ಮರಾಠರಿಗೆ ನೀಡಿರುವ ಮೀಸಲಾತಿ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್

ಮರಾಠರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಇಂದು ಎತ್ತಿಹಿಡಿದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಆದಾಗ್ಯೂ ಸರ್ಕಾರವು ಉಲ್ಲೇಖಿಸಿದ ಶೇಕಡಾ 16 ರ ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿ, ಇದು ಸಮರ್ಥನೀಯ ಅಲ್ಲ ಎಂದು ಕೋರ್ಟ್ ಹೇಳಿದೆ.  

Last Updated : Jun 27, 2019, 04:16 PM IST
ಮರಾಠರಿಗೆ ನೀಡಿರುವ ಮೀಸಲಾತಿ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್  title=

ನವದೆಹಲಿ: ಮರಾಠರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಇಂದು ಎತ್ತಿಹಿಡಿದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಆದಾಗ್ಯೂ ಸರ್ಕಾರವು ಉಲ್ಲೇಖಿಸಿದ ಶೇಕಡಾ 16 ರ ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿ, ಇದು ಸಮರ್ಥನೀಯ ಅಲ್ಲ ಎಂದು ಕೋರ್ಟ್ ಹೇಳಿದೆ.  

ನ್ಯಾಯಮೂರ್ತಿಗಳಾದ ರಂಜಿತ್ ಮೋರ್ ಮತ್ತು ಭಾರತಿ ಡಂಗ್ರೆ ಅವರನ್ನೊಳಗೊಂಡ ವಿಭಾಗೀಯ ಪೀಠವು ಇಂತಹ  ಮೀಸಲಾತಿ ನೀಡುವುದರಿಂದಾಗಿ ಮರಾಠಾ ಸಮುದಾಯಕ್ಕೆ ಶಾಶ್ವತವಾಗಿ ಆಸರೆಯನ್ನು ಒದಗಿಸುತ್ತದೆ ಎಂದು ಹೇಳಿದೆ. ಈ ಕ್ರಮವು ಸುಪ್ರೀಂ ಕೋರ್ಟ್ ಕಾಯ್ದಿರಿಸುವಿಕೆಯ ಮೇಲೆ ನಿಗದಿಪಡಿಸಿದ ಶೇಕಡಾ 50 ರ ಮೀತಿಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ. 

ಮರಾಠರು ರಾಜ್ಯಾದ್ಯಂತ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಒತ್ತಡಕ್ಕೆ ಮಣಿದು ಮಹಾರಾಷ್ಟ್ರ ಸರ್ಕಾರ ಮರಾಠರಿಗೆ ಶೇ 16 ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿತ್ತು
 

Trending News