ನವದೆಹಲಿ: ಉದ್ಯಮಿಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಂಸದ ಅತೀಕ್ ಅಹ್ಮದ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
2018 ರ ಡಿಸೆಂಬರ್ನಲ್ಲಿ ರಿಯಲ್ ಎಸ್ಟೇಟ್ ಡೀಲರ್ ಮೋಹಿತ್ ಜೈಸ್ವಾಲ್ ಅಪಹರಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಮಾಜಿ ಸಂಸದ ಅತೀಕ್ ಅಹ್ಮದ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಜೈಸ್ವಾಲ್ ಅವರನ್ನು ಲಖನೌದಿಂದ ಅಪಹರಿಸಿ ಡಿಯೋರಿಯಾ ಜೈಲಿಗೆ ಕರೆದೊಯ್ದು, ಅಲ್ಲಿ ಅಹ್ಮದ್ ಮತ್ತು ಆತನ ಸಹಚರರು ಹಲ್ಲೆ ನಡೆಸಿ ತನ್ನ ಎಲ್ಲಾ ವ್ಯವಹಾರಗಳನ್ನು ವರ್ಗಾಯಿಸುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.
ಉತ್ತರ ಪ್ರದೇಶದ ಫುಲ್ಪುರದಿಂದ 14ನೇ ಲೋಕಸಭೆಗೆ ಸಂಸದರಾಗಿ ಆಯ್ಕೆಯಾಗಿದ್ದ ಅತೀಕ್ ಅಹ್ಮದ್ 2004 ರಿಂದ 2009 ರ ವರೆಗೆ ಸಂಸದರಾಗಿದ್ದರು.