ಛತ್ತೀಸ್‌ಗಢ: ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ವಾಗ್ವಾದ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF Personnel) ಯೋಧರು ಹುತಾತ್ಮರಾಗಿದ್ದಾರೆ. ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, 13 ಸೈನಿಕರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Telangana: Treatment of the jawans, injured in the incident of fratricide at CRPF 50 Bn Lingalapalli camp under Maraiguda Police station limits (in Sukma district of Chhattisgarh), is underway at Area Hospital Bhadrachalem. pic.twitter.com/0ZQ8H8RSSe
— ANI (@ANI) November 8, 2021
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆ(Sukma District)ಯ ಮರೈಗುಡೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಆರ್‌ಪಿಎಫ್ 50 ಬೆಟಾಲಿಯನ್‌ನ ಲಿಂಗಂಪಲ್ಲಿ(Lingampalli Village) ಬೇಸ್ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ದೀಪಾವಳಿ ಹಬ್ಬದ ರಜೆ ವಿಚಾರವಾಗಿ ಯೋಧರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಈ ವೇಳೆ ಇಬ್ಬರು ಯೋಧರ ನಡುವಿನ ಜಗಳ ತಾರಕ್ಕೇರಿದ್ದು, ಪರಸ್ಪರ ಕೈಕೈಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಬಳಿಕ ಪರಸ್ಪರ ಗನ್‌ಗಳಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರಿಬ್ಬರ ಜೊತೆಗೆ ಮತ್ತಿಬ್ಬರು ಯೋಧರೂ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Central Govt Employees : ಸರ್ಕಾರಿ ನೌಕರರ ಈ ಸೌಲಭ್ಯ ನಾಳೆಯಿಂದ ಬಂದ್ : ಹೊಸ ಮಾರ್ಗಸೂಚಿ ಗೊತ್ತಾ?
Chhattisgarh: Four jawans of CRPF 50 Bn killed and 3 injured in a case of fratricide in a CRPF camp in Maraiguda Police station limits of Sukma. A jawan had opened fire at the camp. pic.twitter.com/4ZF64RCNKM
— ANI (@ANI) November 8, 2021
ದೀಪಾವಳಿ ರಜೆ ವಿಚಾರವಾಗಿ ಕೋಪಗೊಂಡ ರೀತೇಶ್ ರಂಜನ್ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾನೆ. ಮೃತರನ್ನು ಬಿಹಾರದ ದಾಂಜಿ, ರಾಜಮಣಿ ಕುಮಾರ್ ಯಾದವ್, ಧರ್ಮೇಂದ್ರ ಕುಮಾರ್ ಮತ್ತು ಪಶ್ಚಿಮ ಬಂಗಾಳದ ರಾಜೀಬ್ ಮಂಡಲ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಭದ್ರಾಚಲಂ ಏರಿಯಾ ಆಸ್ಪತ್ರೆ( Area Hospital Bhadrachalem)ಗೆ ರವಾನಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಕೆಲ ಯೋಧರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ‘ಕಣ್ಣು ಕೀಳುತ್ತೇನೆ, ಕೈ ಕತ್ತರಿಸುತ್ತೇನೆ’: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಂಸದನ ಬೆದರಿಕೆ
ಗುಂಡಿನ ದಾಳಿ ನಡೆಸಿರುವ ಯೋಧನ ವಿಚಾರಣೆ
ಸೋಮವಾರ ಮುಂಜಾನೆ 3.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ (Bastar range)ಪಿ.ಸುಂದರರಾಜ್ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಒಬ್ಬ ಯೋಧ ತನ್ನ ಬಳಿ ಇದ್ದ AK-47 ಸರ್ವೀಸ್ ರೈಫಲ್‌ನಿಂದ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೂಡಲೇ ಯೋಧನನ್ನು ಬಂಧಿಸಲಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ