ಉತ್ತರಕಾಶಿ: ಉತ್ತರಾಖಂಡನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಉತ್ತರಕಾಶಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
ಭಾರೀ ಮೇಘಸ್ಫೋಟದ ಬಳಿಕ ಉತ್ತರಕಾಶಿ(Uttarkashi) ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ(SDRF) ತಂಡದ ಉಸ್ತುವಾರಿ ಇನ್ಸ್ ಪೆಕ್ಟರ್ ಜಗದಾಂಬಾ ಪ್ರಸಾದ್ ಹೇಳಿಕೆ ಉಲ್ಲೇಖಿಸಿ ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.
Uttarakhand: 3 people died and four people were reported as missing after a cloudburst in Mando village in Uttarkashi district, says Inspector Jagdamba Prasad, Team Incharge, State Disaster Response Force (SDRF) pic.twitter.com/krNECEjtSe
— ANI (@ANI) July 19, 2021
ಇದನ್ನೂ ಓದಿ: ಸಿಎಂ ಅಮರಿಂದರ್ ಜೊತೆಗಿನ ಸಂಘರ್ಷದ ನಡುವೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಸಿಧು ನೇಮಕ
ಎಸ್ಡಿಆರ್ಎಫ್(SDRF) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಂಡೋ ಗ್ರಾಮದ ಗಂಗೋತ್ರಿ ರಸ್ತೆಗೆ ಚರಂಡಿ ನೀರು ನುಗ್ಗಿದ್ದು, ಕೆಲವರು ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ಪ್ರಸಾದ್ ಅವರಿಗೆ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.
ಇದನ್ನೂ ಓದಿ: "ನನ್ನ ಜೊತೆ ಸೆಲ್ಫಿ ತೆಗೆಸಿಕೊಳ್ಳಲು 100 ರೂಪಾಯಿ ನೀಡಬೇಕು"- ಬಿಜೆಪಿ ಸಚಿವೆ
ಪಶ್ಚಿಮ ಹಿಮಾಲಯ(Western Himalaya) ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಎಚ್ಚರಿಕೆ ನೀಡಿದೆ. ಜಮ್ಮುವಿನ ವಿಭಾಗ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ವಾಯುವ್ಯ ಮಧ್ಯಪ್ರದೇಶ, ಪೂರ್ವ ಮತ್ತು ಪಶ್ಚಿಮ ರಾಜಸ್ಥಾನ, ದಕ್ಷಿಣ ಹರ್ಯಾಣ, ಪಶ್ಚಿಮ ಬಂಗಾಳ ಸೇರಿದಂತೆ ಇನ್ನು ಅನೇಕ ಪ್ರದೇಶಗಳಲ್ಲಿ ಭರ್ಜರಿ ಮಳೆ(Heavy Rain)ಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಮುಂದಿನ ಜುಲೈ 21ರವರೆಗೆ ಈ ಎಲ್ಲ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ನದಿಪಾತ್ರದಲ್ಲಿರುವ ಜನರು ಸುರಕ್ಷಿತ ಸ್ಥಳಗಳತ್ತ ತೆರಳುವಂತೆ ಸಲಹೆ ನೀಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.