PM Modi statement on missile attack on Gaza hospital: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ನಡುವೆ, ಮಂಗಳವಾರ ರಾತ್ರಿ ಗಾಜಾದ ಆಸ್ಪತ್ರೆಯ ಮೇಲೆ ರಾಕೆಟ್ ದಾಳಿ ನಡೆದಿದ್ದು, 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಗೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ.
ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಈ ಭಾಗಗಳಲ್ಲಿ 2 ದಿನ ಗುಡುಗು-ಮಿಂಚು ಸಹಿತ ಕುಂಭದ್ರೋಣ ಮಳೆ ಭೀತಿ
ಈ ದಾಳಿಗೆ ಇಸ್ರೇಲ್ ಹಮಾಸ್ ಅನ್ನು ದೂಷಿಸಿದೆ. ಆದರೆ ಹಮಾಸ್ ಮತ್ತು ಪ್ಯಾಲೆಸ್ಟೀನಿಯಾದವರು ಇಸ್ರೇಲ್ ಅನ್ನು ದೂಷಿಸುತ್ತಿದ್ದಾರೆ. ಇದೇ ವಿಷಯದ ಸಂಬಂಧ ಪ್ರಪಂಚದಾದ್ಯಂತದ ನಾಯಕರು ಈ ದಾಳಿಯನ್ನು ಟೀಕಿಸುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಗಾಜಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಬಾಂಗ್ಲಾ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಪ್ರಕಟಿಸಿದ ಕೋಚ್- ಈ ಮೂವರು ಆಟಗಾರರಿಗಿಲ್ಲ ಅವಕಾಶ
“ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಡೆದ ದುರಂತದಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ. ಈ ಘರ್ಷಣೆಯಲ್ಲಿ ಜೀವ ಮತ್ತು ಆಸ್ತಿ ನಷ್ಟವು ಗಂಭೀರ ಮತ್ತು ನಿರಂತರ ಕಳವಳಕಾರಿ ವಿಷಯವಾಗಿದೆ. ಇದರಲ್ಲಿ ಭಾಗಿಯಾದವರು ಹೊಣೆ ಹೊರಬೇಕು” ಎಂದು ಪ್ರಧಾನಿ ಮೋದಿ ದಾಳಿಯನ್ನು ಖಂಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್