ಬೆಂಗಳೂರು: ಸಾಮಾನ್ಯವಾಗಿ ಮಳೆ-ಚಳಿ ಇರುವಾಗ ಹೆಚ್ಚಿನ ಜನರು ಉಗುರು ಬೆಚ್ಚನೆಯ ನೀರು ಸೇವಿಸಲು ಬಯಸುತ್ತಾರೆ. ಬಿಸಿನೀರನ್ನು ಸ್ನಾನಕ್ಕೂ ಕೂಡ ಬಳಸುತ್ತಾರೆ. ಮಳೆಯಿಂದ ಉಂಟಾಗುವ ಚಳಿಯ ವಾತಾವರಣದಲ್ಲಿ ಉಗುರುಬೆಚ್ಚಗಿನ ನೀರು ಸೇವಿಸುವುದರಿಂದ ಶೀತ ಮತ್ತು ಕೆಮ್ಮು ಬರುವ ಅಪಾಯ ಕಡಿಮೆಯಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರೊಂದಿಗೆ, ಇದು ಬ್ಯಾಕ್ಟೀರಿಯಾದ ದಾಳಿಯಿಂದಲೂ ಕೂಡ ಗಂಟಲನ್ನು ರಕ್ಷಿಸುತ್ತದೆ. ಮಳೆಗಾಲದಲ್ಲಿ ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಈ ಕಾರಣದಿಂದಾಗಿ, ರಕ್ತ ಪರಿಚಲನೆಯು ಉತ್ತಮವಾಗಿರುತ್ತದೆ ಮತ್ತು ಇತರ ಅನೇಕ ಪ್ರಯೋಜನಗಳು ಇದರಿಂದಾಗುತ್ತವೆ.
ಬಿಸಿನೀರಿನ ಪ್ರಯೋಜನಗಳು
1. ಉಗುರು ಬೆಚ್ಚನೆಯ ನೀರನ್ನು ಕುಡಿಯುವುದರಿಂದ, ದೇಹದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ. ಇದಲ್ಲದೆ ಬಿಸಿ ನೀರು ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ನೋಡ ವೇಗವಾಗಿ ಸುಡುತ್ತದೆ. ಬಿಸಿನೀರು ಕುಡಿಯುವುದರಿಂದ ವೇಗವಾಗಿ ತೂಕ ಕೂಡ ಇಳಿಕೆಯಾಗುತ್ತದೆ. ಬಿಸಿನೀರು ಮೂತ್ರಪಿಂಡದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆಯನ್ನೂ ಕೂಡ ನಿವಾರಿಸುತ್ತದೆ.
2. ದಿನನಿತ್ಯ ಬಿಸಿನೀರು ಕುಡಿದರೆ ತ್ವಚೆಯ ಶುಷ್ಕತೆ ಕಡಿಮೆಯಾಗಿ ತ್ವಚೆಯನ್ನು ಕಾಂತಿಯುತವಾಗಿಸುತ್ತದೆ ಮತ್ತು ಮಂಕಾಗುತ್ತಿರುವ ತ್ವಚೆಯು ಮತ್ತೆ ಯೌವನಭರಿತವಾಗಿ ಕಾಣಲಾರಂಭಿಸುತ್ತದೆ. ಇದು ದೇಹದಲ್ಲಿ ಹಾನಿಗೊಳಗಾದ ಜೀವಕೋಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಬಿಸಿನೀರು ಹೊಟ್ಟೆಯಲ್ಲಿನ ಗ್ಯಾಸ್ ಸಮಸ್ಯೆಯಿಂದಲೂ ಕೂಡ ಪರಿಹಾರವನ್ನು ನೀಡುತ್ತದೆ.
ಇದನ್ನೂ ಓದಿ-ತೂಕ ಹೆಚ್ಚಳ ಸಮಸ್ಯೆಯಿಂದ ನೀವೂ ತೊಂದರೆಗೀಡಾಗಿದ್ದೀರಾ? ಈ ಡ್ರಿಂಕ್ ಟ್ರೈ ಮಾಡಿ ನೋಡಿ!
3. ನೀವು ಪ್ರತಿದಿನ ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡಿದರೆ, ದೇಹದ ರಕ್ತ ಪರಿಚಲನೆಯು ಉತ್ತಮವಾಗಿ ಉಳಿಯುತ್ತದೆ ಮತ್ತು ದೇಹದಲ್ಲಿ ಹಾರ್ಮೋನ್ ಸಮತೋಲನ ಸರಿಯಾಗಿರುತ್ತದೆ. ಇದರೊಂದಿಗೆ ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಬಿಸಿನೀರು ಕೂದಲಿನ ಬೆಳವಣಿಗೆಗೂ ಕೂಡ ಸಹಾಯ ಮಾಡುತ್ತದೆ ಮತ್ತು ಕೂದಲಿಗೆ ಹೊಳಪನ್ನು ತರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಇದನ್ನೂ ಓದಿ-ದೈಹಿಕ ಸಂಬಂಧ ಬೆಳೆಸಿದ ಬಳಿಕ ಖಾಸಗಿ ಅಂಗದಿಂದ ರಕ್ತ ಬಂದರೆ ಈ 4 ಕಾಯಿಲೆಗಳ ಸಂಕೇತವಾಗಿರಬಹುದು ಎಚ್ಚರ !
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆಗಳನ್ನು ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.