ಬೆಂಗಳೂರು: ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಸಾಮಾನ್ಯವಾಗಿ ಎಣ್ಣೆಯುಕ್ತ ಫಾಸ್ಟ್ ಫುಡ್ ಹಾಗೂ ಜಂಕ್ ಫುಡ್ ಸೇವನೆ ಮಾಡಬಾರದು. ಅವುಗಳ ಬದಲಿಗೆ ಫೈಬರ್ ಯುಕ್ತ ಆಹಾರ ಸೇವಿಸಬೇಕು. ಇಂದು ನಾವು ನಿಮಗೆ ಕೆಲ ಸೂಪರ್ ಡ್ರಿಂಕ್ಸ್ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅವುಗಳ ಸೇವನೆಯಿಂದ ನೀವು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಗ್ರೀನ್ ಟೀ ಕ್ಯಾಟೆಚಿನ್ ಮತ್ತು ಎಪಿಗಲ್ಲೊಕಾಟೆಚಿನ್ ಗ್ಯಾಲೇಟ್ ಅನ್ನು ಹೊಂದಿರುತ್ತದೆ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಇದನ್ನು ದಿನಕ್ಕೆರಡು ಬಾರಿ ಸೇವಿಸಬೇಕು.ಇದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆಯಾಗುತ್ತದೆ.
ಬೆಳಗಿನ ಉಪಾಹಾರದಲ್ಲಿ ಓಟ್ಸ್ ಮಿಲ್ಕ್ ಅನ್ನು ಸೇವಿಸಿ, ಇದು ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಬೀಟಾ-ಗ್ಲುಕನ್ ಅಂಶವು ಪಿತ್ತರಸದ ಉಪ್ಪಿನೊಂದಿಗೆ ಸೇರಿಕೊಂಡು ಕರುಳಿನಲ್ಲಿ ಜೆಲ್ ತರಹದ ಪದರವನ್ನು ರೂಪಿಸುತ್ತದೆ, ಇದು ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ ಟೊಮ್ಯಾಟೊ ತಿನ್ನುವುದು ಒಳ್ಳೆಯದು, ಏಕೆಂದರೆ ಅದರಲ್ಲಿ ನೀರಿನ ಅಂಶವು ಹೆಚ್ಚಾಗಿರುತ್ತದೆ. ಇದು ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕದ ಸಮೃದ್ಧ ಮೂಲವಾಗಿದೆ, ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ. ಇದರಲ್ಲಿರುವ ಫೈಬರ್ ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ. ಆದ್ದರಿಂದ ನಿಯಮಿತವಾಗಿ ಟೊಮೆಟೊ ರಸವನ್ನು ಕುಡಿಯಿರಿ.
ಇದನ್ನೂ ಓದಿ-ನಿರ್ಜೀವವಾಗಿ ಉದುರುತ್ತಿರುವ ತಲೆ ಕೂದಲುಗಳಿಗೆ ಈ ಗಿಡಮೂಲಿಕೆ ಎಣ್ಣೆ ರಾಮಬಾಣ ಉಪಾಯ!
ಸೋಯಾ ಮಿಲ್ಕ್ ಆರೋಗ್ಯಕ್ಕೆ ತುಂಬಾ ಹಿತಕಾರಿಯಾಗಿದೆ. ಏಕೆಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ದೈನಂದಿನ ಆಹಾರದಲ್ಲಿ ಶಾಮೀಲುಗೊಳಿಸಿದರೆ ಉತ್ತಮ.
ಇದನ್ನೂ ಓದಿ-ರಾತ್ರಿ ಮಲಗುವ ಮುನ್ನ ಈ ಕೆಂಪು ಚಹಾ ಸೇವಿಸಿ, ಸಿಗುತ್ತವೆ 5 ಜಬರ್ದಸ್ತ್ ಲಾಭಗಳು!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ