IT Raid: 40 ಕೋಟಿ ರೂ. ಸೀಜ್‌; ಕಂತೆ ಕಂತೆ ನೋಟು ನೋಡಿ ಅಧಿಕಾರಿಗಳು ದಂಗು!

IT Raid in Uttar Pradesh: ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.

Written by - Puttaraj K Alur | Last Updated : May 19, 2024, 05:34 PM IST
  • ಆಗ್ರಾದ ಶೂ ತಯಾರಿಕಾ ಉದ್ಯಮಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ
  • ಬರೊಬ್ಬರಿ 40 ಕೋಟಿ ರೂ. ಹಣ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು
  • ಕಂತೆ ಕಂತೆ ನೋಟುಗಳನ್ನು ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು
IT Raid: 40 ಕೋಟಿ ರೂ. ಸೀಜ್‌; ಕಂತೆ ಕಂತೆ ನೋಟು ನೋಡಿ ಅಧಿಕಾರಿಗಳು ದಂಗು! title=
40 ಕೋಟಿ ರೂ. ಹಣ ವಶಕ್ಕೆ

IT Raid in Uttar Pradesh: ಶೂ ತಯಾರಿಕಾ ಉದ್ಯಮಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬರೊಬ್ಬರಿ 40 ಕೋಟಿ ರೂ. ಹಣವನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಆಗ್ರಾದ ಮೂವರು ಶೂ ವ್ಯಾಪಾರಿಗಳ ನಿವಾಸ ಮತ್ತು ಕಚೇರಿಯ ಮೇಲೆ ರೇಡ್‌ ಮಾಡಿದ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕಂತೆ ಕಂತೆ ನೋಟುಗಳನ್ನು ಕಂಡು ಹೌಹಾರಿದ್ದಾರೆ.

ಇದನ್ನೂ ಓದಿ: Terrorist Attack: ಜಮ್ಮು ಕಾಶ್ಮೀರದಲ್ಲಿ ಏಕಕಾಲಕ್ಕೆ ಎರಡು ಕಡೆ ಉಗ್ರರ ದಾಳಿ.. ಶೋಪಿಯಾನ್‌ನಲ್ಲಿ ಬಿಜೆಪಿ ಮುಖಂಡನ ಹತ್ಯೆ !

ಈ ಐಟಿ ದಾಳಿ ವೇಳೆ 40 ಕೋಟಿ ರೂ.ಗೂ ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೇವಲ 500 ರೂ. ಮುಖಬೆಲೆಯ ನೋಟುಗಳ ಕಂತೆ ಕಂತೆಗಳು ಅಧಿಕಾರಿಗಳಿಗೆ ಸಿಕ್ಕಿವೆ.

ಈ ಪ್ರಕರಣ ಸಂಬಂಧ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಚದ ಮೇಲೆ ಕಂತೆ ಕಂತೆ ನೋಟುಗಳನ್ನು ಜೋಡಿಸಿಟ್ಟಿರುವ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

ಇದನ್ನೂ ಓದಿ: ಚಲಿಸುತ್ತಿರುವ ಬಸ್ ಗೆ ಧಿಡೀರ್ ಬೆಂಕಿ...8 ಜನರ ಧಾರುಣ ಸಾವು 

ಕೆಲ ದಿನಗಳ ಹಿಂದಷ್ಟೇ ಇಡಿ ಅಧಿಕಾರಿಗಳು ಜಾರ್ಖಂಡ್‌ ರಾಜಧಾನಿ ರಾಂಚಿಯ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News