳ ಮೂಲಕ ಬ್ಲಡ್ ಪ್ರೆಶರ್ ಅನ್ನು ಸುಲಭವಾಗಿ ಕಂಟ್ರೋಲ್ ಮಾಡಬಹುದು .! title=

Food For Blood Pressure : ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದೊತ್ತಡವನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯಲಾಗುತ್ತದೆ. ಇದು ಹೃದ್ರೋಗ ಮತ್ತು ಹೃದಯಾಘಾತದ ಅಪಾಯವನ್ನು ಕೂಡಾ ಹೆಚ್ಚಿಸುತ್ತದೆ. ರಕ್ತದೊತ್ತಡ ಹೆಚ್ಚಾದಾಗ ತಲೆನೋವು, ಉಸಿರಾಟಕ್ಕೆ ತೊಂದರೆ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಕಾಯಿಲೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದಿದ್ದರೆ, ಪಾರ್ಶ್ವವಾಯು, ಮೂತ್ರಪಿಂಡದ ಹಾನಿಯಂತಹ ಸಮಸ್ಯೆಗಳು ಕೂಡಾ ಎದುರಾಗಬಹುದು. ಅಧಿಕ ರಕ್ತದೊತ್ತಡವನ್ನು ಕೆಲವು ಆಹಾರಗಳ ಮೂಲಕ ನಿಯಂತ್ರಣ ಮಾಡಿಕೊಳ್ಳಬಹುದು. 

ಕರಿಮೆಣಸು :
ಪ್ರತಿಯೊಂದು ಅಡುಗೆಮನೆಯಲ್ಲಿಯೂ ಕಂಡುಬರುವ ಪದಾರ್ಥ ಕರಿಮೆಣಸು. ಇದು ದೇಹವನ್ನು ಬೆಚ್ಚಗಿಡುತ್ತದೆ. ಜೀರ್ಣಕ್ರಿಯೆಯನ್ನು ಸರಾಗಗೊಲಿಸುವಲ್ಲಿ ಸಹಾಯ ಮಾಡುತ್ತದೆ. ಕೆಮ್ಮನ್ನು ನಿಯಂತ್ರಿಸುತ್ತದೆ. ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಕೂಡಾ ಇದು ಒಳ್ಳೆಯ ಔಷಧಿ ಎನ್ನಲಾಗಿದೆ. 

ಇದನ್ನೂ ಓದಿ : High Cholesterol: ಕಣ್ಣಿನ ಸುತ್ತಲಿನ ಈ ಬದಲಾವಣೆಗಳು ಅಧಿಕ ಕೊಲೆಸ್ಟ್ರಾಲ್‌ನ ಲಕ್ಷಣಗಳು

ನೆಲ್ಲಿಕಾಯಿ :
ಅಧಿಕ ರಕ್ತದೊತ್ತಡದಲ್ಲಿ ಹುಳಿ ಹಣ್ಣುಗಳು ಪ್ರಯೋಜನಕಾರಿಯಾಗಿರುತ್ತವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ನೆಲ್ಲಿಕಾಯಿಯನ್ನು ತಿನ್ನುವಂತೆ ಸೂಚಿಸಲಾಗುತ್ತದೆ. ನಿತ್ಯ ನೆಲ್ಲಿಕಾಯಿ ಸೇವಿಸುತ್ತಿದ್ದರೆ ಬ್ಲಡ್ ಪ್ರೆಶರ್ ನಿಯಂತ್ರಣಕ್ಕೆ ಬರುತ್ತದೆ. 

ಬೆಳ್ಳುಳ್ಳಿ  :

ಅಧಿಕ ರಕ್ತದೊತ್ತಡಕ್ಕೆ ಬೆಳ್ಳುಳ್ಳಿ ಉತ್ತಮ ನೈಸರ್ಗಿಕ ಪರಿಹಾರವಾಗಿದೆ. ಇದರಲ್ಲಿ ಅಧಿಕ ರಕ್ತದೊತ್ತಡವನ್ನು ತಡೆಯುವ ಗುಣಗಳು ಅಡಗಿವೆ. ಪ್ರತಿದಿನ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಿಸಬಹುದು.

ಇದನ್ನೂ ಓದಿ : Turmeric Health Tips: ಯೂರಿಕ್ ಆಸಿಡ್ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಮನೆಮದ್ದು

ಒಣದ್ರಾಕ್ಷಿ :
ಒಣಗಿಸಿದ ಕಪ್ಪು ಒಣದ್ರಾಕ್ಷಿ ಫೈಬರ್ ಮತ್ತು ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಅವುಗಳನ್ನು ಸಿಹಿತಿಂಡಿಗಳಲ್ಲಿ ಸೇರಿಸಿ ತಿನ್ನಬಹುದು. ಅಥವಾ ಹಾಗೆಯೇ ಬರೀ ಒಣ ದ್ರಾಕ್ಷಿಯನ್ನೇ ಸೇವಿಸಬಹುದು. ಈ ರೀತಿ ಮಾಡುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ತುಳಸಿ :
ತುಳಸಿ ಕೂಡಾ ಅಧಿಕ ರಕ್ತದೊತ್ತಡಕ್ಕೆ ನೈಸರ್ಗಿಕ ಪರಿಹಾರ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸಬಹುದು. ಹೀಗೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.

 

 ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News