Road Accident: ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ಜಲಂಧರ್-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಸೋಮವಾರ (ಆಗಸ್ಟ್ 19) ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಈ ದುರ್ಘಟನೆಯಲ್ಲಿ ಕನಿಷ್ಠ 16 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ದಸುಯಾದಿಂದ ಜಲಂಧರ್ಗೆ ತೆರಳುತ್ತಿದ್ದ ಖಾಸಗಿ ಬಸ್ (Private Bus) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದ ಸಮಯದಲ್ಲಿ ಬಸ್ ನಲ್ಲಿ ಸುಮಾರು 42 ಪ್ರಯಾಣಿಕರಿದ್ದರು. ಇವರಲ್ಲಿ 16 ಜನರಿಗೆ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ- LPG Cylinder Insurance: ಗ್ಯಾಸ್ ಸಿಲಿಂಡರ್ನಲ್ಲಿ 50 ಲಕ್ಷದವರೆಗಿನ ಅಪಘಾತ ವಿಮೆ ಸೌಲಭ್ಯ, ಯಾವಾಗ, ಹೇಗೆ ಸಿಗುತ್ತೆ ಗೊತ್ತಾ?
ಈ ಕುರಿತಂತೆ ಪಂಜಾಬ್ ಪೊಲೀಸರು (Punjab Police) ಮಾಹಿತಿ ನೀಡಿದ್ದು, ಪವನ್ ಜಿಂಗ್ರಾನ್ ಗ್ರಾಮದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಬಸ್ ಪಲ್ಟಿಯಾಗಿ ರಸ್ತೆಯಿಂದಾಚೆ ಹೊಲಕ್ಕೆ ಬಿದ್ದಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ- Accident: ಕಾರಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳುತ್ತಿದ್ದ ವೇಳೆ ಫ್ಲೈ ಓವರ್ ನಿಂದ ನೆಲಕ್ಕೆ ಅಪ್ಪಳಿಸಿದ ಲಾರಿ
ಘಟನೆ ಸಂಬಂಧ ಮಾಹಿತಿ ಹಂಚಿಕೊಂಡಿರುವ ದಸುಯಾದ ಪೊಲೀಸ್ ಉಪ ಅಧೀಕ್ಷಕ ಜತೀಂದರ್ ಸಿಂಗ್, ಈ ಘಟನೆಯಲ್ಲಿ ಸಣ್ಣ-ಪುಟ್ಟ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. 26 ವರ್ಷದ ಪುರುಷ ಮತ್ತು 55 ವರ್ಷದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಅಮೃತಸರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.