ಲಖನೌ: ಉತ್ತರಪ್ರದೇಶದ ಲಖನೌನ ಚಾರ್ಬಾಗ್ ನಗರದಲ್ಲಿರುವ ಪ್ರಸಿದ್ಧ ಅಂತರರಾಷ್ಟ್ರೀಯ ಹೋಟೆಲ್ ವಿರಾಟ್'ನಲ್ಲಿ ಮಂಗಳವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ.
"ಹೋಟೆಲ್'ನಿಂದ 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ" ಎಂದು ಲಖನೌ ಐಜಿ ಎಸ್.ಪಾಂಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
4 people have died & more than 50 people were rescued from the building. Cause of fire still to be ascertained. If we find any lapse on hotel's part during our investigation, we will take strict action against the people concerned: S Pandey, IG Lucknow on Charbagh fire incident pic.twitter.com/R6UoP7jUCx
— ANI UP (@ANINewsUP) June 19, 2018
ಆರಂಭದಲ್ಲಿ ಹೋಟೆಲ್ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಕೊಂಡಿದ್ದು, ನಂತರ ಎಲ್ಲಾ ಮಹಡಿಗಳಿಗೂ ವಿಸ್ತರಿಸಿದೆ. ಅಷ್ಟೇ ಅಲ್ಲದೆ, ಬೆಂಕಿಯ ಜ್ವಾಲೆ ಹೆಚ್ಚಾಗಿದ್ದರಿಂದ ಅಕ್ಕ ಪಕ್ಕದ ಕಟ್ಟಡಗಳಿಗೂ ಬೆಂಕಿ ತಗುಲಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಈ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಎಸ್.ಪಾಂಡೆ ತಿಳಿಸಿದ್ದಾರೆ.