ಮುಂಬೈ: ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್ ಬುಧವಾರದಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವೊರಾ ಹಾಗೂ ಪಕ್ಷದ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ರಣದೀಪ್ ಸುರ್ಜೆವಾಲಾ ಅವರ ಉಪಸ್ಥಿತಿಯಲ್ಲಿ ನಟಿ ಉರ್ಮಿಳಾರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ಮಾತನಾಡಿದ ನಟಿ ಉರ್ಮಿಳಾ ಮಾತೋಂಡ್ಕರ್" ಪಕ್ಷಕ್ಕೆ ಬರ ಮಾಡಿಕೊಂಡಿರುವುದಕ್ಕೆ ನಾನು ಅಭಾರಿಯಾಗಿದ್ದೇನೆ.ಇಂದು ನನಗೆ ಮಹತ್ವದ ದಿನ ಏಕೆಂದರೆ ಮೊದಲ ಬಾರಿಗೆ ನಾನು ರಾಜಕೀಯ ಹೆಜ್ಜೆಯನ್ನು ಇಡುತ್ತಿದ್ದೇನೆ.ನನ್ನ ವ್ಯಕ್ತಿತ್ವ ಮತ್ತು ಚಿಂತನೆಗಳು ಮಹಾತ್ಮ ಗಾಂಧಿಯವರು, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ಅವರಿಂದ ಪ್ರಭಾವಿತಗೊಂಡಿದೆ " ಎಂದು ಅವರು ಹೇಳಿದರು.
ಇನ್ನು ಮುಂದುವರೆದು "ಸ್ವಾತಂತ್ರ್ಯದ ಮೌಲ್ಯಗಳನ್ನು ನಮ್ಮ ಸಂವಿಧಾನ ಮತ್ತು ನಮ್ಮ ಪ್ರಜಾಪ್ರಭುತ್ವ ಆಶಯಗಳನ್ನು ನಾನು ಯಾವಾಗಲೂ ಕಲಿಯುತ್ತಾ ಬಂದಿದ್ದೇನೆ ಎಂದು ಹೇಳಿದರು.