ನವದೆಹಲಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಚಂಡೀಗಡ-ಕೊಚ್ಚಿವಲ್ಲಿ ಎಕ್ಸ್ಪ್ರೆಸ್ ರೈಲಿನ ಪವರ್ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
A fire has broken out in rear power car of Chandigarh-Kochuveli Express at platform number. 8 of New Delhi Railway Station. Four fire tenders are present at the spot. All passengers have been evacuated safely. https://t.co/KWkKjrIHkU pic.twitter.com/AvqrfyQyda
— ANI (@ANI) September 6, 2019
"ಚಂಡೀಗಡ-ಕೊಚ್ಚಿವಲ್ಲಿ ಎಕ್ಸ್ಪ್ರೆಸ್ನ ಹಿಂಭಾಗದ ಪವರ್ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ" ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.
Fire which had broken out in rear power car of Chandigarh-Kochuveli Express at New Delhi Railway Station, has now been doused. pic.twitter.com/wv2JoL9cBf
— ANI (@ANI) September 6, 2019
ನವದೆಹಲಿ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 8 ರಲ್ಲಿ ಈ ಘಟನೆ ನಡೆದಿದೆ. ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಘಟನೆಯಲ್ಲಿ ಪವರ್ ಕಾರ್ ಸಂಪೂರ್ಣ ಸುಟ್ಟುಹೋಗಿದ್ದು, ಬೆಂಕಿ ಅನಾಹುತಕ್ಕೆ ಕಾರಣ ಪತ್ತೆಹಚ್ಚಲು ತಜ್ಞರು ಆಗಮಿಸಿದ್ದಾರೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ಪೊಲೀಸ್ ಉಪ ಆಯುಕ್ತ(ರೈಲ್ವೆ) ದಿನೇಶ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.