Okra water health benefits : ಬೆಂಡೆಕಾಯಿ ತಿನ್ನಲು ಎಷ್ಟು ರುಚಿಯೋ ಆರೋಗ್ಯಕ್ಕೂ ಅಷ್ಟೇ ಪ್ರಯೋಜನಕಾರಿ. ಬೇಸಿಗೆ ಕಾಲದಲ್ಲಿ, ಈ ತರಕಾರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಲಾಗುತ್ತದೆ.ಬೆಂಡೆಕಾಯಿಯನ್ನು ತಿನ್ನುವುದರ ಜೊತೆಗೆ ಅದರ ನೀರನ್ನು ಕುಡಿಯುವುದು ಕೂಡಾ ಆರೋಗ್ಯದ ಮೇಲೆ ಅನೇಕ ರೀತಿಯಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ.ಇತ್ತೀಚಿನ ದಿನಗಳಲ್ಲಿ, ಬೆಂಡೆಕಾಯಿ ನೀರಿನ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡಾ ಸಾಕಷ್ಟು ಚರ್ಚೆಯಾಗುತ್ತಿದೆ.ಕೆಲವರ ಪ್ರಕಾರ, ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ತೂಕ ನಷ್ಟಕ್ಕೆ ಸಹಾಯವಾಗುತ್ತದೆ.
ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಆರೋಗ್ಯ ಪ್ರಯೋಜನ :
ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ವಿಟಮಿನ್ ಬಿ 6 ಜೊತೆಗೆ ಆಹಾರದ ಫೈಬರ್ ಕೂಡಾ ಈ ತರಕಾರಿಯಲ್ಲಿ ಕಂಡುಬರುತ್ತದೆ. ಬೆಂಡೆಕಾಯಿ ಸೇವಿಸುವುದರಿಂದ ಮತ್ತು ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ,ಈ ಎಲ್ಲಾ ಪೋಷಕಾಂಶಗಳ ಪ್ರಯೋಜನ ದೇಹಕ್ಕೆ ಸಿಗುತ್ತದೆ.
ಇದನ್ನೂ ಓದಿ : High Uric Acid ಸಮಸ್ಯೆ ಇದ್ದರೆ ಈ ಆಹಾರವನ್ನು ಮುಟ್ಟಿಯೂ ನೋಡಬೇಡಿ!
ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ :
ಕೆಲವು ಆರೋಗ್ಯಕರ ಕಾರ್ಬೋಹೈಡ್ರೇಟ್ಗಳು ಬೆಂಡೆಕಾಯಿ ನೀರಿನಲ್ಲಿ ಕಂಡುಬರುತ್ತವೆ. ಇದು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿ ನೀರನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನದಲ್ಲಿಡಲು ಸಾಧ್ಯವಾಗುತ್ತದೆ.ಈ ನೀರನ್ನು ಕುಡಿಯುವುದರಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುವುದೇ ಇಲ್ಲ.
ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ :
ಮಧುಮೇಹ ರೋಗಿಗಳಲ್ಲಿ ಸಕ್ಕರೆಯ ಪ್ರಮಾಣವು ಅಧಿಕವಾಗಿದ್ದರೆ,ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುತ್ತದೆ ಎನ್ನುವ ಭಯದಿಂದ ಮಧುಮೇಹಿಗಳು ಯಾವುದೇ ವಸ್ತುವನ್ನು ತಿನ್ನಲು ಹಿಂದೆ ಮುಂದೆ ಯೋಚಿಸುತ್ತಾರೆ.
ರಾತ್ರಿಯಿಡೀ ಬೆಂಡೆಕಾಯಿಯನ್ನು ನೀರಿನಲ್ಲಿ ನೆನೆಸಿ ಕುಡಿಯುವುದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಬೆಂಡೆಕಾಯಿ ನೀರು ಸೇವನೆ ಮಾಡುವುದರಿಂದ ಬೆಂಡೆಕಾಯಿಯಲ್ಲಿರುವ ಪಾಲಿಫಿನಾಲ್ಗಳು ಮತ್ತು ಫ್ಲೇವನಾಯ್ಡ್ಗಳಂತಹ ಅಂಶಗಳು ದೇಹವನ್ನು ತಲುಪುತ್ತವೆ. ಈ ಮೂಲಕ ಸಕ್ಕರೆಯ ಮಟ್ಟ ಏರದಂತೆ ತಡೆಯಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರು ಕುಡಿದರೆ ಇವೆಯಂತೆ ಅದ್ಭುತ ಪ್ರಯೋಜನಗಳು
ಇದರ ಜೊತೆಗೆ ಈ ನೀರನ್ನು ಕುಡಿಯುವುದು ಫ್ರೀ ರಾಡಿಕಲ್ ಗಳಿಂದ ಉಂಟಾಗುವ ಹಾನಿಯಿಂದ ರಕ್ಷಣೆ ನೀಡುತ್ತದೆ.
ಲೇಡಿಫಿಂಗರ್ ನೀರನ್ನು ಹೇಗೆ ತಯಾರಿಸಲಾಗುತ್ತದೆ? :
ಬೆಂಡೆಕಾಯಿ ನೀರನ್ನು ತಯಾರಿಸಲು, 4-5 ಬೆಂಡೆಕಾಯಿಯನ್ನು ಉದ್ದನೆಯ ತುಂಡುಗಳಾಗಿ ಕತ್ತರಿಸಿ. ನಂತರ ಕತ್ತರಿಸಿದ ಬೆಂಡೆಕಾಯಿಯನ್ನು ಒಂದು ಕಪ್ ನೀರಿನಲ್ಲಿ ಹಾಕಿ.ರಾತ್ರಿಯಿಡೀ ಅದನ್ನು ನೀರಿನಲ್ಲಿ ನೆನೆಸಿಟ್ಟು ಮರುದಿನ ಬೆಳಿಗ್ಗೆ ಈ ನೀರನ್ನು ಕುಡಿಯಿರಿ.
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE KANNADA NEWS ಇದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.