ನವದೆಹಲಿ : ಅನ್ಲಾಕ್ 5.0 ಅಡಿಯಲ್ಲಿ ಕೆಲವು ರಾಜ್ಯಗಳಲ್ಲಿ 9 ರಿಂದ 12 ರವರೆಗೆ ಶಾಲೆಗಳನ್ನು ತೆರೆಯಲಾಗಿದೆ ಮತ್ತು ಕೆಲವು ರಾಜ್ಯಗಳು ನವೆಂಬರ್ನಿಂದ ಶಾಲೆಗಳನ್ನು ತೆರೆಯಲು ನಿರ್ಧರಿಸಿವೆ. ಪ್ರಾಥಮಿಕ ಶಾಲೆಗಳನ್ನು (Primary Schools) ತೆರೆಯುವ ಬಗ್ಗೆ ಇದುವರೆಗೆ ಯಾವುದೇ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ಆದರೆ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳನ್ನು ತೆರೆಯುವುದಾಗಿ ಆಂಧ್ರಪ್ರದೇಶ ಸರ್ಕಾರ ಪ್ರಕಟಿಸಿದೆ.
ಆಂಧ್ರಪ್ರದೇಶ (Andhra Pradesh) ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಐದು ತಿಂಗಳುಗಳಿಂದ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ. ಇದೀಗ ನವೆಂಬರ್ 2 ರಿಂದ ರಾಜ್ಯದ ಎಲ್ಲಾ ಶಾಲೆಗಳನ್ನು ತೆರೆಯಲು ವ್ಯವಸ್ಥೆ ಮಾಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅಧಿಕಾರಿಗಳು ಶಾಲೆಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರವು ಪ್ರಸ್ತುತ ಡಿಸೆಂಬರ್ ವರೆಗೆ ಶಾಲೆಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಕಚೇರಿಯಿಂದ ಪಡೆದ ಮಾಹಿತಿಯ ಪ್ರಕಾರ ನವೆಂಬರ್ 2 ರಿಂದ ರಾಜ್ಯದ ಎಲ್ಲಾ ಶಾಲೆಗಳನ್ನು ತೆರೆಯಲಾಗುವುದು. ಆರಂಭದಲ್ಲಿ ಅರ್ಧ ದಿನ ಶಾಲೆಗಳನ್ನು ತೆರೆಯಲಾಗುವುದು. ಶಾಲೆಯಲ್ಲಿ ಮಧ್ಯಾಹ್ನ ಊಟ ವಿತರಣೆಯ ನಂತರ ಮಕ್ಕಳನ್ನು ಮನೆಗೆ ಕಳುಹಿಸಲಾಗುತ್ತದೆ.
ಈ ಸಮಯದಲ್ಲಿ ಪರ್ಯಾಯ ವ್ಯವಸ್ಥೆಗಳ ಪ್ರಕಾರ ತರಗತಿಗಳನ್ನು ತೆರೆಯಲಾಗುತ್ತದೆ, ಅಂದರೆ ಪರ್ಯಾಯ ದಿನಗಳು ಪರ್ಯಾಯ ತರಗತಿಗಳಿಗೆ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಲಾಗಿದೆ.
ಹೊಸ ವ್ಯವಸ್ಥೆಯಲ್ಲಿ, 1, 3,5,7 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು ಒಂದು ದಿನ ಮತ್ತು 2, 4, 6 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಒಂದು ದಿನ ಶಾಲೆಗೆ ಬರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ.
750ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಗಳನ್ನು ವಾರದಲ್ಲಿ ಎರಡು ದಿನ ಮತ್ತು ಮಕ್ಕಳ ಸಂಖ್ಯೆ 750ಕ್ಕಿಂತ ಕಡಿಮೆ ಇರುವ ಶಾಲೆಗಳನ್ನು ವಾರದಲ್ಲಿ ಮೂರು ದಿನ ತೆರೆಯಲಾಗುವುದು.
ನವೆಂಬರ್ನಿಂದ ತೆರೆಯಲಿರುವ ಉತ್ತರಾಖಂಡ ಶಾಲೆಗಳು :
ಆಂಧ್ರಪ್ರದೇಶದ ಜೊತೆಗೆ ಉತ್ತರಾಖಂಡ ಸರ್ಕಾರ ಕೂಡ ತನ್ನ ಶಾಲೆಯನ್ನು ನವೆಂಬರ್ನಲ್ಲಿ ತೆರೆಯಲು ನಿರ್ಧರಿಸಿದೆ. ಆದರೆ ಪ್ರಸ್ತುತ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಘೋಷಿಸಿದೆ. ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಉತ್ತರಾಖಂಡ ಸರ್ಕಾರ ಸ್ಪಷ್ಟಪಡಿಸಿದೆ.
ಮತ್ತೊಂದೆಡೆ ಶಾಲೆಗಳ ಬಗ್ಗೆ ದೆಹಲಿ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯಕ್ಕೆ ಎಲ್ಲಾ ಶಾಲೆಗಳನ್ನು ಅಕ್ಟೋಬರ್ 31ರವರೆಗೆ ಮುಚ್ಚಲಾಗುತ್ತದೆ.